ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ವರ್ಷಗಳ ಕಾಲ ನಡೆದ ಪ್ರತಿಭಟನೆಯಲ್ಲಿ ರಾಕೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: ಗಾಂಧಿ ಭವನದಲ್ಲಿ ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿದ್ದ ಆರೋಪಿಗಳ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು 450 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಹಿಂದುತ್ವ ಸಂಘಟನೆಯ ಕಾರ್ಯಕರ್ತ ಭರತ್ ಶೆಟ್ಟಿ, ಆತನ ಸಹಚರರಾದ ಶಿವಕುಮಾರ್, ಪ್ರದೀಪ್ ಕುಮಾರ್ ಮತ್ತು ಉಮಾದೇವಿ ಸೇರಿದಂತೆ ಬಂಧಿತರ ವಿರುದ್ಧ ಜಾರ್ಜ್ಶೀಟ್ ಸಲ್ಲಿಸಲಾಗಿದೆ. 20 ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ 89 ಜನರ ಸಾಕ್ಷಿಗಳನ್ನು 8ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ACMM) ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಉನ್ನತ ಅಧಿಕಾರಿಗಳ ಗಮನ ಸೆಳೆಯುವುದು ದಾಳಿಯ ಪ್ರಾಥಮಿಕ ಗುರಿಯಾಗಿದೆ ಎಂದು ಆರೋಪಿಗಳು ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಫೇಮಸ್ ಆಗುವ ಉದ್ದೇಶದಿಂದ ಟಿಕಾಯತ್ ಮೇಲೆ ಮಸಿ ಎರಚಿರುವುದಾಗಿ ಒಪ್ಪಿಕೊಂಡಿರುವ ಪ್ರಮುಖ ಆರೋಪಿ ಭರತ್ ಶೆಟ್ಟಿಯ ಆಡಿಯೋವನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಮೇ 30ರಂದು ಗಾಂಧಿ ಭವನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ರಾಕೇಶ್ ಟಿಕಾಯತ್ ಆಗಮಿಸಿದ್ದರು. ಇದನ್ನು ತಿಳಿದ ಆರೋಪಿಗಳು, ರಾಕೇಶ್ ಟಿಕಾಯತ್ಗೆ ಮೊಟ್ಟೆಯಿಂದ ಹೊಡೆಯಲು ಉದ್ದೇಶಿಸಿದ್ದರು. ಆದರೆ ಮೊಟ್ಟೆಗಳನ್ನು ಸ್ಥಳಕ್ಕೆ ಕೊಂಡೊಯ್ಯುವುದು ಸವಾಲಿನ ಸಂಗತಿ ಎಂದು ತಿಳಿದ ಆರೋಪಿಗಳು, ಮಸಿ ಬಳಿಯಲು ನಿರ್ಧರಿಸಿದ್ದಾರೆ. ಅದರಂತೆ ಗಾಂಧಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ನುಗ್ಗಿ ಮಸಿ ಬಳಿದಿದ್ದಾರೆ. ಕಪ್ಪು ಬಣ್ಣ ಬಳಿಯುವ ಮುನ್ನ ಸುದ್ದಿ ವಾಹಿನಿಯ ಮೈಕ್ರೊಫೋನ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ಟಿಕಾಯತ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಪೊಲೀಸ್ ದಾಳಿಯ ಸಂದರ್ಭದಲ್ಲಿ ಉಮಾದೇವಿ ಅವರ ಮನೆಯಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕೊಲೆ ಆರೋಪದಲ್ಲಿ ಶಿವಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಆತನ ಉತ್ತಮ ನಡವಳಿಕೆಗಾಗಿ 2015 ರಲ್ಲಿ ಬಿಡುಗಡೆ ಮಾಡಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ವರ್ಷಗಳ ಕಾಲ ನಡೆದ ಪ್ರತಿಭಟನೆಯಲ್ಲಿ ರಾಕೇಶ್ ಟಿಕಾಯತ್ ಪ್ರಮುಖ ಪಾತ್ರ ವಹಿಸಿದ್ದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:57 pm, Thu, 11 August 22