AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಶಾಶ್ವತ ಯೋಜನೆ

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಒಂದೇ ಒಂದು ಸಣ್ಣ ಪ್ರಮಾಣದಲ್ಲಿ ಮಳೆಯಾದರೂ ಅನಾಹುತ ತಪ್ಪಿದ್ದಲ್ಲ. ನಗರದ ರಸ್ತೆಗಳೆಲ್ಲಾ ಜಲಾವೃತಗೊಳ್ಳುತ್ತವೆ. ಮಳೆ ನೀರು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲ. ಇದಕ್ಕೆ ಕಾರಣವೆಂದರೆ ಕಾಲುವೆಗಳ ಒತ್ತುವರಿ. ಹೀಗಾಗಿ ಇದೀಗ ರಾಜ್ಯ ಸರ್ಕಾರ ಈ ಸಮಸ್ಯೆಗೊಂದು ಶಾಶ್ವತ ಯೋಜನೆ ರೂಪಿಸಿದ್ದು, 5000 ಕೋಟಿ ರೂ. ಮಂಜೂರು ಮಾಡಿದೆ.

ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಶಾಶ್ವತ ಯೋಜನೆ
ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಶಾಶ್ವತ ಯೋಜನೆ
ಕಿರಣ್​ ಹನಿಯಡ್ಕ
| Edited By: |

Updated on: Dec 13, 2024 | 5:20 PM

Share

ಬೆಂಗಳೂರು, ಡಿಸೆಂಬರ್​ 13: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆಯಿಂದಾಗುವ ಹಾನಿಯನ್ನು ತಡೆಗಟ್ಟು ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶಾಶ್ವತ ಯೋಜನೆ ರೂಪಿಸಿದ್ದು,  5000 ಕೋಟಿ ರೂ. ಮಂಜೂರು ಮಾಡಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ.

ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿಮೀ ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿಮೀ ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೇ 700 ಕಿಮೀ ಅಭಿವೃದ್ಧಿಪಡಿಸಲಾಗಿದ್ದು, ಇನ್ನೂ 300 ಕಿಮೀ ರಾಜಕಾಲುವೆಯನ್ನು ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ಅಡಿ 240 ಕೋಟಿ ರೂ. ಮಂಜೂರು ಮಾಡಲಾಗಿದೆ.

ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ರೂ. ಕೋಟಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೇ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿಶ್ವಬ್ಯಾಂಕ್​​ನಿಂದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೇಜ್ ಟ್ರೀಟ್ಮೆಂಟ್‌ ವಾಟರ್ ಲೈನ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.

ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 1 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 2 ಸಾವಿರ ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಇನ್ನುಳಿದ 2000 ಕೋಟಿ ರೂ. ಅನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ

ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಯೋಜನೆ ರೂಪಿಸಿ ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ರಾಜ್ಯ ಸರ್ಕಾರ ಶಾಶ್ವತ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?