ಹೊಸ ವರ್ಷಕ್ಕೆ ಹೈ ಅಲರ್ಟ್: ಇದೇ ಮೊದಲ ಬಾರಿ ಬೌನ್ಸರ್ ಜತೆ ಪೊಲೀಸರ ಸಭೆ

ಬೆಂಗಳೂರಿನಲ್ಲಿ 2025ರ ಹೊಸ ವರ್ಷದ ಆಚರಣೆಗೆ ಬಿಗಿ ಭದ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬ್ರಿಗೇಡ್ ರೋಡ್ ಮತ್ತು ಎಂ.ಜಿ. ರೋಡ್‌ನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಇರಲಿದೆ. ಬೌನ್ಸರ್‌ಗಳಿಗೆ ಸೂಕ್ತ ನಡವಳಿಕೆಯ ಬಗ್ಗೆ ಸೂಚನೆ ನೀಡಲಾಗಿದೆ. ಪಬ್, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಹೊಸ ವರ್ಷಕ್ಕೆ ಹೈ ಅಲರ್ಟ್: ಇದೇ ಮೊದಲ ಬಾರಿ ಬೌನ್ಸರ್ ಜತೆ ಪೊಲೀಸರ ಸಭೆ
ಹೊಸ ವರ್ಷಕ್ಕೆ ಹೈ ಅಲರ್ಟ್: ಇದೇ ಮೊದಲ ಬಾರಿ ಬೌನ್ಸರ್ ಜತೆ ಪೊಲೀಸರ ಸಭೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 11, 2024 | 6:44 PM

ಬೆಂಗಳೂರು, ಡಿಸೆಂಬರ್​ 11: 2024 ಕ್ಕೆ ವಿದಾಯ ಹೇಳಿ, 2025ನ್ನು ಬರ ಮಾಡಿಕೊಳ್ಳುವ ಸಮಯ ಬಂದೇ ಬಿಟ್ಟಿದೆ. ಹೊಸ ವರ್ಷ (New Year) ಆಚರಣೆಗೆ ದಿನಗಣನೆ ಶುರುವಾಗಿದೆ. ಈ ಹೊಸ ವರ್ಷದ ಸಂಭ್ರಮಾಚರಣೆಗೆ ಸಿಲಿಕಾನ್ ಸಿಟಿ ಕೂಡ ಸಜ್ಜಾಗುತ್ತಿದೆ. ಹೀಗಾಗಿ ಈ ಬಾರಿ ಹೆಚ್ಚಿನ ಭದ್ರತೆಗಾಗಿ ಕೇಂದ್ರ ವಿಭಾಗ ಪೊಲೀಸರಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಹೊಸ ವರ್ಷ ಆಚರಣೆಗೆ ಬ್ರಿಗೇಡ್ ರೋಡ್ ಮತ್ತು ಎಂ.ಜಿ.ರೋಡ್ ಸಜ್ಜಾಗುತ್ತಿವೆ. ಈ ನಿಟ್ಟಿನಲ್ಲಿ ಹೆಚ್ಚು ಬಿಗಿ ಭದ್ರತೆಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ತಯಾರಿ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ಬೌನ್ಸರ್ ತಂಡಗಳ ಜೊತೆ ಪೊಲೀಸರು ಸಭೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷದ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಹೊಸ ಅಸ್ತ್ರ

ಪಬ್, ಬಾರ್ ಮತ್ತು ರೆಸ್ಟೋರೆಂಟ್ ಪಾರ್ಟಿ ಸ್ಥಳಗಳಲ್ಲಿ ನಿಯೋಜನೆಗೊಳ್ಳುವ ಬೌನ್ಸರ್​​ಗಳು ಮಹಿಳೆಯರು, ಯುವತಿಯರ ಬಳಿ ಹೇಗೆ ನಡೆದುಕೊಳ್ಳಬೇಕು ಪಾರ್ಟಿ ಪ್ರಿಯರ ಜೊತೆ ನಡೆದುಕೊಳ್ಳುವ ವಿಧಾನದ ಬಗ್ಗೆ ಸಲಹೆ ನೀಡಲಾಗಿದೆ.

ಮ್ಯಾನೇಜರ್​ಗಳ ಜೊತೆಗೂ ಸಭೆ 

ಕುಡಿದ ಮತ್ತಲ್ಲಿ ಯಾರಾದರೂ ಅಸಭ್ಯ ವರ್ತನೆ ತೋರಿದ್ದಲ್ಲಿ ಅವರನ್ನು ಪೊಲೀಸರಿಗೆ ಹೇಗೆ ಒಪ್ಪಿಸಬೇಕು. ಪೊಲೀಸರ ಜೊತೆ ಸಂಪರ್ಕ ಹಾಗೂ ಕಾರ್ಯ ವಿಧಾನದ ಬಗ್ಗೆ ತಿಳಿಸಲಾಗಿದೆ. ಪಬ್, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಪಾರ್ಟಿ ಹಾಲ್, ಖಾಸಗಿ ಹೋಟೆಲ್ ಮ್ಯಾನೇಜರ್​ಗಳ ಜೊತೆಗೂ ಸಭೆ ಮಾಡಲಾಗಿದೆ.

ಹೊಸ ವರ್ಷಕ್ಕೆ ಮಾರ್ಗಸೂಚಿಗಳ ಪಾಲನೆ ಜೊತೆಗೆ ಹೇಗೆ ಪಾರ್ಟಿ ಆಯೋಜನೆ ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಅಲ್ಲದೆ ಮಾಲೀಕರಿಂದಲೂ ಅಭಿಪ್ರಾಯಗಳನ್ನು ಡಿಸಿಪಿ ಪಡೆದುಕೊಂಡಿದ್ದಾರೆ.

ಡಿಸಿಪಿ ಹೆಚ್​ಟಿ ಶೇಖರ್ ಹೇಳಿದ್ದಿಷ್ಟು 

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್​ಟಿ ಶೇಖರ್ ಪ್ರತಿಕ್ರಿಯಿಸಿದ್ದು, ಹೊಸ ವರ್ಷಕ್ಕೆ ಈ ವರ್ಷವೂ ಕೇಂದ್ರ ವಿಭಾಗದಲ್ಲಿ ಮುಂಜಾಗೃತ ಕ್ರಮ ತೆಗೆದುಕೊಳ್ಳುತ್ತೇವೆ. ಬಾರ್, ರೆಸ್ಟೋರೆಂಟ್ ಮಾಲೀಕರ ಸಭೆ ಕರೆದು ಚರ್ಚಿಸಿದ್ದೇವೆ. ಪೊಲೀಸರ ಅನುಮತಿ ಹಾಗೂ ಆಚರಣೆ ಬಗ್ಗೆ ಮಾತಾಡಿದ್ದೇವೆ. ಗ್ರಾಹಕರ ಜೊತೆ ಹೇಗೆ ವರ್ತಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಹೊಸ ವರ್ಷದ ಗಿಫ್ಟ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮ ಆಚರಿಸುವ ಪ್ರಮುಖ ರಸ್ತೆಗಳು ಅಂದರೆ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರಿಜ್ಮಂಡ್ ರಸ್ತೆ, ಕಬ್ಬನ್ ರಸ್ತೆ, ಟ್ರಿನಿಟಿ ರಸ್ತೆ, ಫೀನಿಕ್ಸ್ ಮಾಲ್, ಕೋರಮಂಗಲ, ಇಂದಿರಾನಗರ ಸೇರಿದಂತೆ ಪಬ್​ಗಳು ಕ್ಲಬ್​ಗಳು. ಇಲ್ಲಿ ಜನಸಂದಣಿ ಹೆಚ್ಚಾಗಿರುತ್ತದೆ.

ವರದಿ: ಪ್ರದೀಪ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:13 pm, Wed, 11 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ