AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ, ಕ್ಯಾಬ್ ಚಾಲಕರಿಂದ ಸಾರಿಗೆ ಇಲಾಖೆ ಕಚೇರಿ ಮುತ್ತಿಗೆ: ಪೋಲಿಸರನ್ನು ತಳ್ಳಿ ನುಗ್ಗಿದ ಚಾಲಕರು

ಈಗಾಗಲೇ ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ಓನ್ ಸಿಟಿ ಓನ್‌ ರೇಟ್ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಆರ್​ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್​ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 04, 2024 | 4:21 PM

Share

ಬೆಂಗಳೂರು, ಜುಲೈ 04: ವಿವಿಧ ಬೇಡಿಕೆಗಳ ಪೂರೈಕೆ ಆಗ್ರಹಿಸಿ ಇಂದು ಶಾಂತಿನಗರದ (Shanti Nagar) ಬಿಟಿಎಸ್ ರೋಡ್ ಬ್ಲಾಕ್ ಮಾಡಿ ಆಟೋ, ಕ್ಯಾಬ್ (Auto, Cab) ಚಾಲಕರಿಂದ ಸಾರಿಗೆ ಇಲಾಖೆ ಮುಖ್ಯ ಕಚೇರಿ ಮುತ್ತಿಗೆ ಹಾಕಲಾಗಿದೆ. ಸಾವಿರಾರು ಆಟೋ, ಕ್ಯಾಬ್ ಗಳನ್ನು ಚಾಲಕರು ರೋಡ್​​ಗೆ ಅಡ್ಡಲಾಗಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬ್ಬಿಣದ ಪೈಪ್​​ಗಳನ್ನು ಕಟ್ ಮಾಡಿಕೊಂಡು ಕಚೇರಿ ಒಳಗೆ ಚಾಲಕರು ನುಗ್ಗಿದ್ದಾರೆ. ಪೋಲಿಸರು ಎಷ್ಟೇ ಪ್ರಯತ್ನ ಪಟ್ಟರು ಚಾಲಕರನ್ನು ತಡೆಯಲು ಆಗಲಿಲ್ಲ. ತಡೆಯಲು ಹೋದ ಪೋಲಿಸರನ್ನು ಕೂಡ ತಳ್ಳಿ ಚಾಲಕರು ನುಗ್ಗಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಫೆಬ್ರವರಿಯಲ್ಲಿಯೇ ಓನ್ ಸಿಟಿ ಓನ್‌ ರೇಟ್ ಆದೇಶವನ್ನು ಹೊರಡಿಸಿದೆ. ಆದೇಶ ಆಗಿ ಆರು ತಿಂಗಳಾದರೂ ಯಾವುದೇ ಅಗ್ರಿಗೇಟರ್ ಕಂಪನಿಗಳು ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಆರ್​ಟಿಓ ಅಧಿಕಾರಿಗಳು ಆದೇಶ ಪಾಲನೆ ಮಾಡದ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಚಾಲಕರು ಆರ್​ಟಿಓ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿ ಆಟೋ ಡ್ರೈವರುಗಳದ್ದೇ ಹವಾ! ಮಹಿಳಾ ಆಟೋ ಪ್ರಯಾಣಿಕರೂ ನಿರಾಳ

ಪ್ರಯಾಣಿಕರಿಗೆ ತೊಂದರೆ ಆಗಬಾರದು, ಪ್ರಯಾಣಿಕರಿಂದ ದುಪ್ಪಟ್ಟು ದರ ತೆಗೆದುಕೊಳ್ಳಬಾರದು ಎಂದು ಈಗಾಗಲೇ ರಾಜ್ಯ ಸರ್ಕಾರ ಆದೇಶ ನೀಡಿದೆ. ಆದರೆ ಓಲಾ, ಉಬರ್ ಸೇರಿದಂತೆ ಅಗ್ರಿಗೇಟರ್ ಲೈಸೆನ್ಸ್ ಪಡೆದ ಕಂಪನಿಗಳು ದುಪ್ಪಟ್ಟು ದರವನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: Tv9 Impact: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್

ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆ ಆಗುತ್ತಿದ್ದು, ಇದರ ಲಾಭವನ್ನು ಚಾಲಕರಿಗೂ ಕೊಡಿತ್ತಿಲ್ಲ. ಇದರಿಂದ ಲಕ್ಷಾಂತರ ರೂ. ಬಂಡವಾಳ ಹಾಕಿ ವಾಹನಗಳನ್ನು ಖರೀದಿ ಮಾಡಿರುವ ಚಾಲಕರಿಗೆ ತೊಂದರೆ ಆಗುತ್ತಿದೆ. ಹೀಗಾಗಿ ಕೂಡಲೇ ಈ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಲಿದ್ದಾರೆ.

ಚಾಲಕರ ಬೇಡಿಕೆಗಳು

  • ಓನ್ ಸಿಟಿ ಓನ್ ಫೇರ್ ಜಾರಿ ಆಗಬೇಕು.
  • ರಾಪಿಡೋ ಬೈಕ್ ಟ್ಯಾಕ್ಸಿ ನಿಲ್ಲಬೇಕು.
  • ಆರ್​ಟಿಓ ಅಧಿಕಾರಿಗಳು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಕಾರ್ಯಾಚರಣೆ ಮಾಡಬೇಕು.
  • ಪೋರ್ಟರ್ ಕಂಪನಿಯನ್ನು ಬ್ಯಾನ್ ಮಾಡಬೇಕು.
  • ಸ್ಕೂಲ್ ವಾಹನಗಳಿಗೆ ಪರ್ಮಿಟ್ ನೀಡಬೇಕು.

ವಾಹನಗಳ ಮೌಲ್ಯ ಮತ್ತು ಸರ್ಕಾರ ನಿಗದಿಪಡಿಸಿದ ದರ

  • ಹತ್ತು ಲಕ್ಷಕ್ಕಿಂತ ಕಡಿಮೆ ನಿಗದಿತ ದರ (ಕನಿಷ್ಟ 4 ಕಿಮೀ 100 ರೂ.) ಪ್ರತಿ ಕಿಮೀ ಗೆ- 24 ರೂ.
  • 10 ರಿಂದ 15 ಲಕ್ಷ ವಾಹನಗಳಿಗೆ 115 ರೂ. ಪ್ರತಿ ಕಿಮೀ ಗೆ 28 ರೂ.
  • 3- 15 ಲಕ್ಷಕ್ಕಿಂತ ಹೆಚ್ಚು ವಾಹನಗಳಿಗೆ 130 ರೂ. ಪ್ರತಿ ಕಿಮೀ ಗೆ 32 ರೂ. ನಿಗಡಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Thu, 4 July 24

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು