ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ: ಡೆತ್​ನೋಟ್ ಬರೆದಿಟ್ಟು ಬಾಲರಾಜ್ ಆತ್ಮಹತ್ಯೆ

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಪತ್ನಿ ಕಿರುಕುಳದಿಂದಲೇ ಅತುಲ್​​ ಆತ್ಮಹತ್ಯೆ ಬೆನ್ನಲ್ಲೇ ವರದಕ್ಷಿಣ ಕಿರುಕುಳ ಕೇಸ್​​ ಬಗ್ಗೆ ನಾನಾ ರೀತಿಯಲ್ಲಿ ಚರ್ಚೆಗಳಾಗುತ್ತಿವೆ. ಹೀಗಿರುವಾಗ ಬೆಂಗಳೂರಿನ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಪತ್ನಿಯ ಕಾಟದಿಂದ ಬೇಸತ್ತು ಸಾವಿಗೆ ಶರಣಾಗಿದ್ದಾರೆ. ಇದರ ಬೆನ್ನಲ್ಲೇ ಇದೇ ಬೆಂಗಳೂರಿನಲ್ಲಿ ಪತ್ನಿ ಕಿರುಕುಳಕ್ಕೆ ಬೇಸರತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ: ಡೆತ್​ನೋಟ್ ಬರೆದಿಟ್ಟು ಬಾಲರಾಜ್ ಆತ್ಮಹತ್ಯೆ
ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ: ಡೆತ್​ನೋಟ್ ಬರೆದಿಟ್ಟು ಬಾಲರಾಜ್ ಆತ್ಮಹತ್ಯೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 16, 2024 | 4:22 PM

ನೆಲಮಂಗಲ, ಡಿಸೆಂಬರ್​ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್​ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇದೀಗ ಹೆಂಡತಿಯ ಕಿರುಕುಳ ಆರೋಪದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಸಾವಾಗಿದೆ. ಹೌದು. ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದೆ.

18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದರು. ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೂಡ ಮಾಡಲಾಗಿದ್ದು, ಗಲಾಟೆ ನಡೆದಿದೆ. ಗಲಾಟೆ ಬಳಿಕ ಮನೆ ತೊರೆದು ಪತ್ನಿ ತವರು ಸೇರಿದ್ದರು.

ಇದನ್ನೂ ಓದಿ: ಬೆಂಗಳೂರು: ಟೆಕ್ಕಿ ಅತುಲ್ ಆಯ್ತು ಈಗ ಪೊಲೀಸ್ ಸರದಿ, ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ತಿಪ್ಪಣ್ಣ ಆತ್ಮಹತ್ಯೆ!

ಇತ್ತ ಯಾರು ಇಲ್ಲದ ವೇಳೆ ಮನೆಯ ಫ್ಯಾನ್​ಗೆ ನೇಣುಬಿಗಿದು ಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಾಲರಾಜ್ ಗ್ರಾಮಾಂತರ ಭಾಗದಲ್ಲಿ ಕ್ರಿಕೆಟ್ ಪಟುವಾಗಿದ್ದರು. ತನ್ನ ಮೃತದೇಹದ ಜೊತೆ ತಾನು ಪಡೆದಿದ್ದ ಟ್ರೋಫಿ, ಬ್ಯಾಟ್, ಬಾಲ್, ವಿಕೆಟ್ ಇಡುವಂತೆ ಡೆತ್ ನೋಟ್​​ನಲ್ಲಿ ಉಲ್ಲೇಖಿಸಲಾಗಿದೆ. ಅವರ ಕೊನೆಯ ಆಸೆಯಂತೆ ಶವದ ಪೆಟ್ಟಿಗೆಯಲ್ಲಿ ಎಲ್ಲವನ್ನು ಇಟ್ಟು ಶವ ಸಂಸ್ಕಾರ ಮಾಡಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾನ್‌ಸ್ಟೇಬಲ್ ಆತ್ಮಹತ್ಯೆ

ಅತುಲ್ ಸುಭಾಷ್ ಆತ್ಮಹತ್ಯೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಂಡತಿ, ಮಾವನ ಕಾಟಕ್ಕೆ ಬೇಸತ್ತ ಕಾನ್‌ಸ್ಟೇಬಲ್ ಪಿಸಿ ತಿಪ್ಪಣ್ಣ ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟಿದ್ದರು.

ಇದನ್ನೂ ಓದಿ: Bengaluru techie death: ಟೆಕ್ಕಿ ಅತುಲ್​ ಸುಭಾಷ್​ ಮಗು ಎಲ್ಲಿ? ಬೆಂಗಳೂರು ಪೊಲೀಸರಿಂದ ಮಹತ್ವದ ಸುಳಿವು

ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ತಿಪ್ಪಣ್ಣ, ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಾಗನಾತಪುರದ ಕೃಷ್ಣಪ್ಪಲೇಔಟ್​ನಲ್ಲಿ ವಾಸವಿದ್ದರು. ಹೆಂಡತಿ, ಮಾವನ ಕಿರುಕುಳ ನೀಡುತ್ತಿದ್ದಕ್ಕೆ ಬೇಸತ್ತಿದ್ದ ಸಾವಿನ ಮನೆ ಸೇರಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Mon, 16 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ