ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ.

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ
ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ
Follow us
TV9 Web
| Updated By: sandhya thejappa

Updated on: Jul 14, 2021 | 11:04 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಶುರುಮಾಡಿದೆ. ಆದರೆ ಪಬ್​ಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿಲ್ಲ. ಹೀಗಾಗಿ ಜುಲೈ 19ರ ನಂತರವಾದರೂ ಪಬ್​ಗಳನ್ನ ತೆರೆಯಲು ಅನುಮತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ ಮಾಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. 10 ತಿಂಗಳಿನಿಂದ ಪಬ್​ಗಳು ಸಂಪೂರ್ಣವಾಗಿ ಮುಚ್ಚಿವೆ. ಸರ್ಕಾರ ಈಗ ನಮ್ಮ ಗಾಯದ ಮೇಲೆ ಬರೆ ಎಳೆದಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ. ವ್ಯಾಪಾರ ಇಲ್ಲದ ಮಾಲೀಕರಿಂದ ಇಷ್ಟು ಮೊತ್ತ ಕಟ್ಟಿಸಿಕೊಳ್ಳುವುದು ಸರಿಯೇ? ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಪ್ರಶ್ನಿಸಿದ್ದಾರೆ.

ಪಬ್ ವ್ಯಾಪರ ಕೋಟಿ ಕೋಟಿ ಬಂಡವಾಳ ಹೂಡಿಕೆಯಿಂದ ಆರಂಭಿಸುವುದು. ಆದರೆ ಕಳೆದ ಒಂದು ವರ್ಷದಲ್ಲಿ ವ್ಯಾಪಾರ ಇಲ್ಲದೆ ಪಬ್ ಕ್ಷೇತ್ರ ಮುಳುಗಿ ಹೋಗಿದೆ. ಬೆಂಗಳೂರಿನಲ್ಲಿ ಸುಮಾರು 300 ಪಬ್ಗಳ ಸ್ಥಿತಿ ದಯನೀಯ ಸ್ಥಿತಿಯಲ್ಲಿದೆ. ಜುಲೈ 19ರ ನಂತರ ಎಲ್ಲಾ ಕ್ಷೇತ್ರಗಳಂತೆ ಪಬ್​ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಬೇಕೆಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ

Karnataka Rain: ಕೊಡಗಿನಲ್ಲಿ ಮುಂದುವರಿದ ವರುಣ; ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆ

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಮೈನಿಂಗ್ ಕಾಲೇಜು; ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಕಲ ಸಿದ್ಧತೆ

(Bar and Pub Association has appealed to the Karnataka government to open the pubs from July 19)

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ