ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ
ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ ಬಿಎಂಆರ್ಸಿಎಲ್ ಧನ್ಯವಾದ ತಿಳಿಸಿದೆ. ಜುಲೈ 6ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ - ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ.
ಬೆಂಗಳೂರು, ಜುಲೈ 05: ಪ್ರಯಾಣಿಕರ ಒತ್ತಾಯದ ಮೇರೆಗೆ ನಾಳೆಯಿಂದಲೇ (ಜುಲೈ 06) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ (metro) ರೈಲು ಸೇವೆ ಆರಂಭಿಸಲಿದೆ. ಆ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ ಬಿಎಂಆರ್ಸಿಎಲ್ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ನಾಳೆಯಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಜುಲೈ 6 ರಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಿರ್ವಹಿಸಲಿವೆ.
ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ ಬಿಎಂ ಆರ್ಸಿಎಲ್ ಧನ್ಯವಾದ ತಿಳಿಸಿದೆ. ಜುಲೈ 6ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಸಂಚರಿಸಲಿವೆ.
ನಮ್ಮ ಮೆಟ್ರೋ ಟ್ವೀಟ್
A Media Release regarding the change of Time Table on the Purple Line from tommorow i.e. 06.07.2024. Public are requested to note the change and utilize the services accordingly. pic.twitter.com/ccTyjxKlrt
— ನಮ್ಮ ಮೆಟ್ರೋ (@OfficialBMRCL) July 5, 2024
ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39, 10.50, 11.00, 11.22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ ಸಿಬ್ಬಂದಿ!
ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳಿಗೊಮ್ಮೆ ಮೆಟ್ರೋ ಲಭ್ಯವಿರುತ್ತದೆ.
ಇದನ್ನೂ ಓದಿ: ಚಾಲಕರಹಿತ ಮೆಟ್ರೋ ರೈಲಿನ ಟ್ರಯಲ್ ರನ್ ಯಶಸ್ವಿ; ಶೀಘ್ರದಲ್ಲೇ ಮೆಟ್ರೋ ಬಹು ನಿರೀಕ್ಷಿತ ಹಳದಿ ಲೇನ್ ಉದ್ಘಾಟನೆ
ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಲು ಕೋರಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:55 pm, Fri, 5 July 24