ಬೆಂಗಳೂರು, ಸೆಪ್ಟೆಂಬರ್ 25: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಿದೆ (Rain). ಇಂದು ಬೆಳಿಗ್ಗೆಯಿಂದಲೇ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಸಂಜೆ ವೇಳೆಗೆ ರಿಚ್ಮಂಡ್ ಟೌನ್, ಶಾಂತಿನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆ ಆಗಿದ್ದು, ಸಿಲಿಕಾನ್ ಸಿಟಿಯಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.
ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ಅಲರ್ಟ್ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. IMD ಯಿಂದ – #ಆರೆಂಜ್ಅಲರ್ಟ್ ನೀಡಲಾಗಿದೆ, , ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. pic.twitter.com/72ovMyGRcX— Karnataka State Natural Disaster Monitoring Centre (@KarnatakaSNDMC) September 25, 2024
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ
ಬೆಂಗಳೂರು ಮಾತ್ರವಲ್ಲದೇ ಕೆಲ ಜಿಲ್ಲೆಗಳಲ್ಲೂ ಮಳೆ ಸುರಿದಿದೆ. ದಾವಣಗೆರೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಆಗಿದೆ. ಬಹುದಿನಗಳ ಬಳಿಕ ಸುರಿದ ಮಳೆಗೆ ಬೆಣ್ಣೆ ನಗರಿ ದಾವಣಗೆರೆ ಜನರು ಖುಷ್ ಆಗಿದ್ದಾರೆ. ದಾವಣಗೆರೆ ನಗರದ ಎವಿಕೆ ಕಾಲೇಜ್ ರಸ್ತೆ, ಹಳೇ ಪಿಬಿ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಆಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:23 pm, Wed, 25 September 24