ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್

ಕೊರೋನಾ ಹರಡುವಿಕೆಗೆ ಲಗಾಮು ಹಾಕಿದ ಕರ್ನಾಟಕದ ಆರೋಗ್ಯ ಇಲಾಖೆ ಇದೀಗ ಹೆಚ್ಚುತ್ತಿರುವ ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಹೊಸ ಪ್ಲಾನ್ ಹಾಕಿಕೊಂಡಿದೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್
ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್
Follow us
TV9 Web
| Updated By: Rakesh Nayak Manchi

Updated on: Nov 22, 2022 | 11:02 PM

ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ಜನರ ಜೀವದ ಜೊತೆ ಹಾಕುತ್ತಿದ್ದ ಚೆಲ್ಲಟ ಕಡಿಮೆಯಾಗಿದೆ. ಆದರೆ ಕೊರೋನಾ ಹಾವಳಿಬಳಿಕ ಆತ್ಮಹತ್ಯೆ (Suicide) ಎಂಬ ಭೂತ ಜನರ ಜೀವದ ಜೊತೆ ಸಾವಿನ ನರ್ತನ ಶುರುಮಾಡಿದೆ. ಇತ್ತೀಚಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳು ಆತ್ಮಹತ್ಯಗೆ ಹೆಚ್ಚಿನ ಸಂಖ್ಯೆಯಲ್ಲಿ ಶರಣಾಗುತ್ತಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವ ಮೊದಲ ಐದು ರಾಜ್ಯಗಳಲ್ಲಿ ಕರ್ನಾಟಕ ಕೂಡ ಸ್ಥಾನ ಪಡೆದುಕೊಂಡಿದೆ. ಚಿಕ್ಕ ಪುಟ್ಟ ವಿಷಯಕ್ಕೂ ವಿದ್ಯಾರ್ಥಿಗಳು ಹಾಗೂ ಯುವಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇನ್ನು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka health department) ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.

ಪುಟಾಣಿಗಳಿಂದ ಹಿಡದು ಯುವ ಪೀಳಿಗೆ ಹೆಚ್ಚು ಆತ್ಮಹತ್ಯಗೆ ಕೊರಳು ಒಡ್ಡುತ್ತಿರುವುದರಿಂದ ಆತಂಕ್ಕೆ ಒಳಗಾಗಿರುವ ಆರೋಗ್ಯ ಇಲಾಖೆ, ಆತ್ಮಹತ್ಯೆ ನಿಯಂತ್ರಿಸಲು ಹೊಸ ತಂತ್ರಕ್ಕೆ ಮುಂದಾಗಿದೆ. ಆತ್ಮಹತ್ಯೆಗೆ ಪ್ರಯತ್ನಿಸುವವರ ಹಾಗೂ ಮಾನಸಿಕ ಖಿನ್ನತೆಗೆ ಒಳಗಾದವರ ಸಂಪೂರ್ಣ ಮಾಹಿತಿ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ. ಆತ್ಮಹತ್ಯೆಗೆ ಒಂದು ಬಾರಿ ಪ್ರಯತ್ನಿಸಿದವರು ಮತ್ತೆ ಮತ್ತೆ ಆತ್ಮಹತ್ಯೆಗೆ ಪಯತ್ನಿಸುತ್ತಲೇ ಇದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆಸ್ಪತ್ರೆಗಳಲ್ಲಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಯ ಪ್ರಯತ್ನಗಳ ಬಗ್ಗೆ ವರದಿಯಾಗುವ ಮಾಹಿತಿ ದಾಖಲೆಯನ್ನ ಆರೋಗ್ಯ ಇಲಾಖೆ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಕಲಬುರಗಿ: ಸನ್ನತಿ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳಗಳು ಪತ್ತೆ; ವಿದ್ಯಾರ್ಥಿಗಳಿಂದ ಆಕ್ರೋಶ

ಆತ್ಮಹತ್ಯೆ ಪ್ರಯತ್ನಿಸುವವರ ಮಾಹಿತಿ ಪಡೆದು ಕೌನ್ಸಿಲಿಂಗ್ ನೀಡಲು ಮುಂದಾಗಿದೆ. ಅಲ್ಲದೆ ಮತ್ತೆ ಆತ್ಮಹತ್ಯೆಯ ಪ್ರಯತ್ನಕ್ಕೆ ಕೈಹಾಕದಂತೆ ತಡೆಯಲು ಸೂಕ್ತ ಮಾನೋ ವೈದ್ಯರ ಮೂಲಕ ಆಪ್ತ ಸಮಾಲೋಚನೆ ತರಬೇತಿ ನೀಡಿ ಖಿನ್ನತೆಯಿಂದ ಹೊರ ತರಲು ಮುಂದಾಗಿದೆ. ಈ ಮೂಲಕ ಆತ್ಮಹತ್ಯೆಗೆ ಮುಂದಾಗುವವರನ್ನ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಅಭಿಯಾನದ ತಂತ್ರರೂಪಿಸಿಕೊಂಡಿದೆ.

“ಒಂದು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದವರು ಮತ್ತೆ ಮತ್ತೆ ಆತ್ಮಹತ್ಯೆಗೆ ಪಯತ್ನಿಸುತ್ತಲೇ ಇರುತ್ತಾರೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಯ ಪ್ರಯತ್ನಿಸಿದವರ ಮಾಹಿತಿ ಹಾಗೂ ದಾಖಲೆಯನ್ನ ಪಡೆದು ಅತಂವರಿಗೆ ಸೂಕ್ತ ಕೌನ್ಸಿಲಿಂಗ್ ನೀಡಿದರೆ ಅವರು ಮತ್ತೆ ಆತ್ಮಹತ್ಯೆಯ ಪ್ರಯತ್ನಕ್ಕೆ ಕೈಹಾಕದಂತೆ ತಡೆಯಬಹುದು. ಸಮಯಕ್ಕೆ ಸರಿಯಾಗಿ ಆಪ್ತ ಸಮಾಲೋಚನೆ ನೀಡಿದರೆ ಆತ್ಮಹತ್ಯೆಯ ಆಲೋಚನೆ ದೂರು ಮಾಡಬಹದು” -ಡಾ.ರಜನಿ ಪಿ, ಮಾನಸಿಕ ವಿಭಾಗದ ಉಪ ನಿರ್ದೇಶಕ, ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ

ಆತ್ಮಹತ್ಯೆ ಕುರಿತು ಯೋಚಿಸುತ್ತಿರುವ ಹಾಗೂ ಖಿನ್ನತೆಯಿಂದ ಮಾನಸಿಕ ಹಿಂಸೆಗೆ ಒಳಗಾಗುವರಿಗೆ ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಬಳಲುವವರನ್ನ ಆರೋಗ್ಯ ಇಲಾಖೆ ಪತ್ತೆ ಹಚ್ಚಿ ಕೌನ್ಸಿಲಿಂಗ್ ನೀಡಿ ಆತ್ಮಹತ್ಯೆಗೆ ಕಡಿವಾಣ ಹಾಕಲು ಮುಂದಾಗಿರುವುದು ಮಾತ್ರ ಖುಷಿಯ ವಿಚಾರವಾಗಿದೆ.

ವರದಿ: ವಿನಯಕುಮಾರ್ ಕಾಶಪ್ಪನವರ್, ಟಿವಿ9 ಬೆಂಗಳೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ