ಬ್ಯಾಂಕ್ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಬ್ಯಾಂಕ್ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ಸ್ ಆ್ಯಂಡ್ ಇಂಪೋರ್ಟ್ಸ್ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ಸ್ ಆ್ಯಂಡ್ ಇಂಪೋರ್ಟ್ಸ್ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್ಪೋರ್ಟ್ಸ್ ಆ್ಯಂಡ್ ಇಂಪೋರ್ಟ್ಸ್ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ