ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ವಿಡಿಯೋದಲ್ಲಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ
ಮಹಿಳೆ ಸಾನಿಯಾ, ಆಕೆಯ ಪತಿ ರಫ್ಜಾನ್, ಶಾಬಾಜ್ ಈಗ ಪೊಲೀಸರ ವಶದಲ್ಲಿದ್ದಾರೆ. ಬಂಧಿತ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದ್ದರು. ದುಷ್ಕೃತ್ಯ ಬಯಲಾದ ಬಳಿಕ ನಾಪತ್ತೆಯಾಗಿದ್ದರು.
ಬೆಂಗಳೂರು: ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋದಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚೆನ್ನೈನಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳ ಸೆರೆ ಸಿಕ್ಕಿದ್ದಾರೆ. ಆರೋಪಿಗಳು ರಾಮಮೂರ್ತಿನಗರ ಠಾಣೆ ಪೊಲೀಸರ ವಶದಲ್ಲಿದ್ದಾರೆ.
ಮಹಿಳೆ ಸಾನಿಯಾ, ಆಕೆಯ ಪತಿ ರಫ್ಜಾನ್, ಶಾಬಾಜ್ ಈಗ ಪೊಲೀಸರ ವಶದಲ್ಲಿದ್ದಾರೆ. ಬಂಧಿತ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದ್ದರು. ದುಷ್ಕೃತ್ಯ ಬಯಲಾದ ಬಳಿಕ ನಾಪತ್ತೆಯಾಗಿದ್ದರು. ಚೆನೈನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣ ತನಿಖೆಯ ವೇಳೆ ಬೃಹತ್ ಮಾನವ ಕಳ್ಳಸಾಗಣೆ ವಿಚಾರ ಪತ್ತೆಯಾಗಿದೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೇಸ್ ವಿಚಾರಣೆ ಸಂದರ್ಭ ಮಾನವ ಕಳ್ಳಸಾಗಣೆ ವಿಚಾರ ಬೆಳಕಿಗೆ ಬಂದಿದೆ. ಯಾವುದೇ ವೀಸಾ, ಪಾಸ್ಪೋರ್ಟ್ ಇಲ್ಲದೆ ಮಾನವ ಕಳ್ಳಸಾಗಣೆ ಮಾಡಲಾಗುತ್ತದೆ. ದಲ್ಲಾಳಿಗಳು ಜನರನ್ನು ಬಾಂಗ್ಲಾದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಾರೆ ಎಂದು ತಿಳಿದುಬಂದಿದೆ.
ಮಾನವ ಕಳ್ಳಸಾಗಣೆಗೆ ಕೆಲಸ ಮಾಡುವ ದಲ್ಲಾಳಿಗಳು ಭಾರತಕ್ಕೆ ಬರಲು ಇಷ್ಟಪಡುವವರನ್ನು ಸಂಪರ್ಕಿಸುತ್ತಿದ್ದರು. ಬಳಿಕ, ರಾತ್ರಿ ವೇಳೆ ಭಾರತದ ಗಡಿಗೆ ನಡೆದುಕೊಂಡು ಬರುವಂತೆ ಹೇಳುತ್ತಿದ್ದರು. ನಂತರ, ಪಶ್ಚಿಮ ಬಂಗಾಳಕ್ಕೆ ನುಸುಳಿ ಕೆಲವು ದಿನ ಅಲ್ಲೇ ಇರುತ್ತಿದ್ದರು. ಹೀಗೆ ಭಾರತದ ಗಡಿ ತಲುಪಿಸಿದ ಅಲ್ಲಿನ ದಲ್ಲಾಳಿಗೆ 30ರಿಂದ 50 ಸಾವಿರ ರೂಪಾಯಿ ಹಣ ನೀಡಲಾಗುತ್ತಿತ್ತು. ಆಮೇಲೆ, ಮತ್ತೋರ್ವ ದಲ್ಲಾಳಿ ಜೊತೆ ಭಾರತಕ್ಕೆ ಕಳುಹಿಸಿಕೊಡಲಾಗುತ್ತಿತ್ತು ಎಂಬ ಅಂಶ ತಿಳಿದುಬಂದಿದೆ.
ಕಳ್ಳಸಾಗಣೆ ಮೂಲಕ ಭಾರತಕ್ಕೆ ಬಂದ ಜನರಿಗೆ ಪಶ್ಚಿಮ ಬಂಗಾಳದಲ್ಲಿ ದಲ್ಲಾಳಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ. ಆಧಾರ್ ಕಾರ್ಡ್ ಮಾಡಿಸಿದ ನಂತರ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿತ್ತು. ಬೆಂಗಳೂರು, ಹೈದರಾಬಾದ್ ಸೇರಿದಂತೆ ಬೇರೆ ನಗರಗಳಿಗೆ ಕಳುಹಿಸಲಾಗುತ್ತಿತ್ತು. ದೇಶದ ದೊಡ್ಡ ದೊಡ್ಡ ನಗರಗಳಿಗೆ ಯುವತಿಯರ ಸ್ಥಳಾಂತರ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರಬಿದ್ದಿದೆ.
ಇದನ್ನೂ ಓದಿ: ನಾಪತ್ತೆಯಾದ ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣದ ಪ್ರಮುಖ 3 ಆರೋಪಿಗಳು
ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಹೊರಬಿತ್ತು ಬೃಹತ್ ಮಾನವ ಕಳ್ಳಸಾಗಣೆ ಜಾಲದ ಕರಾಳ ಮುಖ
Published On - 8:46 pm, Tue, 1 June 21