ರಾಜಧಾನಿ ಬೆಂಗಳೂರಿನಲ್ಲಿ ಚಿತಾಗಾರದ ಎದುರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕ್ಯೂ
ನಿನ್ನೆ ಒಂದೇ ದಿನ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದರು. ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಯಲಹಂಕದ ಮೇಡಿ ಅಗ್ರಹಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಸುಮನಹಳ್ಳಿ ಚಿತಾಗಾರದಲ್ಲೂ ಅಂತ್ಯಕ್ರಿಯೆಗೆ ಕಾಯುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಚಿತಾಗಾರದ ಸಿಬ್ಬಂದಿ ರವಿ ಬೆಂಗಳೂರಿನಲ್ಲಿ 10 ದಿನದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.
ಬೆಂಗಳೂರು: ಮಹಾಮಾರಿ ಕೊರೊನಾ ಎರಡನೇ ಎಲೆ ಶುರುವಾಗಿದ್ದು, ಜನರಲ್ಲಿ ಮತ್ತೆ ಭಯ ಹುಟ್ಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಮರಣ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ರಕ್ಕಸ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾದ ಪರಿಣಾಮ ಚಿತಾಗಾರದ ಎದುರು ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಿನ್ನೆ ಒಂದೇ ದಿನ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದರು. ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಯಲಹಂಕದ ಮೇಡಿ ಅಗ್ರಹಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಸುಮನಹಳ್ಳಿ ಚಿತಾಗಾರದಲ್ಲೂ ಅಂತ್ಯಕ್ರಿಯೆಗೆ ಕಾಯುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಚಿತಾಗಾರದ ಸಿಬ್ಬಂದಿ ರವಿ ಬೆಂಗಳೂರಿನಲ್ಲಿ 10 ದಿನದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಚಿತಾಗಾರಗಳಲ್ಲಿ ನಮಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನವರಿಯ ಇಡೀ ತಿಂಗಳಿನಲ್ಲಿ 66 ಜನ ಸೋಂಕಿತರು ಸಾವನ್ನಪ್ಪಿದ್ದರು. ಫೆಬ್ರವರಿ ತಿಂಗಳಲ್ಲಿ 88 ಜನ ಮೃತಪಟ್ಟಿದ್ದರು. ಹಾಗೂ ಮಾರ್ಚ್ ಇಡೀ ತಿಂಗಳಿನಲ್ಲಿ 147 ಜನ ಸೋಂಕಿತರು ಬಲಿಯಾಗಿದ್ದರು. ಆದರೆ ಏಪ್ರಿಲ್ ತಿಂಗಳ 13ಕ್ಕೆ ಅಂದ್ರೆ ಕೇವಲ 13 ದಿನದಲ್ಲಿ 280 ಜನ ಸೋಂಕಿತರು ಮೃತಪಟ್ಟಿದ್ದಾರೆ. ತಿಂಗಳಾಂತ್ಯಕ್ಕೆ ಸಾವಿನ ಸಂಖ್ಯೆ ಒಂದು ಸಾವಿರ ಸೋಂಕಿತರು ಬಲಿಯಾಗಬಹುದೆಂದು ಅಂದಾಜಿಸಲಾಗಿದೆ.
ಇದನ್ನೂ ಓದಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊರೊನಾ ಸೋಂಕು ದೃಢ
(Bangalore several people in que to cremation of dead bodies of who died of Covid)