Bank Strike: ಇಂದೇ ಮುಗಿಸಿಕೊಳ್ಳಿ ಬ್ಯಾಂಕ್ ಕೆಲಸ, 4 ದಿನ ಸಾಲು ಸಾಲು ರಜೆ.. ಮಾರ್ಚ್ 15 ಮತ್ತು 16 ಬ್ಯಾಂಕ್ ನೌಕರರ ಮುಷ್ಕರ
Bank Holidays: ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.
ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.
ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು? ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್‌ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
ಇದನ್ನೂ ಓದಿ: ಇಪಿಎಫ್, ಕ್ರೆಡಿಟ್ ಕಾರ್ಡ್, ಎಲ್ಪಿಜಿ, ಬ್ಯಾಂಕ್ ಡೆಪಾಸಿಟ್ ಇನ್ಷೂರೆನ್ಸ್ ಬಗ್ಗೆ ನಿಮಗೆಷ್ಟು ಗೊತ್ತು?
Published On - 8:38 am, Fri, 12 March 21