ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಪತಿ ತೊರೆದ ಪತ್ನಿ ಬೇರೆಡೆ ವಾಸವಿದ್ದರು. ನಿನ್ನೆ ಕೂಡ ವಿಡಿಯೋ ಕಾಲ್​ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಬಾಗಲಗುಂಟೆಯ ಪತಿ ಮನೆಯಲ್ಲಿ ನೇಣುಬಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ. 

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು
ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: May 16, 2024 | 9:47 AM

ಬೆಂಗಳೂರು, ಮೇ 16: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ (husband) ಮೃತಪಟ್ಟಿರುವಂತಹ ಘಟನೆ ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಅಮಿತ್ ಕುಮಾರ್​ ಜಿಮ್ ಟ್ರೈನರ್ (Gym trainer)​ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ಓರ್ವ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು.

ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ ಬಳಿಕ ಪತಿಗೆ ಸಮಯ ನೀಡುತ್ತಿರಲಿಲ್ಲ ಎನ್ನಲಾಗುತ್ತಿದ್ದು, ಫ್ರೆಂಡ್ಸ್‌ ಜೊತೆ ಪದೇ ಪದೇ ಫೋನ್ ಕಾಲ್​ನಲ್ಲಿರುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.

ಹೀಗಾಗಿ ಪತಿ ತೊರೆದ ಪತ್ನಿ ಬೇರೆಡೆ ವಾಸವಿದ್ದರು. ಮನೆಗೆ ಪತ್ನಿ ವಾಪಾಸ್ ಬರುವಂತೆ ಪತಿ ಅಮಿತ್ ಪದೇ ಪದೇ ಕರೆ ಮಾಡಿ ಮನವಿ ಮಾಡುತ್ತಿದ್ದ. ನಿನ್ನೆ ಕೂಡ ವಿಡಿಯೋ ಕಾಲ್​ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಬಾಗಲಗುಂಟೆಯ ಪತಿ ಮನೆಯಲ್ಲಿ ನೇಣುಬಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ.

ಇದನ್ನೂ ಓದಿ: ಬೆಂಗಳೂರು: ಪ್ರಿಯಕರನ ಜೊತೆ ಐಷಾರಾಮಿ ಬದುಕು ನಡೆಸಬಯಸಿದ್ದ ಯುವತಿ ತಾನು ಬಾಡಿಗೆಗಿದ್ದ ಮನೆ ಮಾಲೀಕಳನ್ನೇ ಕೊಂದಳೇ?

ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ವಿಕ್ಟೋರಿಯಾದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಅನುಮಾನಸ್ಪದವಾಗಿ ಯುವತಿ ಸಾವು

ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಸ್ಪದವಾಗಿ ಯುವತಿ ಸಾವನ್ನಪ್ಪಿದ್ದು, ಮನೆಯಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಯುವತಿ ಶವಪತ್ತೆಯಾಗಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: Hubballi Anjali Murder Case: ತಾನು ಕರೆದ ಕಡೆ ಬಾರದಿದ್ದಕ್ಕೆ ಸಹಪಾಠಿ ಅಂಜಲಿಯನ್ನ ಕೊಲೆ ಮಾಡಿದ್ನಾ ವಿಶ್ವ?

ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ(21) ಮೃತ ಯುವತಿ. ಯುಡಿಆರ್ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಆರಂಭಿಸಲಾಗಿದೆ.

ಯುವಕನ ಶವ ಪತ್ತೆ

ದಾವಣಗೆರೆ: ಓಬಜ್ಜಿಹಳ್ಳಿಯಲ್ಲಿ ಅಪರಿಚಿತ ಯುವಕನ ಶವಪತ್ತೆ ಆಗಿದೆ. ಬೇರೆಡೆ ಕೊಲೆ ಮಾಡಿ ಶವ ಗ್ರಾಮದ ಬಳಿ ಶವತಂದು ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.