ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

|

Updated on: Apr 21, 2021 | 1:36 PM

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೆಂದ್ರ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರದ ಮೆಟ್ರೋ ರೈಲು ಯೊಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ, 2ಬಿ ಹಂತಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
Follow us on

ಬೆಂಗಳೂರು: ನಗರದ ಮೆಟ್ರೋ ರೈಲು ಯೊಜನೆ 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತಂತೆ ರೈಲ್ವೇ ಸಚಿವ ಪಿಯೂಷ್ ಗೋಯಲ್​ ಟ್ವಿಟರ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ಒಟ್ಟಾರೆಯಾಗಿ 58.19 ಕಿಲೋಮೀಟರ್​ ಉದ್ದದ ಯೋಜನೆಗೆ ಒಟ್ಟು 14,788 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂಬುದನ್ನು ಪಿಯೂಷ್ ಗೋಯಲ್​ ಟ್ವೀಟ್​ ಮೂಲಕ ಹೇಳಿದ್ದಾರೆ.

2ಎ ಹಂತದ ಸೆಂಟ್ರಲ್ ಸಿಲ್ಕ್​ ಬೋರ್ಡ್​ ಜಂಕ್ಷನ್​ನಿಂದ ಕೆ.ಆರ್​.ಪುರಂವರೆಗೂ ಮತ್ತು 2ಬಿ ಹಂತದಲ್ಲಿ ಕೆ.ಆರ್​ಪುರಂನಿಂದ ಹೆಬ್ಬಾಳ ಜಂಕ್ಷನ್​ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ರೂಪಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೆಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಯೋಜನೆಯ ಅನುಷ್ಠಾನವು ಬೆಂಗಳೂರಿನಲ್ಲಿ ಮೆಟ್ರೋ ಮೂಲಕ ಪ್ರಯಾಣ ಕೈಗೊಳ್ಳುವವರಿಗೆ ಅನುಕೂಲವಾಗಲಿದೆ ಹಾಗೂ ಸಾರ್ವಜನಿಕರಿಗೆ ಅತ್ಯುತ್ತಮ ಸಾರಿಗೆ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ಆಗ್ರಾ ಮೆಟ್ರೊ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

(Bangalore Metro Rail Project phase 2a 2b Central Government approved says Railways minister Piyush Goyal)

Published On - 1:35 pm, Wed, 21 April 21