ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Bangalore News: ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟ ಮಹಿಳೆಯೊಬ್ಬರು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಚ್ಎಎಲ್ನ ವಿಭೂತಿಪುರದಲ್ಲಿ ನಡೆದಿದೆ.
ಬೆಂಗಳೂರು: ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟ ಮಹಿಳೆಯೊಬ್ಬರು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಚ್ಎಎಲ್ನ ವಿಭೂತಿಪುರದಲ್ಲಿ ನಡೆದಿದೆ. ಮೂರು ವರ್ಷದ ಸಂಯುಕ್ತಾ ತಾಯಿಯಿಂದ ಕೊಲೆಯಾದವಳು. ಘಟನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯತ್ರಿಯನ್ನು ಪತಿ ನರೇಂದ್ರ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಂಪತಿಗಳು ತಮಿಳುನಾಡಿನ ಮೂಲದವರಾಗಿದ್ದು, ಘಟನೆ ಸಂಬಂಧ ಎಚ್ಎಎಲ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರೇಂದ್ರ ಹಾಗೂ ಗಾಯತ್ರಿ ದಂಪತಿ ಎಚ್ಎಎಲ್ನ ವಿಭೂತಿಪುರದಲ್ಲಿ ನೆಲೆಸಿ ಜೀವನ ಸಾಗಿಸುತ್ತಿದ್ದರು. ಇಪ್ಪತ್ತು ದಿನಗಳಲ್ಲಿ ಹಿಂದೆ ನೇರಂದ್ರ ತಾಯಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಆಘಾತದಲ್ಲಿದ್ದ ನರೇಂದ್ರ ಅವರಿಗೆ ಇದೀಗ ಮಗುವನ್ನು ಕಳೆದುಕೊಂಡು ದುಃಖತಪ್ತರಾಗಿದ್ದಾರೆ.
ನಿನ್ನೆಯಷ್ಟೇ ತಮಿಳುನಾಡಿನಿಂದ ಬೆಂಗಳೂರಿಗೆ ನರೇಂದ್ರ ಅವರು ಹಿಂದಿರುಗಿದ್ದರು. ಬೆಳಗ್ಗೆ ಮನೆ ಬಾಗಿಲು ತಟ್ಟಿದಾಗ ಪತ್ನಿ ಗಾಯತ್ರಿ ಬಾಗಿಲು ತೆಗೆಯಲಿಲ್ಲ. ಎಷ್ಟು ಕರೆದರೂ ಬಾಗಿಗಲು ತೆರೆಯದ್ದನ್ನು ಅನುಮಾನಿಸಿದ ನರೇಂದ್ರ ಅವರು ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಪತ್ನಿ ನೇಣು ಬಿಗಿದುಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ಇನ್ನೊಂದೆಡೆ ಮಗುವನ್ನು ನೀರು ತುಂಬಿದ ಟಬ್ನಲ್ಲಿ ಮುಳುಗಿಸಿ ಹತ್ಯೆ ಮಾಡಲಾಗಿದೆ.
ಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಪತ್ನಿಯನ್ನು ನರೇಂದ್ರ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಇದರಲ್ಲಿ “ಬಂದಿರುವ ಕಷ್ಟಗಳನ್ನು ನಿಭಾಯಿಸುವ ಶಕ್ತಿ ಇಲ್ಲ, ತನ್ನ ಸಾವಿನ ನಂತರ ಮಗು ನೋಡಿಕೊಳ್ಳಲು ಯಾರೂ ಇಲ್ಲ, ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆಯಲಾಗಿದೆ.
ಆತ್ಮಹತ್ಯೆ ಸಹಾಯವಾಣಿ
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821 ಅಥವಾ https://icallhelpline.org/ ವೆಬ್ಸೈಟ್ಗೆ ಭೇಟಿ ಕೊಡಿ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:16 am, Tue, 23 August 22