Chamarajpet Ganeshotsav: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ ಮಾಡಿದ ನಾಗರಿಕರ ಒಕ್ಕೂಟ

Bangalore News: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ನಾಗರಿಕರ ಒಕ್ಕೂಟವು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

Chamarajpet Ganeshotsav: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ ಮಾಡಿದ ನಾಗರಿಕರ ಒಕ್ಕೂಟ
ಚಾಮರಾಜಪೇಟೆ ಮೈದಾನ ಮತ್ತು ಗಣೇಶ (ಸಂಗ್ರಹ ಚಿತ್ರ)
Follow us
TV9 Web
| Updated By: Rakesh Nayak Manchi

Updated on:Aug 23, 2022 | 1:30 PM

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ಗಣೇಶೋತ್ಸವ ಸಮಿತಿ ಮಧ್ಯೆ ಹಗ್ಗಜಗ್ಗಾಟ ನಡೆಯುತ್ತಿದೆ. ಈ ಹಿಂದಿನ ಈದ್ಗಾ ಮೈದಾನವನ್ನು ಮುಸ್ಲಿಮರ ಹಿಡಿತದಿಂದ ಬಿಡಿಸಿಕೊಳ್ಳಲು ಹೋರಾಡಿದ್ದು ನಾವು ಎಂದು ಪ್ರತಿಪಾದಿಸುತ್ತಿರುವ ನಾಗರಿಕ ಒಕ್ಕೂಟವು ವಿನಾಯಕ ಪ್ರತಿಷ್ಠಾಪನೆಯ ಅವಕಾಶ ತನಗೇ ಸಿಗಬೇಕು ಎಂದು ಪಟ್ಟು ಹಿಡಿದಿದೆ. ಇದರ ಮುಂದುವರಿದ ಭಾಗವೆಂಬಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ರೇಣುಕಾಚಾರ್ಯ ಅವರನ್ನು ಭೇಟಿಯಾದ ನಾಗರಿಕರ ಒಕ್ಕೂಟವು ಗಣೇಶ ಪ್ರತಿಷ್ಠಾಪನೆಗೆ ಹಾಗೂ 3 ದಿನ ಗಣೇಶೋತ್ಸವ ನಡೆಸಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದೆ.

ಮೈದಾನದಲ್ಲಿ ಗಣೇಶನನ್ನು ಕೂಡಿಸಲು ಅನುಮತಿ ನೀಡಬೇಕು ಎಂದು ಕೋರಿ ಹಿಂದುತ್ವಪರ ಸಂಘಟನೆಗಳು, ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ಗಣೇಶೋತ್ಸವ ಸಮಿತಿಯು ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದೆ. ಆದರೆ ಈ ಬಗ್ಗೆ ಕಂದಾಯ ಇಲಾಖೆ ಯಾವುದೇ ಹೇಳಿಕೆಯನ್ನು ಅಥವಾ ನಿರ್ಧಾರವನ್ನು ಪ್ರಕಟಿಸಿಲ್ಲ.

ಕಂದಾಯ ಇಲಾಖೆಯೇ ಗಣೇಶೋತ್ಸವ ನಡೆಸಬೇಕು. ಇಲ್ಲದಿದ್ದರೆ ಮುಜರಾಯಿ ಇಲಾಖೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಬೇಕು. ಈ ಎರಡೂ ಸಾಧ್ಯವಿಲ್ಲ ಎಂದಾದರೆ ಚಾಮರಾಜಪೇಟೆ ನಾಗರಿಕರ ಒಕ್ಕೂಟಕ್ಕೆ ಅನುಮತಿ ಕೊಡಬೇಕು. ನಮ್ಮೊಂದಿಗೆ ಎಲ್ಲ ಸಂಘಟನೆಗಳು‌ ಸೇರಿ ಗಣೇಶೋತ್ಸವ ಆಚರಿಸುತ್ತೇವೆ ಎಂದು ಒಕ್ಕೂಟವು ಹೇಳುತ್ತದೆ. ಅವಕಾಶ ಸಿಕ್ಕಿದರೆ 3 ದಿನ ಗಣೇಶೋತ್ಸವವನ್ನು ಆಚರಿಸಲಾಗುವುದು, ಮೊದಲ‌ ದಿನ ಪ್ರತಿಷ್ಠಾಪನೆ ಮತ್ತು ಪೂಜಾ ವಿಧಿಗಳನ್ನು ನಡೆಸಲಾಗುವುದು. ಎರಡನೇ ದಿನ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮೂರನೇ ದಿನ ಚಾಮರಾಜಪೇಟೆ ಸುತ್ತಮುತ್ತ ಅದ್ದೂರಿ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಇನ್ನೊಂದೆಡೆ ಬೆಂಗಳೂರು ಗಣೇಶೋತ್ಸವ ಸಮಿತಿಯೂ ಇದೇ ರೀತಿಯ ಮನವಿಯನ್ನು ಮಾಡುತ್ತಿದ್ದು, 10 ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಹಾಗೂ 11ನೇ ದಿನ ಚಾಮರಾಜಪೇಟೆಯ ಗಲ್ಲಿಗಲ್ಲಿಗಳಲ್ಲಿ ಅದ್ದೂರಿ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಆದರೆ ಇದಕ್ಕೆ ಒಕ್ಕೂಟವು ವಿರೋಧ ವ್ಯಕ್ತಪಡಿಸುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Tue, 23 August 22

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ