ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ: 60 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ 60 ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವಾಚ್​ ಮ್ಯಾನ್​, ಸಿಪಾಯಿ, ಕಿರಿಯ ಸಹಾಯಕ, ವಾಹನ ಚಾಲಕ ಸೇರಿದಂತೆ ಹಲವು ಹುದ್ದೆಗಳಿಗೆ 10ನೇ, 12ನೇ, ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಇಲ್ಲ. ಆಯ್ಕೆಯಾದವರಿಗೆ 14,550 ರಿಂದ 43,200ರೂ. ವೇತನ ಸಿಗಲಿದೆ. ಆಸಕ್ತರು ಸೆ. 15 ರೊಳಗೆ ಅರ್ಜಿ ಸಲ್ಲಿಸಿ.

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ: 60 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ
Image Credit source: Getty Images

Updated on: Sep 06, 2026 | 2:33 PM

ವಿಜಯಪುರದ ಪ್ರಸಿದ್ಧ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ 2026ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 60 ವಿವಿಧ ಹುದ್ದೆಗಳ ಭರ್ತಿಗೆ ಬೃಹತ್ ನೇರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಕಿರಿಯ ವ್ಯವಸ್ಥಾಪಕರು, ಹಿರಿಯ ವ್ಯವಸ್ಥಾಪಕರು, ಕಿರಿಯ ಸಹಾಯಕರು, ವಾಹನ ಚಾಲಕ, ಅಟೆಂಡರ್, ವಾಚ್‌ಮ್ಯಾನ್ ಹಾಗೂ ರಾತ್ರಿ ಕಾವಲುಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ವೇತನ ಶ್ರೇಣಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ ಅಥವಾ ಯಾವುದೇ ಪದವಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬ್ಯಾಂಕಿನ ನಿಯಮಾವಳಿ ಹಾಗೂ ಹುದ್ದೆಯ ಆಧಾರದ ಮೇಲೆ ಮಾಸಿಕ 14,550 ರಿಂದ 43,200 ರೂ. ರವರೆಗೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ

ಆಯ್ಕೆ ಪ್ರಕ್ರಿಯೆ ಮತ್ತು ವಯೋಮಿತಿ:

ಈ ನೇಮಕಾತಿಯ ವಿಶೇಷತೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ (ಮೆರಿಟ್) ನೇರವಾಗಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಅರ್ಜಿ ಶುಲ್ಕ ಮತ್ತು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1200ರೂ. ಹಾಗೂ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 600ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆ.26 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಸೆ. 15 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ssbankvijaypur.com ಗೆ ಭೇಟಿ ನೀಡಿ ಕೂಡಲೇ ಅರ್ಜಿ ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us