AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಉಸ್ತುವಾರಿ ಬಿಬಿಎಂಪಿಯಿಂದ..ಆರೋಗ್ಯ ಇಲಾಖೆಗೆ; ಡಿಸಿಎಂ ಅಶ್ವತ್ಥನಾರಾಯಣ್​ರಿಂದ ಮಹತ್ವದ ಪ್ರಸ್ತಾವನೆ

ನಾನು ಸಭೆಯಲ್ಲಿ ಪ್ರಸ್ತಾವನೆ ಇಟ್ಟ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು. ಸಚಿವರಾದ ಡಾ.ಸುಧಾಕರ್‌, ಸುರೇಶ್‌ ಕುಮಾರ್‌ ಹಾಗೂ ಉನ್ನತ ಅಧಿಕಾರಿಗಳಿಂದ ಈ ಪ್ರಸ್ತಾವನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು ಎಂದು ಡಿಸಿಎಂ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ಬೆಂಗಳೂರಿನ ಆರೋಗ್ಯ ವ್ಯವಸ್ಥೆ ಉಸ್ತುವಾರಿ ಬಿಬಿಎಂಪಿಯಿಂದ..ಆರೋಗ್ಯ ಇಲಾಖೆಗೆ; ಡಿಸಿಎಂ ಅಶ್ವತ್ಥನಾರಾಯಣ್​ರಿಂದ ಮಹತ್ವದ ಪ್ರಸ್ತಾವನೆ
ಡಿಸಿಎಂ ಅಶ್ವತ್ಥನಾರಾಯಣ
Lakshmi Hegde
|

Updated on:May 15, 2021 | 9:12 PM

Share

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಬೆನ್ನಲ್ಲೇ, ನಗರದ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ಆರೋಗ್ಯ ಇಲಾಖೆಗೆ ಹಸ್ತಾಂತರಿಸಬೇಕು ಎಂಬ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಇಟ್ಟಿದ್ದಾರೆ. ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಇಂದು ನಡೆದ ಕಾರ್ಯಪಡೆ ಸಭೆಯಲ್ಲಿ ಇದರ ಬಗ್ಗೆ ಸುದೀರ್ಘ ಚರ್ಚೆಯೂ ಆಗಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಡಾ.ಅಶ್ವತ್ಥನಾರಾಯಣ್ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ಅಲ್ಲದೆ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನೂ ನೀಡಿದ್ದಾರೆ. ಬೆಂಗಳೂರಿನಲ್ಲಿ ಒಂದೂವರೆ ಕೋಟಿಗೂ ಹೆಚ್ಚು ಜನರಿದ್ದಾರೆ. ಇಲ್ಲಿ ಕಟ್ಟೆಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಸಿಗಬೇಕು. ಹೀಗಾಗಬೇಕು ಎಂದರೆ ಇಲ್ಲಿನ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಸುಧಾರಿಸಬೇಕಾಗಿದ್ದು, ಆರೋಗ್ಯ ಇಲಾಖೆಗೆ ವಹಿಸುವ ಬಗ್ಗೆ ಚರ್ಚಿಸಲಾಗಿದೆ. ಅಷ್ಟೇ ಅಲ್ಲ, ಈ ಬಗ್ಗೆ ರಾಜ್ಯ ಕೊವಿಡ್ ಕಾರ್ಯಪಡೆಯು ತಜ್ಞರ ವರದಿ ಪಡೆಯಲು ನಿರ್ಧರಿಸಿದೆ ಎಂದು ಡಿಸಿಎಂ ತಿಳಿಸಿದರು.

ಇನ್ನು ಈ ಸಭೆಯಲ್ಲಿ ಒಂದಷ್ಟು ಪ್ರಸ್ತಾಪಗಳನ್ನು ಇಟ್ಟಿರುವುದಾಗಿ ತಿಳಿಸಿದ ಡಾ. ಅಶ್ವತ್ಥನಾರಾಯಣ್​, ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 100 ಹಾಸಿಗೆಗಳ ಸುಸಜ್ಜಿತ, ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳುಳ್ಳ ಸೆಕೆಂಡರಿ ಆಸ್ಪತ್ರೆಗಳನ್ನು ತೆರೆಯಬೇಕು. ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಒಂದರಂತೆ ಸೂಪರ್​ಸ್ಪೆಶಾಲಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಪ್ರಸ್ತಾಪವನ್ನೂ ಇಟ್ಟಿದ್ದಾಗಿ ತಿಳಿಸಿದರು.

ನಗರದಲ್ಲಿ ಮಧ್ಯಮ ಹಾಗೂ ಬಡವರಿಗೆ ಚಿಕಿತ್ಸೆ ಬಹಳ ದುಬಾರಿಯಾಗಿದೆ. ಇರುವ ಬೌರಿಂಗ್‌, ವಿಕ್ಟೋರಿಯಾ, ಕೆ.ಸಿ.ಜನರಲ್‌ ಆಸ್ಪತ್ರೆಗಳಲ್ಲಿ ಒತ್ತಡ ಹೆಚ್ಚಾಗಿದೆ. ಇನ್ನು ಸರ್ಕಾರದ ಉಸ್ತುವಾರಿಯಲ್ಲಿ ಅನೇಕ ಆಸ್ಪತ್ರೆಗಳಿವೆ. ಈ ಪೈಕಿ ಕೆಲವು ವೈದ್ಯ ಶಿಕ್ಷಣ ಇಲಾಖೆ, ಇನ್ನು ಕೆಲವು ಆರೋಗ್ಯ ಇಲಾಖೆ, ಮತ್ತೆ ಇನ್ನು ಕೆಲವು ಬಿಬಿಎಂಪಿ ಅಧೀನದಲ್ಲಿವೆ. ಹೀಗಾಗಿ ಸರಿಯಾದ ಸಮನ್ವಯತೆ ಇಲ್ಲ, ಹೊಂದಾಣಿಕೆ ಕಾಣುತ್ತಿಲ್ಲ. ಪರಿಣಾಮ ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಜನರಿಗೆ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸಲು ಈ ಎಲ್ಲ ಆಸ್ಪತ್ರೆಗಳನ್ನು ಒಟ್ಟಾರೆಯಾಗಿ ಆರೋಗ್ಯ ಇಲಾಖೆಯ ಅಧೀನಕ್ಕೆ ತಂದು ಅದಕ್ಕೊಂದು ಪ್ರತ್ಯೇಕ ವ್ಯವಸ್ಥೆ ಮಾಡುವುದು ಒಳ್ಳೆಯದು ಎಂದೂ ಸಭೆಯಲ್ಲಿ ಹೇಳಿದ್ದಾಗಿ ಮಾಹಿತಿ ನೀಡಿದರು. ಅಷ್ಟೇ ಅಲ್ಲ, ಇಡೀ ಬೆಂಗಳೂರಿನ ಆರೋಗ್ಯ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲು ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸಬೇಕು ಎಂದೂ ಅವರು ಹೇಳಿದ್ದಾರೆ.

ಸಭೆಯಲ್ಲಿ ಉತ್ತಮ ಪ್ರತಿಕ್ರಿಯೆ ಇನ್ನು ನಾನು ಸಭೆಯಲ್ಲಿ ಪ್ರಸ್ತಾವನೆ ಇಟ್ಟ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು. ಸಚಿವರಾದ ಡಾ.ಸುಧಾಕರ್‌, ಸುರೇಶ್‌ ಕುಮಾರ್‌ ಹಾಗೂ ಉನ್ನತ ಅಧಿಕಾರಿಗಳಿಂದ ಈ ಪ್ರಸ್ತಾವನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಬೆಂಗಳೂರು ನಗರದಲ್ಲಿ ಇಂಥ ವ್ಯವಸ್ಥೆ ಆಗಲೇಬೇಕು ಎಂದು ಇಬ್ಬರು ಸಚಿವರು ಪ್ರತಿಪಾದಿಸಿದರಲ್ಲದೆ, ಶೀಘ್ರದಲ್ಲಿಯೇ ಈ ಬಗ್ಗೆ ತಜ್ಞರ ವರದಿ ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂಬ ಮಾತನ್ನೂ ಆಡಿದರು ಎಂದು ಡಿಸಿಎಂ ಅಶ್ವತ್ಥನಾರಾಯಣ್​ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಬಿಬಿಎಂಪಿಗೆ ಇತರೆ ಕ್ಷೇತ್ರಗಳಲ್ಲಿ ಮಾಡಲು ಸಾಕಷ್ಟು ಕೆಲಸವಿದೆ. ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಗಮನ ಕೊಡುವುದು ಅದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾಂತ್ರಿಕ, ಆಡಳಿತಾತ್ಮಕ ಸೇರಿದಂತೆ ಎಲ್ಲ ಅಂಶಗಳ ಬಗ್ಗೆ ಅಧ್ಯಯನ ಮಾಡಿ ವರದಿ ಕೊಡುವಂತೆ ತಜ್ಞರನ್ನು ಕೋರಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದೂ ಹೇಳಿದರು.

ಇದನ್ನೂ ಓದಿ: ಅತಿ ಹೆಚ್ಚು ರೆಮ್​ಡೆಸಿವಿರ್ ಔಷಧ ಸಿಗುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ; ಡಿಸಿಎಂ ಅಶ್ವತ್ಥ ನಾರಾಯಣ

ಕೊಲೆ ಆರೋಪದಡಿ ಒಲಿಂಪಿಕ್ ಸ್ಟಾರ್ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್

ವಿಶ್ವದ ಯಾವುದೇ ಲೀಗ್ ಐಪಿಎಲ್ ಜೊತೆ ಸ್ಪರ್ಧಿಸಲು ಸಾಧ್ಯವಿಲ್ಲ; ಪಾಕ್ ಕ್ರಿಕೆಟಿಗ ವಹಾಬ್ ರಿಯಾಜ್

Bangalore Health System Should come under healthministry from BBMP Proposal By DCM Ashwath narayan

Published On - 9:11 pm, Sat, 15 May 21

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್