ಬೆಂಗಳೂರು: ನಗರದ ಹಲವೆಡೆ ವಿದ್ಯುತ್ ತಂತಿಗಳ ಬದಲಾವಣೆ ಹಾಗೂ ನೆಲ ಮಾರ್ಗದ ಮೂಲಕ ವಿದ್ಯುತ್ ಕೇಬಲ್ಗಳನ್ನು ಹಾಕುವ ಕೆಲಸ ಕಾರ್ಯಗಳನ್ನು ಬೆಸ್ಕಾಂ ಕೈಗೆತ್ತಿಕೊಂಡಿದ್ದು, ಇದರಿಂದಾಗಿ ನಿತ್ಯವೂ ಒಂದಷ್ಟು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಕೆಲವು ದಿನಗಳಿಂದ ನಗರವಾಸಿಗಳು ಪವರ್ ಕಟ್ ಸಮಸ್ಯೆ ಎದುರಿಸುತ್ತಿದ್ದು, ಇದೀಗ ಆಗಸ್ಟ್ 10ರಿಂದ 13ರ ವರೆಗೆ ಕೆಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ. ಹಾಗಿದ್ದರೆ ಯಾವಾಗ ಎಲ್ಲೆಲ್ಲಿ ಎಷ್ಟು ಹೊತ್ತು ಪವರ್ ಕಟ್ ಆಗಲಿದೆ? ಇಲ್ಲಿದೆ ಮಾಹಿತಿ
ಆಗಸ್ಟ್ 10ರಂದು ಜಕ್ಕಸಂದ್ರ, ಎಚ್‌ಎಸ್‌ಆರ್ 5 ನೇ ಸೆಕ್ಟರ್, ಟೀಚರ್ಸ್ ಕಾಲೋನಿ, ವೆಂಕಟಾಪುರದ ಕೆಲವು ಭಾಗಗಳು, ಸಾಲರ್‌ಪುರಿಯ ಗ್ರೀನೇಜ್ ಅಪಾರ್ಟ್‌ಮೆಂಟ್‌ಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ತಂತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆಗಸ್ಟ್ 11 ರಿಂದ ಆಗಸ್ಟ್ 13ರವರೆಗೆ ಎಲೆಕ್ಟ್ರಾನಿಕ್ಸ್ ಸಿಟಿ ಹಂತ 2, ವೀರಸಂದ್ರ , ಅನಂತ ನಗರ, ದೊಡ್ಡನಾಗಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:38 am, Tue, 9 August 22