AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ

ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ನಗರದ ಹಲವು ಪಬ್ ಹಾಗೂ ರೆಸ್ಟೋರೆಂಟ್​ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ
ಪಬ್​​, ರೆಸ್ಟೋರೆಂಟ್​ಗಳ ಮೇಲೆ ಬೆಂಗಳೂರು ಪೊಲೀಸರ ದಾಳಿ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Oct 02, 2022 | 6:42 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಮ ಮೀರಿ ಅತಿಯಾದ ಡಿಜೆ ಶಬ್ಧ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪ ಸಂಬಂಧ ಹಲವು ಪಬ್ ಹಾಗೂ ರೆಸ್ಟೋರೆಂಟ್ (Pub And Restaurants) ​ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಕಂಡುಬಂದಿರುವುದು ತಿಳಿದುಬಂದ ಹಿನ್ನೆಲೆ ಅಂತಹ ಪಬ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಗರದಲ್ಲಿ ಮೋಜು ಮಸ್ತಿ ಇದ್ದಿದ್ದೆ. ಆದರೆ ನಿಯಮ ಮೀರಿ ಯಾರೇ ಮೋಜು ಮಸ್ತಿ ಮಾಡಿದರೂ ಅದು ಅಪರಾಧವಾಗಿದೆ. ಹೀಗಾಗಿ ಇಂತಹ ಪಬ್ ಮತ್ತು ರೆಸ್ಟೋರೆಂಟ್​ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಪಬ್​​ಗಳಲ್ಲಿ ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ಪಬ್​​ಗೆ ಪ್ರವೇಶ, ಮದ್ಯ ಸೇವನೆ ಆರೋಪ ಹಿನ್ನೆಲೆ ಬೋ ಟೈ, ಇಕಿಗೈ, ಸ್ಕೈ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಅದರಂತೆ ನಿಯಮ ಉಲ್ಲಂಘಿಸಿರುವ ಪಬ್​ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್​​ ಠಾಣೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 am, Sun, 2 October 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ