Bengaluru Rain: ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಜೋರು ಮಳೆ

Bangalore Rain Updates: ಇಂದಿನಿಂದ ಆರಂಭವಾಗಲಿರುವ ವಾರಾಂತ್ಯ ಕರ್ಫ್ಯೂವಿಗೆ ಮಳೆರಾಯ ಸ್ವಾಗತ ಕೋರಿದಂತೆ ಕಾಣುತ್ತಿದೆ. ಕರ್ಫ್ಯೂವಿನಿಂದ ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದ ಜನರಿಗೆ ಮಳೆ ಎದುರಾಗಿದೆ. ವಾರಾಂತ್ಯದ ಕರ್ಫ್ಯೂ ಇಂದಿನಿಂದ ಆರಂಭವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಬೆಂಗಳೂರಿನಿಂದ ನೂರಾರು ಜನರು ತೆರಳುತ್ತಿದ್ದರು.

Bengaluru Rain: ಬೆಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಜೋರು ಮಳೆ
ಮಳೆ (ಸಾಂಕೇತಿಕ ಚಿತ್ರ)
Follow us
guruganesh bhat
|

Updated on:Apr 23, 2021 | 7:18 PM

ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಬೆಂಗಳೂರು ನಗರದ ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಬಸವನಗುಡಿ, ಮಲ್ಲೇಶ್ವರಂ, ಗುಟ್ಟಹಳ್ಳಿ, ಕಾರ್ಪೊರೇಷನ್ ಸರ್ಕಲ್​​, ರಿಚ್ಮಂಡ್ ಸರ್ಕಲ್, ಕೆಂಗೇರಿ, ಬನಶಂಕರಿ 3ನೇ ಹಂತ, ಜಯನಗರ, ಗಿರಿನಗರ, ಜೆ. ಪಿ ನಗರ 6ನೇ ಹಂತ, ಇಂದಿರಾ ನಗರ, ಬಸವೇಶ್ವರ ನಗರ ಚಾಲುಕ್ಯ ಸರ್ಕಲ್, ವಿಧಾನಸೌಧ, ಶಾಂತಿನಗರ, ಎಲೆಕ್ಟ್ರಾನಿಕ್​ ಸಿಟಿ, ಜೆ.ಪಿ.ನಗರ, ಶ್ರೀನಗರ, ಕೋರಮಂಗಲ, ಎಂ.ಜಿ ರೋಡ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನ ಪ್ರಸ್ತುತ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇದೆ.

ಕೋಲಾರ ಜಿಲ್ಲೆಯಲ್ಲಿಯೂ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಹಲವು ಮರಗಳು, ವಿದ್ಯುತ್​ ಕಂಬಗಳು ಧರೆಗುರುಳಿವೆ. ಕೆಜಿಎಫ್​ನ ಗೌತಮ್ ನಗರ, ರಾಬರ್ಟ್​​ಸನ್​​ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಮರ ಬಿದ್ದು ದ್ವಿಚಕ್ರವಾಹನಗಳು ಹಾಗೂ ಆಟೋಗಳು ಜಖಂಗೊಂಡಿವೆ. ಭಾರಿ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ದೊಡ್ಡಬಳ್ಳಾಪುರದಲ್ಲಿ ಗುಡುಗು ಮಿಂಚು, ಮಳೆ ಬರುವ ವಾತಾವರಣ ಸೃಷ್ಟಿಯಾಗಿದೆ. ನಿನ್ನೆ ಮತ್ತು ಮೊನ್ನೆ ಉತ್ತಮ ಮಳೆಯಾಗಿತ್ತು. ಇಂದು ರಾತ್ರಿಯೂ ಮಳೆ ಬರುವ ನಿರೀಕ್ಷೆಯಲ್ಲಿ ದೊಡ್ಡಬಳ್ಳಾಪುರದ ಜನರಿದ್ದಾರೆ.

ಇಂದಿನಿಂದ ಆರಂಭವಾಗಲಿರುವ ವಾರಾಂತ್ಯ ಕರ್ಫ್ಯೂವಿಗೆ ಮಳೆರಾಯ ಸ್ವಾಗತ ಕೋರಿದಂತೆ ಕಾಣುತ್ತಿದೆ. ಕರ್ಫ್ಯೂವಿನಿಂದ ತಮ್ಮ ಸ್ವಂತ ಊರುಗಳಿಗೆ ತೆರಳುತ್ತಿದ್ದ ಜನರಿಗೆ ಮಳೆ ಎದುರಾಗಿದೆ. ವಾರಾಂತ್ಯದ ಕರ್ಫ್ಯೂ ಇಂದಿನಿಂದ ಆರಂಭವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಬೆಂಗಳೂರಿನಿಂದ ನೂರಾರು ಜನರು ತೆರಳುತ್ತಿದ್ದರು. ಹೀಗಾಗಿ ತುಮಕೂರು ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳುವ ನೆಲಮಂಗಲ ಬಳಿಯ ನವಯುಗ ಟೋಲ್​​ ಬಳಿ ವಾಹನ ದಟ್ಟಣೆ ಉಂಟಾಗಿತ್ತು. ಅವರಿಗೆ ಮಳೆ ಊರು ಸೇರುವ ಹಂಬಲ ಹೆಚ್ಚಿಸಿದೆ.

ವಾರಾಂತ್ಯ ಕರ್ಫ್ಯೂ ನಿಯಮ ಪಾಲಿಸಲು ಮನವಿ ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ. ವಾರಾಂತ್ಯದ ಕರ್ಫ್ಯೂಗೆ ಬೆಂಗಳೂರಿನ ಜನತೆ ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್​ ಮನವಿಪೂರ್ವಕ ಎಚ್ಚರಿಕೆ ನೀಡಿದ್ದಾರೆ. ರಾತ್ರಿ 9ರಿಂದ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್​ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್‌ ಬಳಸಿ ಹೊರಗೆ ಬಂದರೆ ಕೂಡಲೇ ಬಂಧಿಸಲಾಗುವುದು. ಅನುಮತಿ ಪಡೆದಿರುವವರು ಕೂಡ ಅನಗತ್ಯವಾಗಿ ಓಡಾಡದಿರಿ ಎಂದು ಅವರು ಮಾಧ್ಯಮಗಳ ಮೂಲಕ ನಾಗರಿಕರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

(Bangalore Rain Updates Thunderstorm and Heavy rain in many areas of Bengaluru and other districts of karnataka weather report)

Published On - 7:03 pm, Fri, 23 April 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ