Bangaluru: ಹೆಚ್ಚು ಖಾಸಗಿ ವಾಹನಗಳಿರುವ ನಗರಗಳಲ್ಲಿ ದೆಹಲಿಯನ್ನು ಹಿಂದಿಕ್ಕಿದ ಬೆಂಗಳೂರು ನಂ 1

private vehicles: ಬೆಂಗಳೂರಿನಲ್ಲಿ ಈ ವರ್ಷ ಖಾಸಗಿ ವಾಹನಗಳ ಸಂಖ್ಯೆಯಲ್ಲಿ ಬಹುಪಟ್ಟು ಹೆಚ್ಚಳವಾಗಿದೆ. ಆ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ಸಿಲಿಕಾನ್ ಸಿಟಿ ಓವರ್ ಟೆಕ್ ಮಾಡಿದೆ. ಸಾರಿಗೆ ಇಲಾಖೆ ಸಂಗ್ರಹಿಸಿದ ಮಾಹಿತಿ ಪ್ರಕಾರ, ಬೆಂಗಳೂರು ನಗರದಲ್ಲಿ ಬರೋಬ್ಬರಿ 1.16 ಕೋಟಿ ಖಾಸಗಿ ವಾಹನಗಳು ಇವೆ. ಪೀಕ್ ಅವರ್​ನಲ್ಲಿ ನಗರದಲ್ಲಿ 50 ರಿಂದ 60 ಲಕ್ಷ ವಾಹನಗಳು ಸಂಚಾರಿಸುತ್ತವೆ.

Bangaluru: ಹೆಚ್ಚು ಖಾಸಗಿ ವಾಹನಗಳಿರುವ ನಗರಗಳಲ್ಲಿ ದೆಹಲಿಯನ್ನು ಹಿಂದಿಕ್ಕಿದ ಬೆಂಗಳೂರು ನಂ 1
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Apr 17, 2024 | 7:05 PM

ಬೆಂಗಳೂರು, ಏಪ್ರಿಲ್​ 17: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ (bengaluru) ಇದೀಗ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಆ ಮೂಲಕ ರಾಷ್ಟ್ರ ರಾಜಧಾನಿ ದೆಹಲಿಯನ್ನೂ ಉದ್ಯಾನ ನಗರಿ ಓವರ್ ಟೆಕ್ ಮಾಡಿದೆ. ಸದ್ಯ ಬೆಂಗಳೂರು ನಗರದಲ್ಲಿ ಬರೋಬ್ಬರಿ 1.16 ಕೋಟಿ ವಾಹನಗಳು (Vehicles) ಇವೆ. ಪೀಕ್ ಅವರ್​​ನಲ್ಲಿ ನಗರದಲ್ಲಿ 50 ರಿಂದ 60 ಲಕ್ಷ ವಾಹನಗಳು ಸಂಚಾರ ಮಾಡುತ್ತವೆ. ಹೀಗಾಗಿ ಸದ್ಯ ಟ್ರಾಫಿಕ್ ಕಂಟ್ರೋಲ್​ಗೆ 28 ಅಡಾಪ್ಟಿವ್ ಸಿಗ್ನಲ್ ಮತ್ತು 164 ಎಐ ಸಿಗ್ನಲ್ ಅಳವಡಿಕೆ ಮಾಡಲಾಗುತ್ತಿದೆ.

6-7 ತಿಂಗಳಲ್ಲಿ ಈ ಪ್ರಾಜೆಕ್ಟ್ ಮುಗಿಯಲಿದ್ದು, ಬಳಿಕ ಇದರಿಂದ ಆಟೋಮೆಟಿಕ್ ಟ್ರಾಫಿಕ್ ಸಿಗ್ನಲ್ ಸಿಸ್ಟಮ್ ಹೆಚ್ಚಾಗಲಿದ್ದು, ಟ್ರಾಫಿಕ್ ಕಂಟ್ರೋಲ್​​ಗೆ ಸಹಕಾರಿ ಆಗಲಿದೆ. ಸಾರಿಗೆ ಇಲಾಖೆ ಸಂಗ್ರಹಿಸಿದ ಮಾಹಿತಿ ಪ್ರಕಾರ, ನಗರದಲ್ಲಿ ಏಪ್ರಿಲ್ 2023 ಮತ್ತು ಮಾರ್ಚ್ 2024 ರ ನಡುವೆ ಸುಮಾರು 6.37 ಲಕ್ಷ ಹೊಸ ಖಾಸಗಿ ಕಾರುಗಳು ಮತ್ತು ದ್ವಿಚಕ್ರ ವಾಹನಗಳನ್ನು ನೋಂದಾಯಿಸಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ (ಏಪ್ರಿಲ್ 2022 ಮತ್ತು ಮಾರ್ಚ್ 2023 ರ ನಡುವೆ) 4.37 ಲಕ್ಷ ಖಾಸಗಿ ವಾಹನಗಳನ್ನು ನೋಂದಾಯಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ, ಬಿಎಂಟಿಸಿ ಬಸ್​ ಇದ್ದರೂ ಖಾಸಗಿ ವಾಹನಗಳ ಬಳಕೆ ಹೆಚ್ಚಳ, ಒಂದು ಕೋಟಿ ದಾಟಿದ ಒಟ್ಟು ವಾಹನಗಳ ಸಂಖ್ಯೆ

ಈ ವರ್ಷ ಹೊಸ ದ್ವಿಚಕ್ರ ವಾಹನಗಳ ನೋಂದಣಿಯಲ್ಲಿ 19% ಹೆಚ್ಚಳವಾದರೆ, ಹೊಸ ಖಾಸಗಿ ಕಾರುಗಳ ಸಂಖ್ಯೆಯು 340% ರಷ್ಟು ಹೆಚ್ಚಾಗಿದೆ. 2022-23ರಲ್ಲಿ, 36,000 ಕ್ಕೂ ಹೆಚ್ಚು ಕಾರುಗಳು ನೋಂದಾಯಿಸಲ್ಪಟ್ಟಿದ್ದು, ಈ ವರ್ಷ ಸುಮಾರು 1.6 ಲಕ್ಷಕ್ಕೆ ಏರಿಕೆ ಆಗಿದೆ ಎಂದು ಬೆಂಗಳೂರು ಮಿರರ್​ ವರದಿ ಮಾಡಿದೆ.

ಇದನ್ನೂ ಓದಿ: ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಸಂಚಾರ

ಹೆಚ್ಚಾಗುತ್ತಿರುವ ಖಾಸಗಿ ವಾಹನಗಳ ಸಂಖ್ಯೆ ಬಗ್ಗೆ ತಜ್ಞರು ಆತಂಕ ವ್ಯಕ್ತಪಡಿಸಿದ್ದು, ” ಹೆಚ್ಚುತ್ತಿರುವ ವಾಹನ ದಟ್ಟಣೆ ಪರಿಸರ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಾಹನ ಹೊರಸೂಸುವ ಹೊಗೆ ಕೆಟ್ಟ ಗಾಳಿಯ ಗುಣಮಟ್ಟಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಹೊರಸೂಸುವಿಕೆ ಹೊಗೆ ಕಳಪೆ ಗಾಳಿಯ ಗುಣಮಟ್ಟವನ್ನು ಉಂಟುಮಾಡುತ್ತದೆ ಎನ್ನುತ್ತಾರೆ ತಜ್ಞರು. ತಜ್ಞರು ಹೇಳುವಂತೆ ವಾಹನಗಳ ಸಂಖ್ಯೆಯಲ್ಲಿನ ಹೆಚ್ಚಳವು ಅನಿರೀಕ್ಷಿತವಲ್ಲ, ಅದರಲ್ಲೂ ಖಾಸಗಿ ಕಾರುಗಳಲ್ಲಿ ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದೆ ಎಂದಿದ್ದಾರೆ.

ವರದಿ: ಪ್ರದೀಪ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ