Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡ್ಲೆಕಾಯಿ ಪರಿಷೆಯಿಂದ ಬಸವನಗುಡಿ ನಿವಾಸಿಗಳಿಗೆ ಶುರುವಾಯ್ತು ಹೊಸ ಟೆನ್ಷನ್

ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುವ ಐತಿಹಾಸಿಕ ಕಡ್ಲೆಕಾಯಿ ಪರಿಷೆಯನ್ನು ಮೂರು ದಿನಗಳಿಗೆ ಸೀಮಿತಗೊಳಿಸುವಂತೆ ಸ್ಥಳೀಯ ನಿವಾಸಿಗಳು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಐದು ದಿನಗಳ ಪರಿಷೆಯಿಂದ ಉಂಟಾಗುತ್ತಿರುವ ಅನಾನುಕೂಲತೆಗಳು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ, ಸ್ವಚ್ಛತಾ ಸಮಸ್ಯೆಗಳ ಬಗ್ಗೆ ನಿವಾಸಿಗಳು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಕಡ್ಲೆಕಾಯಿ ಪರಿಷೆಯಿಂದ ಬಸವನಗುಡಿ ನಿವಾಸಿಗಳಿಗೆ ಶುರುವಾಯ್ತು ಹೊಸ ಟೆನ್ಷನ್
ಕಡ್ಲೆಕಾಯಿ ಪರಿಷೆಯಿಂದ ಬಸವನಗುಡಿ ನಿವಾಸಿಗಳಿಗೆ ಶುರುವಾಯ್ತು ಹೊಸ ಟೆನ್ಷನ್
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Dec 02, 2024 | 8:53 PM

ಬೆಂಗಳೂರು, ಡಿಸೆಂಬರ್​ 02: ಐತಿಹಾಸಿಕ ಕಡ್ಲೆಕಾಯಿ ಪರಿಷೆ (Kadlekai Parishe) ಅಂದರೆ ಸಿಟಿ ಜನರಿಗೆ ಅಚ್ಚುಮೆಚ್ಚು. ದೊಡ್ಡ ಗಣಪನ ದರ್ಶನ ಪಡೆದು, ಒಂದೆರೆಡು ಸೇರು ಕಡ್ಲೆಕಾಯಿ ಖರೀದಿ ಮಾಡಿ, ಜಾತ್ರೆ ಏಂಜಾಯ್ ಮಾಡಿ ಖುಷಿ ಪಡ್ತಾರೆ. ಆದರೆ ಸಿಟಿ ಜನರ ಖುಷಿ ಒಂದು ಕಡೆಯಾದರೆ, ಬಸವನಗುಡಿ ನಿವಾಸಿಗಳ ಸಂಕಷ್ಟ ಮತ್ತೊಂದು ಕಡೆ. ಪರಿಷೆ ಮಾಡಿ, ಆದರೆ ಮೂರೇ ದಿನಕ್ಕೆ ಸೀಮಿತಗೊಳಿಸಿ ಅಂತ ಇದೀಗ ಬಸವನಗುಡಿ ನಿವಾಸಿಗಳು ಪೊಲೀಸ್ ಕಮಿಷನರ್ಗೆ ಪತ್ರ ಬರೆದಿದ್ದಾರೆ.

ಮೂರೇ ದಿನ್ಕಕೆ ಪರಿಷೆ ಸೀಮಿತಗೊಳಿಸಿ: ಬಸವನಗುಡಿ ನಿವಾಸಿಗಳು ಪತ್ರ

ಐತಿಹಾಸಿಕ ಕಡ್ಲೆಕಾಯಿ ಪರಿಷೆ ಬೆಂಗಳೂರಿನ ಒನ್ ಆಫ್ ದಿ ಬಿಗೆಸ್ಟ್ ಇವೆಂಟ್. ಪರಿಷೆ ನೋಡೊಕ್ಕೆ ಸಿಟಿ ಜನ ಮೂಲೆ ಮೂಲೆಗಳಿಂದ ಬರ್ತಾರೆ. ಸಿಟಿ ಜನ ಏನೋ ಪರಿಷೆ ಏಂಜಾಯ್ ಮಾಡ್ತಾರೆ, ಆದರೆ ಬಸವನಗುಡಿ ನಿವಾಸಿಗಳು ಮಾತ್ರ ಸಿಕ್ಕಾಪಟ್ಟೆ ತೊಂದರೆ ಅನುಭವಿಸ್ತಿದ್ದಾರೆ.  ದಯವಿಟ್ಟು ಪರಿಷೆ ಮಾಡಿ, ಆದರೆ ಮೂರೇ ದಿನಕ್ಕೆ ಪರಿಷೆ ಸೀಮಿತಗೊಳಿಸಿ ಅಂತ ಇದೀಗ ಹೆರಿಟೇಜ್ ಬಸವನಗುಡಿ ರೆಸಿಡೆಂಟ್ಸ್ ವೆಲ್ಫೇರ್ ಫೋರಂ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ನಿವಾಸಿಗಳು

ಕಾರ್ತಿಕ ಮಾಸದ ಕೊನೆ ಸೋಮವಾರ ನಡೆಯುವ ಕಡ್ಲೆಕಾಯಿ ಪರಿಷೆ ಐತಿಹಾಸಿಕ ಹಿನ್ನಲೆಯನ್ನು ಹೊಂದಿದೆ. ಪರಿಷೆಗೆ ಲಕ್ಷಾಂತರ ಜನ ಸೇರ್ತಾರೆ. ಕಡ್ಲೆಕಾಯಿ ಮಾರಾಟ ಮಾಡಲು ಬೇರೆ ಊರು, ಜಿಲ್ಲೆಗಳಿಂದ ವ್ಯಾಪಾರಿಗಳು ಬಂದು ಬಸವನಗುಡಿಯಲ್ಲಿ ಬಿಡಾರ ಹೂಡ್ತಾರೆ. ಆದರೆ ಈ ವ್ಯಾಪಾರಿಗಳಿಗೆ ಯಾವ ಕನಿಷ್ಠ ಸೌಲಭ್ಯವನ್ನು ಕಲ್ಪಿಸಲಾಗುವುದಿಲ್ಲ. ಹೋಗಲಿ, ಅವರ ಶೌಚಕ್ಕೆ ಶೌಚಾಲಯ ಕೂಡ ಇರೋಲ್ಲ. ಹೀಗಾಗಿ ಅವರೆಲ್ಲಾ ಮನೆ ಮುಂದೆ, ರಸ್ತೆ ಗಲ್ಲಿಗಳಲ್ಲಿ ಬಹಿರ್ದೆಸೆ ಮುಗಿಸಿಕೊಳ್ತಾರೆ. ರಾಶಿ ರಾಶಿ ಕಸ, ಗಲೀಜಿನಿಂದ ಬಸವನಗುಡಿಯಲ್ಲಿ ಸಾಂಕ್ರಾಮಿಕ ರೋಗ ಉಲ್ಬಣಗೊಂಡಿದೆ. ಮಕ್ಕಳು ಸೇರಿ ಹಿರಿಯ ನಾಗರಿಕರು ಹುಷಾರ್ ಇಲ್ಲದೆ ಹಾಸಿಗೆ ಹಿಡಿದಿದ್ದಾರೆ ಎಂದು ಸ್ಥಳೀಯರಾದ ದಯಾನಂದ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಸವನಗುಡಿ ಕಡಲೆಕಾಯಿ ಪರಿಷೆ ಇತಿಹಾಸ, ಕಾರ್ತಿಕ ಮಾಸದಲ್ಲೇ ನಡೆಯಲು ಕಾರಣವೇನು? ಇಲ್ಲಿದೆ ಮಾಹಿತಿ

ಬಸವನಗುಡಿ ಕಡ್ಲೆಕಾಯಿ ಪರಿಷೆ ಈ ಹಿಂದೆ ಮೂರು ದಿನಗಳು ನಡೆಯುತ್ತಿತ್ತು. ಆದರೆ ಈ ವರ್ಷ 5 ದಿನಗಳಿಗೆ ಅವಕಾಶ ನೀಡಲಾಗಿದೆ. 5 ದಿನ ಅವಕಅಶ ಕೊಟ್ಟರೂ ಯಾವ ಕನಿಷ್ಠ ವ್ಯಸವ್ಥೆಗಳನ್ನು ಮಾಡಿಲ್ಲ. ಹೀಗಾಗಿ ಸ್ಥಳೀಯರು ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 pm, Mon, 2 December 24

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ