ಅನಗತ್ಯವಾಗಿ ನಾಮಪತ್ರ ತಿರಸ್ಕಾರ: ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ವಿರುದ್ಧ ಗಂಭೀರ ಆರೋಪ

ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ ವಿಚಾರವಾಗಿ ಸ್ಕ್ರೂಟಿನಿ ವೇಳೆ ಅನಗತ್ಯವಾಗಿ ನಾಮಪತ್ರ ತಿರಸ್ಕಾರ ಆರೋಪ ಮಾಡಲಾಗಿದೆ. ನಾಮಪತ್ರದ ಕೆಲ ಅಂಶ ಅನಗತ್ಯವಾಗಿ ಉಲ್ಲೇಖಿಸಿ ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ವಿರುದ್ಧ ಆರೋಪ ಕೇಳಿಬಂದಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹೊರತುಪಡಿಸಿ ಉಳಿದ ನಾಮಪತ್ರ ತಿರಸ್ಕಾರಗೊಂಡ ಅಭ್ಯರ್ಥಿಗಳಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅನಗತ್ಯವಾಗಿ ನಾಮಪತ್ರ ತಿರಸ್ಕಾರ: ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ವಿರುದ್ಧ ಗಂಭೀರ ಆರೋಪ
ಅನಗತ್ಯವಾಗಿ ನಾಮಪತ್ರ ತಿರಸ್ಕಾರ: ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ವಿರುದ್ಧ ಗಂಭೀರ ಆರೋಪ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: May 17, 2024 | 6:22 PM

ಬೆಂಗಳೂರು, ಮೇ 17: ರಾಜ್ಯದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ ಒಟ್ಟು 6 ಕ್ಷೇತ್ರಗಳಿಗೆ ಜೂ.3ಕ್ಕೆ ಚುನಾವಣೆ ನಿಗದಿಯಾಗಿದೆ. ಈ ಮಧ್ಯೆ ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಸ್ಕ್ರೂಟಿನಿ ವೇಳೆ ಅನಗತ್ಯವಾಗಿ ನಾಮಪತ್ರ (nomination) ತಿರಸ್ಕಾರ ಆರೋಪ ಕೇಳಿಬಂದಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹೊರತುಪಡಿಸಿ ಉಳಿದ ನಾಮಪತ್ರ ತಿರಸ್ಕಾರ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ (Amlan Aditya Biswas) ವಿರುದ್ಧ ಆರೋಪ ಮಾಡಲಾಗಿದೆ.

ನಾಮಪತ್ರದ ಕೆಲ ಅಂಶ ಅನಗತ್ಯವಾಗಿ ಉಲ್ಲೇಖಿಸಿ ತಿರಸ್ಕಾರ ಆರೋಪ ಮಾಡಿದ್ದು, ದಾಖಲಾತಿಗಳನ್ನೂ ಕೂಡ ತೋರಿಸುತ್ತಿಲ್ಲ ಎಂದು ಕೆಲ ಅಭ್ಯರ್ಥಿಗಳ ಕಿಡಿ ಕಾರಿದ್ದಾರೆ. ಸದ್ಯ ನಾಮಪತ್ರ ತಿರಸ್ಕಾರಗೊಂಡ ಅಭ್ಯರ್ಥಿಗಳಿಂದ ಆಕ್ರೋಶ ಹೊರಹಾಕಲಾಗಿದೆ. ಹೀಗಾಗಿ ಶಾಂತಿನಗರ ಕಚೇರಿಯಲ್ಲಿ ಸ್ಕ್ರೂಟಿನಿ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು.

ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಂದ ಒಗ್ಗಟ್ಟು ಪ್ರದರ್ಶನ: ಮೈತ್ರಿ ಅಭ್ಯರ್ಥಿ ಬೆಂಬಲ ಸೂಚಿಸಿದ ನಿಂಗರಾಜೇಗೌಡ

ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ನಾಯಕರಲ್ಲಿ ಗೊಂದಲ ವಿಚಾರ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಂದ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬಿಜೆಪಿ ಘೋಷಿತ ಅಭ್ಯರ್ಥಿ ನಿಂಗರಾಜೇಗೌಡ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿ ವಿವೇಕಾನಂದಗೆ ನಿಂಗರಾಜೇಗೌಡ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರಿಗೆ ಹಂಚಲು ತಂದಿದ್ದ ಗಿಫ್ಟ್ ಬಾಕ್ಸ್​ಗಳು ಪತ್ತೆ ಹಚ್ಚಿದ ಬಿಜೆಪಿ ಕಾರ್ಯಕರ್ತರು

ಈ ವೇಳೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕ ಶ್ರೀವತ್ಸ, ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿವೇಕಾನಂದ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದರು.

ಇದನ್ನೂ ಓದಿ: ವಿಧಾನ ಪರಿಷತ್​ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಮರಿತಿಬ್ಬೇಗೌಡ ಕಣಕ್ಕೆ

ರಾಜ್ಯ ವಿಧಾನ ಪರಿಷತ್​ಗೆ ಈಶಾನ್ಯ, ನೈಋತ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ, ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ಆರು ಸ್ಥಾನಗಳ ಪೈಕಿ ಐದು ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದೀಗ ಜೆಡಿಎಸ್​ ಬೇಡಿಕೆಯಂತೆಯೇ 2ಸ್ಥಾನ ಬಿಟ್ಟು ಕೊಡೋಕೆ ಬಿಜೆಪಿ ಸಮ್ಮತಿ ನೀಡಿದೆ.

ಕುಮಾರಸ್ವಾಮಿ ಬೇಡಿಕೆಗೆ ಜೆ.ಪಿ.ನಡ್ಡಾ ಹಾಗೂ ವಿಜಯೇಂದ್ರ ಸಮ್ಮತಿ ನೀಡಿದ್ದಾರೆ. 6 ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ರೆ, ಉಳಿದೆರಡು ಕ್ಷೇತ್ರದಲ್ಲಿ ಜೆಡಿಎಸ್​ ಸ್ಪರ್ಧೆ ಮಾಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು