ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಮ ಮೀರಿ ಅತಿಯಾದ ಡಿಜೆ ಶಬ್ಧ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪ ಸಂಬಂಧ ಹಲವು ಪಬ್ ಹಾಗೂ ರೆಸ್ಟೋರೆಂಟ್ (Pub And Restaurants) ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಕಂಡುಬಂದಿರುವುದು ತಿಳಿದುಬಂದ ಹಿನ್ನೆಲೆ ಅಂತಹ ಪಬ್ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಗರದಲ್ಲಿ ಮೋಜು ಮಸ್ತಿ ಇದ್ದಿದ್ದೆ. ಆದರೆ ನಿಯಮ ಮೀರಿ ಯಾರೇ ಮೋಜು ಮಸ್ತಿ ಮಾಡಿದರೂ ಅದು ಅಪರಾಧವಾಗಿದೆ. ಹೀಗಾಗಿ ಇಂತಹ ಪಬ್ ಮತ್ತು ರೆಸ್ಟೋರೆಂಟ್ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಪಬ್ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ಪಬ್ಗೆ ಪ್ರವೇಶ, ಮದ್ಯ ಸೇವನೆ ಆರೋಪ ಹಿನ್ನೆಲೆ ಬೋ ಟೈ, ಇಕಿಗೈ, ಸ್ಕೈ ಬಾರ್ಗಳ ಮೇಲೆ ಪೊಲೀಸರಿಂದ ದಾಳಿ ನಡೆಸಿದ್ದಾರೆ.
ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಅದರಂತೆ ನಿಯಮ ಉಲ್ಲಂಘಿಸಿರುವ ಪಬ್ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:42 am, Sun, 2 October 22