Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ವೇಯಲ್ಲಿ ಮುಗಿಯದ ಗೋಳು; ತಂತಿ ಬೇಲಿ ಕಳವಾದಲ್ಲಿ ರಸ್ತೆಗೆ ನುಸುಳುತ್ತಿರುವ ಬೈಕ್ ಸವಾರರು

ವಿವಿಧ ಸ್ಥಳಗಳಲ್ಲಿ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಇರುವ ಬೇಲಿಗಳ ತಂತಿಯ ಕಳ್ಳತನವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತದೆ. ದುಷ್ಕರ್ಮಿಗಳು ಈ ತಂತಿ ಬೇಲಿಗಳನ್ನು ಕತ್ತರಿಸಿ ಲೋಹವನ್ನು ರದ್ದಿಗೆ ಮಾರಾಟ ಮಾಡುತ್ತಾರೆ. ಅನೇಕ ಸ್ಥಳಗಳಲ್ಲಿ ಈ ಸಮಸ್ಯೆಯಿಂದಾಗಿ ಎಕ್ಸ್‌ಪ್ರೆಸ್‌ವೇಗೆ ಪ್ರವೇಶಿಸಲು ದ್ವಿಚಕ್ರ ವಾಹನಗಳಿಗೆ ಅಮನುಕೂಲ ಮಾಡಿಕೊಟ್ಟಂತಾಗುತ್ತಿದೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​​ವೇಯಲ್ಲಿ ಮುಗಿಯದ ಗೋಳು; ತಂತಿ ಬೇಲಿ ಕಳವಾದಲ್ಲಿ ರಸ್ತೆಗೆ ನುಸುಳುತ್ತಿರುವ ಬೈಕ್ ಸವಾರರು
ಬೈಕ್ ಸವಾರರೊಬ್ಬರು ಎಕ್ಸ್​​ಪ್ರೆಸ್​ ವೇಗೆ ಅಕ್ರಮವಾಗಿ ನುಸುಳುತ್ತಿರುವುದು
Follow us
Ganapathi Sharma
|

Updated on:Aug 23, 2023 | 4:25 PM

ಬೆಂಗಳೂರು, ಆಗಸ್ಟ್ 23: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bangalore Mysore Expressway) ದ್ವಿಚಕ್ರ ವಾಹನ (Two Wheelers) ಸಂಚಾರಕ್ಕೆ ನಿರ್ಬಂಧವಿದ್ದರೂ ಹಲವೆಡೆ ಹೆದ್ದಾರಿ ತಡೆ ಬೇಲಿಗಳನ್ನು ಸರಿಸಿ ಸವಾರರು ನುಗ್ಗುವ ಪ್ರಕರಣಗಳು ಕಂಡುಬಂದಿವೆ. ಅಪಘಾತಗಳ ತಡೆಗೆ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ಇತರ ಕೆಲವು ಸಣ್ಣ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಆದಾಗ್ಯೂ ಇದೀಗ ಹೆದ್ದಾರಿ ಪ್ರಾಧಿಕಾರಕ್ಕೆ ಹಾಗೂ ಸಂಚರಿಸುವವರಿಗೆ ಹೊಸ ಸಮಸ್ಯೆ ತಲೆದೋರಿದೆ.

ಕೆಲವು ದ್ವಿಚಕ್ರ ವಾಹನ ಸವಾರರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಪ್ರಯಾಣಿಸಲು ಹೊಸ ವಿಧಾನವನ್ನು ಕಂಡುಹಿಡಿದಿದ್ದಾರೆ. ಸೇವಾ ರಸ್ತೆಗಳನ್ನು ಬಳಸಿಕೊಳ್ಳುವ ಮೂಲಕ ಅನಧಿಕೃತವಾಗಿ ಎಕ್ಸ್​ಪ್ರೆಸ್​​ ವೇ ಪ್ರವೇಶಿಸುತ್ತಿದ್ದಾರೆ. ಎಕ್ಸ್‌ಪ್ರೆಸ್‌ವೇಗೆ ಹಾಕಿರುವ ತಂತಿ ಬೇಲಿಯ ಕಳವಿನ ಸಮಸ್ಯೆ ಒಂದೆಡೆಯಾದರೆ, ತಂತಿ ಬೇಲಿ ಕಳವಾದ ಜಾಗದಲ್ಲಿರುವ ಅಂತರದ ಲಾಭವನ್ನು ಪಡೆದುಕೊಂಡು ದ್ವಿಚಕ್ರ ವಾಹನ ಸವಾರರು ಒಳನುಸುಳುತ್ತಾರೆ.

ವಿವಿಧ ಸ್ಥಳಗಳಲ್ಲಿ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಇರುವ ಬೇಲಿಗಳ ತಂತಿಯ ಕಳ್ಳತನವು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತದೆ. ದುಷ್ಕರ್ಮಿಗಳು ಈ ತಂತಿ ಬೇಲಿಗಳನ್ನು ಕತ್ತರಿಸಿ ಲೋಹವನ್ನು ರದ್ದಿಗೆ ಮಾರಾಟ ಮಾಡುತ್ತಾರೆ. ಅನೇಕ ಸ್ಥಳಗಳಲ್ಲಿ ಈ ಸಮಸ್ಯೆಯಿಂದಾಗಿ ಎಕ್ಸ್‌ಪ್ರೆಸ್‌ವೇಗೆ ಪ್ರವೇಶಿಸಲು ದ್ವಿಚಕ್ರ ವಾಹನಗಳಿಗೆ ಅಮನುಕೂಲ ಮಾಡಿಕೊಟ್ಟಂತಾಗುತ್ತಿದೆ.

ಇತ್ತೀಚಿನ ಘಟನೆಯೊಂದರಲ್ಲಿ, ದ್ವಿಚಕ್ರ ವಾಹನ ಸವಾರರು ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟುತ್ತಿರುವುದನ್ನು ಸಾರ್ವಜನಿಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವೀಡಿಯೊ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರ ಗಮನ ಸೆಳೆದಿದ್ದು, ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ‌; ದ್ವಿಚಕ್ರ, ತ್ರಿಚಕ್ರ ಸೇರಿ ಕೆಲವು ವಾಹನಗಳಿಗೆ ನಿಷೇಧ, ಇನ್ನೂ ಕೆಲವು ಕಠಿಣ ನಿಯಮ

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಆಗಸ್ಟ್ 1ರಿಂದ ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ಎಕ್ಸ್​​ಪ್ರೆಸ್ ವೇ ಬಳಕೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಿತ್ತು. ಮೋಟರ್ ಸೈಕಲ್​​ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ), ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ), ಮೋಟಾರು ರಹಿತ ವಾಹನಗಳು, ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ ಹೈಡ್ರಾಲಿಕ್ ವಾಹನಗಳು ಹಾಗೂ ಕ್ವಾಡ್ರಿ ಚಕ್ರ ವಾಹನಗಳಿಗೆ ಎಕ್ಸ್​​​​ಪ್ರೆಸ್​ವೇಯಲ್ಲಿ ನಿಷೇಧ ಹೇರಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 23 August 23

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್