Bengaluru Tech Summit 2022: ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Bengaluru Tech Summit 2022: ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜಿಸಲು ತೀರ್ಮಾನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ಸಾಧು ಶ್ರೀನಾಥ್​

Updated on: Apr 25, 2022 | 3:45 PM

ಬೆಂಗಳೂರು: ಬೆಂಗಳೂರು ಟೆಕ್ ಸಮಿಟ್ (Bengaluru Tech Summit 2022) 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ತಿಳಿಸಿದರು. ಅವರು ಇಂದು ಬೆಂಗಳೂರು ಟೆಕ್ ಸಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಹಲವಾರು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಈಕೋಸಿಸ್ಟಂ ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದರು.

ಕೋವಿಡ್ ನಿಯಂತ್ರಣ ಪೂರ್ವಭಾವಿ ಸಭೆ ಕೋವಿಡ್ ಸಭೆ ಇಂದು ಮಧ್ಯಾಹ್ನ ಏರ್ಪಡಿಸಿದ್ದು, ಕೋವಿಡ್ ಸ್ಥಿತಿಗತಿ ಬದಲಾವಣೆ ಕುರಿತು ಚರ್ಚೆ ನಡೆಯಿತು. ಕೋವಿಡ್ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 27 ರಂದು ಸಭೆ ಕರೆದಿದ್ದಾರೆ. ಅದರ ಪೂರ್ವಭಾವಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗತಿ, ತಜ್ಞರ ಅಭಿಪ್ರಾಯ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದಿನ ಸಭೆ ನಡೆಯಿತು.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ