ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಗಳಲ್ಲೂ ಮೊಣಕಾಲುದ್ದಕ್ಕೂ ನೀರು ಹರಿದುಹೋಗಿ ವಾಹನ ಸಂಚಾರಕ್ಕೂ ಅಡಚಣೆಯುಂಟಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದ ಹಿನ್ನೆಲೆ ಬಿಬಿಎಂಪಿಯಿಂದ 10 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ಟಿವಿ9 ಜೊತೆ ಮಾಹಿತಿ ಹಂಚಿಕೊಂಡ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಹಿನ್ನೆಲೆಯಲ್ಲಿ ಪರಿಹಾರ ನೀಡಲಾಗುತ್ತಿದೆ. ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಕಾನೂನು ಪ್ರಕಾರ 10 ಸಾವಿರ ರೂಪಾಯಿ ಪರಿಹಾರ ನೀಡುಲಾಗತ್ತದೆ ಎಂದರು.
ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ
ಬೆಂಗಳೂರಿನಲ್ಲಿ ಮಳೆಯಿಂದ ಪದೇಪದೆ ಅವಾಂತರ ಆಗುತ್ತಿರುವ ಹಿನ್ನೆಲೆ ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ಸಿದ್ಧತೆ ನಡೆಸಿಕೊಂಡಿದೆ. ರಾಜಕಾಲುವೆಗಳನನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿಕೊಂಡಿರುವ ಸುಮಾರು 590ಕ್ಕೂ ಹೆಚ್ಚು ಕಟ್ಟಡಗಳನ್ನು ಗುರುತಿಸಲಾಗಿದ್ದು, ಮಳೆ ನಿಂತ ಬಳಿಕ ತೆರವು ಮಾಡಲು ತೀರ್ಮಾನಿಸಲಾಗಿದೆ. ಪ್ರವಾಹ ತಡೆಗಟ್ಟಲು ಒತ್ತುವರಿ ತೆರವು ಕಾರ್ಯ ಅನಿವಾರ್ಯವಾಗಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:19 pm, Wed, 31 August 22