AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ದಸರಾ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಉದ್ಘಾಟಕರ ಕುರಿತ ವಿರೋಧ ಮುಂದುವರೆದಿದೆ. ಈ ಮಧ್ಯೆ ಬಾನು ಮುಷ್ತಾಕ್​ಗೆ ಆಹ್ವಾನ ಹಿನ್ನೆಲೆ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
ಬಾನು ಮುಷ್ತಾಕ್, ಮಾಜಿ ಸಂಸದ ಪ್ರತಾಪ್ ಸಿಂಹ
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on:Sep 06, 2025 | 3:31 PM

Share

ಬೆಂಗಳೂರು, ಸೆಪ್ಟೆಂಬರ್​ 06: ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಬಗ್ಗೆ ವಿರೋಧ ಕೇಳಿಬಂದಿದರೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೇ ಇತ್ತೀಚೆಗೆ ಹಾಸನದ ಅಮೀರ್ ಮೊಹಲ್ಲಾದಲ್ಲಿನ ಅವರ ನಿವಾಸಕ್ಕೆ ತೆರಳಿ, ಸರ್ಕಾರದ ಪರ ಜಿಲ್ಲಾಡಳಿತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಸದ್ಯ ಈ ವಿಚಾರವಾಗಿ ಮಾಜಿ ಸಂಸದ ಪ್ರತಾಪ್​ ಸಿಂಹ (Pratap Simha) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್​​ರನ್ನು ಘೋಷಿಸಿದಾಗಿನಿಂದಲೂ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದರು. ಅವರ ವಿರುದ್ಧ ಕಿಡಿಕಾರಿದ್ದರು. ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬಾನು ಮುಷ್ತಾಕ್ ಹಿಂದೂ ವಿರೋಧಿ ಭಾವನೆ ಹೊಂದಿದ್ದಾರೆ

ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದು, ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ‘ಬಾನು ಮುಷ್ತಾಕ್ ಹಿಂದೂ ವಿರೋಧಿ,‌ ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ’. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ.

ಇದನ್ನೂ ಓದಿ
Image
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
Image
ಮೊದಲ ಬಾರಿ ದಸರಾ ಬಗ್ಗೆ ಬರೆದಿದ್ದು, ಆನೆಗಳಿಗೆ ಅಂಬಾರಿ ಕಟ್ಟೋದು ಮುಸ್ಲಿಮರು
Image
ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳಲ್ಲ, ನಮ್ಮ ದೇವರು ಹೇಗೆ ಕರೆಸಿಕೊಳ್ಳುತ್ತೆ?
Image
ಶಿವಕುಮಾರ್ ಧರ್ಮದ ಬಗ್ಗೆ ಜ್ಞಾನ ಹಂಚೋದು ಒಂದು ವಿಡಂಬನೆ: ಪ್ರತಾಪ್ ಸಿಂಹ

ಇದನ್ನೂ ಓದಿ: ಬಾನು ಮುಷ್ತಾಕ್​ಗೆ ಚಾಮುಂಡಿ ತಾಯಿಯ ಶಾಪ ತಟ್ಟಬಾರದು ಅಂದರೆ: ಬಸನಗೌಡ ಯತ್ನಾಳ್ ಹೀಗೆಂದಿದ್ದೇಕೆ ನೋಡಿ

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್​ರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಇನ್ನೂ ಹಿಂದೂಪರ ಸಂಘಟನೆಗಳು ಕೂಡ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಿಭಟನೆ ಮಾಡಿದ್ದವು. ಇತ್ತೀಚೆಗೆ ರಾಷ್ಟ್ರ ರಕ್ಷಣಾ ಸೇನೆ ಕಾರ್ಯಕರ್ತರು ಬಾನು ಮುಷ್ತಾಕ್​​ರನ್ನ ಭೇಟಿಯಾಗಿ, ದಸರಾ ಉದ್ಘಾಟನೆ ಮಾಡಬೇಡಿ, ಆಹ್ವಾನವನ್ನ ತಿರಸ್ಕರಿಸಿ ಎಂದು ಮನವಿ ಮಾಡಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಅಧಿಕೃತ ಆಹ್ವಾನ

ಅಧಿಕೃತ ಆಹ್ವಾನ ಬಳಿಕ ಪ್ರತಿಕ್ರಿಯಿಸಿದ್ದ ಬಾನು ಮುಷ್ತಾಕ್, ಆಹ್ವಾನ ಕೊಟ್ಟಿರೋದಕ್ಕೆ ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದ್ದರು. ಇನ್ನು ದಸರಾ ಹಬ್ಬದ ಕುರಿತು ಮಾತನಾಡುತ್ತಾ ದಸರಾ ನಮ್ಮ ಎಲ್ಲರ ಮನೆಯ ಹಬ್ಬ ಎಂದು ಕೊಂಡಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:57 pm, Sat, 6 September 25