ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌; ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಅಪಘಾತಗಳ ತಡೆಗೆ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಲು ಮುಂದಾದ ಹೆದ್ದಾರಿ ಪ್ರಾಧಿಕಾರ. ಇಲ್ಲಿದೆ ಪೂರ್ಣ ವಿವರ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌; ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Ganapathi Sharma

Updated on:Jul 24, 2023 | 9:03 PM

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru Mysuru Expressway) ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಎಕ್ಸ್‌ಪ್ರೆಸ್‌ ವೇ‌ನಲ್ಲಿ ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.

ಯಾವೆಲ್ಲಾ ವಾಹನಗಳಿಗೆ ನಿಷೇಧ?

  • ಮೋಟರ್ ಸೈಕಲ್​​ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ)
  • ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ)
  • ಮೋಟಾರು ರಹಿತ ವಾಹನಗಳು
  • ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನಗಳು
  • ಕ್ವಾಡ್ರಿ ಚಕ್ರ ವಾಹನಗಳು

ವೇಗದ ಮಿತಿ 100 ಕಿಮೀ

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ ವೇನಲ್ಲಿ ಸಂಚರಿಸುವ ವಾನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್​ ವೇಗದ ಮಿತಿ ನಿಗದಿಪಡಿಸಲಾಗಿದೆ. ಈ ಕುರಿತೂ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

2000ಕ್ಕೂ ಹೆಚ್ಚು ವಾಹನಗಳ ಮಾಲೀಕರ ವಿರುದ್ಧ ಪ್ರಕರಣ

ಜುಲೈ ತಿಂಗಳಲ್ಲಿ 24ನೇ ತಾರೀಖಿನ ವರೆಗೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿವೇಗದ ಚಾಲನೆಗಾಗಿ (ಗಂಟೆಗೆ 100 ಕಿಮೀಗಿಂತ ಹೆಚ್ಚು ವೇಗದ ಚಾಲನೆ) 2,000 ಕ್ಕೂ ಹೆಚ್ಚು ವಾನಹಗಳ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಚಿಸಿದ ಸುರಕ್ಷತಾ ಸಮಿತಿಯು ಎಕ್ಸ್‌ಪ್ರೆಸ್‌ವೇ ಸುರಕ್ಷತೆಗೆ ಸಂಬಂಧಿಸಿದಂತೆ ವರದಿಯನ್ನು ಸಲ್ಲಿಸಿದೆ. ಏತನ್ಮಧ್ಯೆ, ಎಡಿಜಿಪಿ ಅಲೋಕ್ ಕುಮಾರ್ ಮಂಗಳವಾರ ಮತ್ತೊಮ್ಮೆ ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಲಿದ್ದಾರೆ. ಅಲೋಕ್ ಕುಮಾರ್ ಬಿಡದಿಯಿಂದ ಮೈಸೂರುವರೆಗಿನ ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಲಿದ್ದಾರೆ.

ಇದನ್ನೂ ಓದಿ: Bengaluru Mysuru expressway: ಪ್ರವೇಶ, ನಿರ್ಗಮನ ಜಾಗಗಳಲ್ಲಿ ದಟ್ಟಣೆ; ಪ್ರಯಾಣದ ಸಮಯ ಹೆಚ್ಚಳ

ಅಲೋಕ್ ಕುಮಾರ್ ಅವರು ಈ ಹಿಂದೆ ಜೂನ್‌ನಲ್ಲಿ ಎಕ್ಸ್​​​ಪ್ರೆಸ್​​​ ವೇ ಪರಿಶೀಲನೆ ನಡೆಸಿದ್ದರು. ನಂತರ ಎಕ್ಸ್‌ಪ್ರೆಸ್‌ವೇಯಲ್ಲಿ ವೇಗದ ಮಿತಿಯನ್ನು ಜಾರಿಗೆ ತರಲಾಗಿತ್ತು. ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಲ್ಲಿ ಅತಿವೇಗವು ಒಂದಾಗಿದೆ ಎಂದು ಅವರು ಹೇಳಿದ್ದರು.

ಮಾರ್ಚ್‌ನಲ್ಲಿ ಲೋಕಾರ್ಪಣೆಯಾದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ 570 ಕ್ಕೂ ಹೆಚ್ಚು ಅಪಘಾತಗಳು ವರದಿಯಾಗಿವೆ. ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 350 ಜನರು ಗಾಯಗೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:01 pm, Mon, 24 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ