ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!

ಹಾಸನದಿಂದ ಮಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯ 700 ಕೋಟಿ ರೂ. ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿ ಇನ್ನೂ ಅಪೂರ್ಣವಾಗಿದೆ. ಆದರೂ, ಆಲೂರು ತಾಲ್ಲೂಕಿನಲ್ಲಿ ಹೊಸ ಟೋಲ್ ಪ್ಲಾಜಾ ಆರಂಭಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರಿಂದ ಜನರ ಆಕ್ರೋಶ ಹೆಚ್ಚಾಗಿದ್ದು, ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹಕ್ಕೆ ವಿರೋಧ ವ್ಯಕ್ತವಾಗಿದೆ. ಸ್ಥಳೀಯರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!
ಬೈರಾಪುರ ಬಳಿಯ ಟೋಲ್ ಪ್ಲಾಜಾ
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: Dec 14, 2024 | 4:27 PM

ಹಾಸನ, ಡಿಸೆಂಬರ್ 14: ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆ ಬರೊಬ್ಬರಿ ಎರಡು ದಶಕಗಳಿಂದಲೂ ಅವ್ಯವಸ್ಥೆಯ ಆಗರವಾಗಿದೆ. ಈ ವರ್ಷ ಮಳೆಗಾಲದಲ್ಲಿ ಹಲವು ಕಡೆ ಭೂ ಕುಸಿತವಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಸ್ಥಳ ಪರಿಶೀಲನೆ ಮಾಡಿ ಹೋಗಿದ್ದರು. ಹಾಸನದಿಂದ ಮಾರನಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ ಕಾಮಗಾರಿ ಆರಂಭಗೊಂಡು 8 ವರ್ಷಗಳೇ ಕಳೆದಿವೆ. ಬರೊಬ್ಬರಿ 700 ಕೋಟಿ ರೂ. ವೆಚ್ಚದ ಯೋಜನೆ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಕಾಮಗಾರಿ ಮುಗಿಯುವ ಮುನ್ನವೇ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಯಾರಿ ನಡೆಸಿದ್ದು, ಜನರ ಆಕ್ರೊಶಕ್ಕೆ ಕಾರಣವಾಗಿದೆ. ಟೋಲ್ ಸಂಗ್ರಹಕ್ಕೆ ಮುಂದಾದರೆ ಹೋರಾಟ ನಡೆಸುವುದಾಗಿ ಸಾರ್ವಜನಿಕರು ಎಚ್ಚರಿಕೆ ನೀಡದ್ದಾರೆ.

ಎಲ್ಲಿದೆ ಹೊಸ ಟೋಲ್ ಪ್ಲಾಜಾ?

Bangalore Mangalore Highway: NHAI to start new toll plaza in Byrapura, Alur, Hassan from Dec 16th before cmpleting work

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೊಂದು ಟೋಲ್ ತಲೆ ಎತ್ತಿದೆ. ಸೋಮವಾರದಿಂದಲೇ (ಡಿಸೆಂಬರ್ 16) ಸುಂಕ ವಸೂಲಿ ಆರಂಭಿಸುವುದಾಗಿ ಹೆದ್ದಾರಿ ಪ್ರಾದಿಕಾರದ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸತತ ಏಳು ವರ್ಷಗಳಿಂದ ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಈವರೆಗೆ ಹಾಸನದಿಂದ ಸಕಲೇಶಪುರದ ವರೆಗೆ ಮಾತ್ರ ರಸ್ತೆ ಕಾಮಗಾರಿ ಮುಗಿದಿದೆ.

12 ಕಿಲೋ ಮೀಟರ್ ಕಾಮಗಾರಿ ಇನ್ನೂ ಮುಗಿದಿಲ್ಲ

ಸಕಲೇಶಪುರದಿಂದ ಮಾರನಹಳ್ಳಿವರೆಗಿನ 12 ಕಿಲೋಮೀಟರ್ ಕಾಮಗಾರಿ ಇನ್ನೂ ಆಗಿಲ್ಲ. ಜೊತೆಗೆ ಆಗಿರುವ ರಸ್ತೆ ಕಾಮಗಾರಿ ಕೂಡ ಅವೈಜ್ಞಾನಿಕ ಎಂಬ ಆರೋಪ ಕೇಳಿಬಂದಿದೆ. ಕೆಲವು ಕಡೆ ಫ್ಲೈ ಓವರ್, ಸರ್ವಿಸ್ ರಸ್ತೆ ಕಾಮಗಾರಿಯೂ ಆಗಿಲ್ಲ. ಇನ್ನು ಕೆಲವೆಡೆ ರಸ್ತೆ ಕುಸಿಯುವ ಆತಂಕ ಇದೆ. ಇಷ್ಟೆಲ್ಲ ಅಧ್ವಾನಗಳಿದ್ದರೂ ಸುಂಕ ವಸೂಲಿಗೆ ಹೆದ್ದಾರಿ ಪ್ರಾದಿಕಾರ ಅನುಮತಿ ನೀಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿಭಟನೆಯ ಎಚ್ಚರಿಕೆ ನೀಡಿದ ಸಾರ್ವಜನಿಕರು

ಸೋಮವಾರದಿಂದ ಸುಂಕ ವಸೂಲಿಗೆ ಚಾಲನೆ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸತೀಶ್ ಪಟೇಲ್ ಕೂಡ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ನಿಯಮ ಉಲ್ಲಂಘಿಸಿ ಟೋಲ್?

Bangalore Mangalore Highway: NHAI to start new toll plaza in Byrapura, Alur, Hassan from Dec 16th before cmpleting work

ಹಾಸನ ಜಿಲ್ಲೆಯ ಶಾಂತಿಗ್ರಾಮದ ಬಳಿ ಒಂದು ಟೋಲ್ ಈಗಾಗಲೇ ಇದೆ. ಕೇವಲ 35 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಟೋಲ್ ಮಾಡಲಾಗುತ್ತಿದೆ. ಎರಡು ಟೋಲ್​ಗಳ ನಡುವಿನ ಅಂತರ 60 ಕಿಲೋ ಮೀಟರ್ ಎಂದು ಕೇಂದ್ರ ಸಾರಿಗೆ ಸಚಿವರು ಹೇಳಿ ವರ್ಷಗಳೇ ಕಳೆದಿವೆ. ಆದರೂ ನಿಯಮ ಉಲ್ಲಂಘನೆ ಮಾಡಿ ಟೋಲ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಅಪ್ರಾಪ್ತನಿಗೆ ಬೈಕ್ ಓಡಿಸಲು ಕೊಟ್ಟಿದ್ದ ತಂದೆಗೆ 27,000 ರೂ. ದಂಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಟೋಲ್ ಪ್ಲಾಜಾ ಉದ್ಘಾಟನೆ ಸರಿಯಲ್ಲ. ಇನ್ನೂ ಪೂರ್ಣ ಕಾಮಗಾರಿ ಮುಗಿದಿಲ್ಲ. ಮಾಡಿರುವ ಕಾಮಗಾರಿಯೂ ಸರಿಯಿಲ್ಲ. ಈ ಬಗ್ಗೆ ಕೇಂದ್ರ ಸಚಿವರಿಗೂ ಪತ್ರ ಬರೆಯಲಾಗಿದೆ. ಅಧಿಕಾರಿಗಳಿಗೂ ಪತ್ರ ಬರೆಯಲಾಗಿದೆ. ಕಾಮಗಾರಿ ಮುಗಿಸಿ ಸುಂಕ ವಸೂಲಿ ಆರಂಬಿಸಿದರೆ ಸಮಸ್ಯೆ ಇಲ್ಲ. ಆದರೆ ಇಷ್ಟು ತುರ್ತಾಗಿ ಟೋಲ್ ಸಂಗ್ರಹ ಆರಂಭಿಸಬಾರದು ಎಂದು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ