ಬೈಕ್ಗೆ ಬಸ್ ಡಿಕ್ಕಿ: ಮತದಾನಕ್ಕೆಂದು ಹೋಗುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು
ಮತದಾನ ಮಾಡಲು ಹೋಗುತ್ತಿದ್ದ ವೇಳೆ ಮಹಿಳೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮರಣಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಗೇಟ್ ಬಳಿ ನಡೆದಿದೆ.

ಬಸ್ಗೆ ಬೈಕ್ ಡಿಕ್ಕಿಯಾಗಿ ಮತದಾನಕ್ಕೆಂದು ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮರಣ ಹೊಂದಿದ್ದಾಳೆ
ದೇವನಹಳ್ಳಿ: ಮತದಾನ ಮಾಡಲು ಹೋಗುತ್ತಿದ್ದ ವೇಳೆ ಮಹಿಳೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಮರಣಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಗೇಟ್ ಬಳಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ಹೇಮಾವತಿ(25) ಮೃತ ದುರ್ದೈವಿ.
ಕೆ.ಆರ್.ಪುರಂನಿಂದ ಕೋಲಾರಕ್ಕೆ ಮತದಾನ ಮಾಡಲು ಹೇಮಾವತಿ ತನ್ನ ಸಹೋದರನ ಜೊತೆ ಬೈಕ್ನಲ್ಲಿ ಹೋಗುತ್ತಿದ್ದಳು. ಈ ವೇಳೆ, KSRTC ಬಸ್ ಒಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಕೆಳಗೆ ಬಿದ್ದಿದ್ದಾಳೆ. ಡಿಕ್ಕಿಯ ರಭಸಕ್ಕೆ ಹೇಮಾವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ: ಬಸ್ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು



