ಬೆಂಗಳೂರು, ಜೂನ್ 17: ಸಿಲಿಕಾನ್ ಸಿಟಿಯ ಜನರು ಹೆಚ್ಚಾಗಿ ನಮ್ಮ ಮೆಟ್ರೋವನ್ನು ಅವಲಂಬಿಸಿದ್ದಾರೆ. ಆದರೆ ನಮ್ಮ ಮೆಟ್ರೋ (Namma Metro) ರೈಲುಗಳು ಪದೇ ಪದೇ ಕೈ ಕೊಡುತ್ತಿವೆ. ಹೀಗಾಗಿ ಬಿಎಂಆರ್ಸಿಎಲ್ (BMRCL) ನಿರ್ವಹಣೆ ಕಾಮಗಾರಿ ಕೈಗೊಂಡಿದ್ದು, ಇಂದು (ಜೂ.17) ರಂದು ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕೆಂಗೇರಿ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ವ್ಯತ್ಯಯವಾಗಲಿದೆ. ಬೆಳಗ್ಗೆ 5 ರಿಂದ ಮಧ್ಯಾಹ್ನ 1 ಗಂಟೆವರೆಗೂ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನೇರಳೆ ಮಾರ್ಗದ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಜೂನ್ 17ರಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Namma Metro: ಹಳದಿ ಮಾರ್ಗದ ಚಾಲಕ ರಹಿತ ಮೆಟ್ರೋ ಟ್ರಯಲ್ ರನ್ ಆರಂಭ
ಬೆಳಗ್ಗೆ 05:00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ ಲಭ್ಯವಿರುವುದಿಲ್ಲ. ಮಧ್ಯಾಹ್ನ 1ಗಂಟೆಯ ಬಳಿಕ ರೈಲು ಸೇವೆ ಚಲ್ಲಘಟ್ಟ ಟು ವೈಟ್‌ಫೀಲ್ಡ್ ನಡುವೆ ಸಂಪೂರ್ಣ ಸಂಚಾರ ಲಭ್ಯವಿರಲಿದೆ. ಆದಾಗ್ಯೂ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಎಂದಿನಂತೆ ಇರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಭಾನುವಾರ ಬೆಳಗ್ಗೆ 7ರ ಬದಲಿಗೆ 6 ಗಂಟೆಯಿಂದಲೇ ಆರಂಭ
ಇತ್ತೀಚೆಗೆ ನಮ್ಮ ಮೆಟ್ರೋ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು. ಹಾಗಾಗಿ ಕೆಲವು ಘಂಟೆಗಳ ಕಾಲ
ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷ ಕಂಡಬಂದ ಹಿನ್ನಲೆ ಬೆಳಗ್ಗೆ 9.58ಕ್ಕೆ ರೈಲು ಸೇವೇಯಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:29 pm, Fri, 14 June 24