AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore News: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ, ಈ ಬಾರಿ ಸಾರ್ವಜನಿಕರಿಗೂ ಎಂಟ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಹಲವೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಕೊಂಚ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮನವಿ ಮಾಡಿದ್ದಾರೆ.

Bangalore News: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ, ಈ ಬಾರಿ ಸಾರ್ವಜನಿಕರಿಗೂ ಎಂಟ್ರಿ
ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಜಂಟಿ ಸುದ್ದಿಗೋಷ್ಠಿ
TV9 Web
| Updated By: Rakesh Nayak Manchi|

Updated on:Aug 13, 2022 | 11:45 AM

Share

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯದಲ್ಲೂ ವಿಜ್ರಂಭಣೆಯಿಂದ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಲಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೂ ಪ್ರವೇಶ ನೀಡಲಾಗುತ್ತಿದ್ದು, ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯದ ಅಮೃತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ 8:55 ಕ್ಕೆ ಅಗಮಿಸಲಿದ್ದಾರೆ. 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ನಂತರ 12ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾರ್ವಜನಿಕರಿಗೂ ವ್ಯವಸ್ಥೆ ಮಾಡಲಾಗುತ್ತಿದ್ದು, ಎಂಟು ಸಾವಿರ ಆಮಂತ್ರಣ ಪತ್ರಿಕೆ ನೀಡಲಾಗುತ್ತಿದೆ. ಒಂದು ಭಾಗದಿಂದ ಪ್ರವೇಶ ನೀಡಲಾಗುತ್ತದೆ ಎಂದರು.

ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾತನಾಡಿ, ಆಗಸ್ಟ್ 15ರಂದು ನಗರದ ಹಲವೆಡೆ ಸ್ವಾತಂತ್ರ್ಯ ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿರುವ ಹಿನ್ನೆಲೆ ಕೊಂಚಮಟ್ಟಿಗೆ ಟ್ರಾಫಿಕ್ ಸಮಸ್ಯೆ ಆಗಬಹುದು.  ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದರು.

ಎರಡು ವರ್ಷಗಳ ನಂತರ ಸಾರ್ವಜನಿರಿಗೆ ಕಾರ್ಯಕ್ರಮದ ಆಮಂತ್ರಣ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ 1,700 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ. ಭದ್ರತಾ ಕಾರ್ಯದಲ್ಲಿ ಒಂಬತ್ತು ಡಿಸಿಪಿ, 15 ಎಸಿಪಿ, 44 ಮಂದಿ ಇನ್ಸ್ಪೆಕ್ಟರ್​ಗಳು, 96 ಪಿಎಸ್​ಐ, 14 ಮಹಿಳಾ ಪಿಎಸ್​ಐ, 77 ಮಂದಿ ಎಎಸ್​ಐ ಮತ್ತು 800 ಸಿಬ್ಬಂದಿಗಳು, 10 ಕೆಎಸ್​ಆರ್​​ಪಿ ತುಕಡಿಗಳು ತೊಡಗಿಕೊಳ್ಳಲಿವೆ. ಇದರ ಜೊತೆಗೆ ಸನೂರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದರು.

ಈದ್ಗಾ ಮೈದಾನಕ್ಕೆ ಭದ್ರತೆ

ವಿವಾದಿತ ಸ್ಥಳ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲೂ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಒದಲಾಗಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲಾಗುತ್ತಿರುವ ಹಿನ್ನೆಲೆ ಭದ್ರತೆ ನೀಡಲಾಗುತ್ತದೆ. ಅಗತ್ಯ ಇದ್ದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗುತ್ತದೆ ಎಂದರು.

ಭದ್ರತಾ ಪಡೆಯಿಂದ ತಾಲೀಮು

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆ.15ರಂದು ಸೇನೆಯಿಂದ ವಿಶೇಷ ಪ್ಯಾರಚೂಟ್ ಪ್ರದರ್ಶನ ನಡೆಯಲಿದೆ. ಈ ನಿಟ್ಟಿನಲ್ಲಿ ಇಂದು ಸೇನಾ ಸಿಬ್ಬಂದಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪ್ಯಾರಚೂಟ್ ತಾಲೀಮು ನಡೆಸಿದರು. ವಿಡಿಯೋ ಇಲ್ಲಿದೆ:

Published On - 11:44 am, Sat, 13 August 22