Bangalore News: ಶಾಲೆಗಳಿಂದ ಹೆಚ್ಚಾಗುತ್ತಿರುವ ಟ್ರಾಫಿಕ್; ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ

ಬೆಂಗಳೂರು ನಗರದಲ್ಲಿನ ಖಾಸಗಿ ಶಾಲೆಗಳ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಸೆಕ್ಯೂರಿಟಿ ಗಾರ್ಡ್​ಗಳನ್ನೇ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಿಯೋಜನೆ ಮಾಡಬೇಕು ಎಂದು ಪೊಲೀಸರು ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Bangalore News: ಶಾಲೆಗಳಿಂದ ಹೆಚ್ಚಾಗುತ್ತಿರುವ ಟ್ರಾಫಿಕ್; ವಾಹನ ದಟ್ಟಣೆ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆ
ಸಿಬ್ಬಂದಿಗಳಿಗೆ ತರಬೇತಿ
Follow us
TV9 Web
| Updated By: Rakesh Nayak Manchi

Updated on:Jul 21, 2022 | 7:47 AM

ಬೆಂಗಳೂರು: ಅತಿ ಹೆಚ್ಚು ವಾಹನ ಓಡಾಟ ಇರುವ ನಗರದಲ್ಲಿ ಇದೀಗ ಶಾಲಾ ಕಾಲೇಜುಗಳಿಂದಲೂ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಬಿಡಲು ಬರುವ ಪೋಷಕರು ವಾಹನಗಳನ್ನು ಮುಖ್ಯ ರಸ್ತೆಗಳಲ್ಲಿಯೇ ಪಾರ್ಕ್ ಮಾಡುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ. ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ನಗರ ಸಂಚಾರ ಪೊಲೀಸರು, ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶಾಲೆಗಳು ಸಿಬ್ಬಂದಿಗಳನ್ನು ನೇಮಿಸುವಂತೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಸರಿಯಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಹಿನ್ನೆಲೆ  ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ. ಈ ಸಮಸ್ಯೆ ಶಾಲಾ ಕಾಲೇಜುಗಳಿಂದಲೂ ಉದ್ಭವಿಸಲು ಆರಂಭವಾಗಿದೆ. ಶಾಲಾ ವಾಹನ ಸೇರಿದಂತೆ ಮಕ್ಕಳನ್ನು ಬಿಡಲು ಬರುವ ಪೋಷಕರು ವಾಹನಗಳನ್ನು ಮುಖ್ಯರಸ್ತೆಗಳಲ್ಲಿಯೇ ಪಾರ್ಕ್ ಮಾಡುತ್ತಿದ್ದಾರೆ. ಇದರಿಂದಾಗಿ ಇತರೆ ವಾಹನ ಸವಾರರಿಗೆ ಅಡಚಣೆ ಉಂಟಾಗುತ್ತಿದೆ. ಇದೇ ಕಾರಣಕ್ಕೆ ಪೊಲೀಸರು ಶಾಲೆಗಳಿಗೆ ನೋಟಿಸ್ ಜಾರಿ ಮಾಡಿದೆ.

ಶಾಲಾ ಕಾಲೇಜುಗಳು ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಟಿಸ್ ಜಾರಿ ಮಾಡಿದ ನಗರ ಪೊಲೀಸ್ ಇಲಾಖೆ, ಎಲ್ಲಾ ಶಾಲೆಗಳಿಗೆ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡುವುದು ಅಸಾಧ್ಯವಾಗಿರುವುದರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಶಾಲೆಗಳೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ವಾಹನ ದಟ್ಟಣೆ ನಿಯಂತ್ರಣಕ್ಕೆ ತರಲು ಶಾಲೆಗಳ ಸೆಕ್ಯೂರಿಟಿ ಗಾರ್ಡ್​ಗಳನ್ನೇ ನೇಮಿಸಬೇಕು. ಸಿಬ್ಬಂದಿಗಳಿಗೆ ತರಬೇತಿ ನೀಡಲು ಪೊಲೀಸ್ ಇಲಾಖೆ ಸಿದ್ಧವಿದೆ ಎಂದಿದೆ.

ಎಲ್ಲಾ ಶಾಲೆಗಳು ಈ ನಿಯಮವನ್ನು ಪಾಲಿಸಲೇಬೇಕು. ಶಾಲಾ ವಾಹನಗಳನ್ನು ಆಯಾ ಶಾಲೆಗಳ ಪಾರ್ಕಿಂಗ್ ಸ್ಥಳದಲ್ಲಿಯೇ  ಪಾರ್ಕ್ ಮಾಡಬೇಕು. ರಸ್ತೆಯಲ್ಲಿ ನಿಲ್ಲಿಸಬಾರದು. ಒಂದು ವೇಳೆ ಶಾಲಾ ವಾಹನಗಳನ್ನು ಮತ್ತು ಖಾಸಗಿ ವಾಹನಗಳನ್ನು ರಸ್ತೆ ಪಕ್ಕದಲ್ಲಿಯೇ ಪಾರ್ಕ್ ಮಾಡಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Published On - 7:39 am, Thu, 21 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್