AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ನಿಲ್ಲದ ಸಂಘರ್ಷ: ಮತ್ತೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗ ವಾಗ್ದಾಳಿ

ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರಿಸಿ ಬಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. ಇದರೊಂದಿಗೆ, ಅಧಿವೇಶನದ ಸಮಯದಲ್ಲೇ ಬಿಜೆಪಿ ಆಂತರಿಕ ಕಲಹ ಮತ್ತೆ ಬಯಲಿಗೆ ಬಂದಿದೆ. ಯತ್ನಾಳ್ ಹೇಳಿದ್ದೇನೆಂಬ ಪೂರ್ಣ ವಿವರ ಇಲ್ಲಿದೆ.

ಬಿಜೆಪಿಯಲ್ಲಿ ನಿಲ್ಲದ ಸಂಘರ್ಷ: ಮತ್ತೆ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಯತ್ನಾಳ್ ಬಹಿರಂಗ ವಾಗ್ದಾಳಿ
ಯತ್ನಾಳ್, ಯಡಿಯೂರಪ್ಪ, ವಿಜಯೇಂದ್ರ
Anil Kalkere
| Edited By: |

Updated on: Dec 17, 2024 | 12:54 PM

Share

ಬೆಳಗಾವಿ, ಡಿಸೆಂಬರ್ 17: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಯೋಜಿಸಿದ್ದ ಔತಣ ಕೂಟದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.

ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ. ಅವರು ಇಲ್ಲಿ ಔತಣ ಕೂಟಕ್ಕೆ ಕರೆಯುತ್ತಾರೆ. ದಾವಣಗೆರೆಯಲ್ಲಿ ಚೇಲಾಗಳನ್ನು ಬಿಟ್ಟು ಸಭೆ ಮಾಡುತ್ತಾರೆ. ಅವರ ಗನ್​ಮ್ಯಾನ್​ಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್‌ ಉಚ್ಚಾಟನೆ ಮಾಡಿ ಎಂದ ಮಾಹಿತಿ ನಮಗೆ ದೊರೆತಿದೆ. ಯಡಿಯೂರಪ್ಪ ಸೇರಿ ಕೆಲವು ಶಾಸಕರು ಮಾತನಾಡಿದ್ದು ಗೊತ್ತಾಗಿದೆ. ಇದರ ಹಿಂದೆ ಯಡಿಯೂರಪ್ಪ ಕುತಂತ್ರ ಯಾವಾಗಲೂ ಇದ್ದೇ ಇರುತ್ತದೆ. ಯತ್ನಾಳ್ ವಿಪಕ್ಷ ನಾಯಕ, ಶೋಭಾ ಕರಂದ್ಲಾಜೆ‌ ರಾಜ್ಯಾಧ್ಯಕ್ಷರಾಗಲಿ ಎಂದು ಈ ಹಿಂದೆಯೂ ವಿಜಯೇಂದ್ರ ಹೇಳಿಕೆ ಕೊಟ್ಟಿದ್ದರು. ಆದರೆ, ಅದಾದ ಎರಡೇ ದಿನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಆಯಿತು. ಸಭೆ ಮಾಡಿದ್ದಕ್ಕೆ ನನ್ನ ವಿರೋಧ ಇದೆ ಎಂದು ವಿಜಯೇಂದ್ರ ಹೇಳುತ್ತಾರೆ. ಇವರದ್ದು ನಾಟಕದ ಕಂಪನಿ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದು ಯತ್ನಾಳ್​ ಕಿಡಿಕಾರಿದ್ದಾರೆ.

ಯಡಿಯೂರಪ್ಪ ಒಬ್ಬರೇ ಪಕ್ಷ ಕಟ್ಟಿದ್ದಾ: ಯತ್ನಾಳ್ ಪ್ರಶ್ನೆ

ನಾವು 35-40 ವರ್ಷಗಳಿಂದ ಬಿಎಸ್​ವೈ ಜೊತೆಗೇ ಜೀವನ ಮಾಡಿದ್ದಲ್ಲವೇ? ಯಡಿಯೂರಪ್ಪ ಒಬ್ಬರೇ ಬಿಜೆಪಿ ಕಟ್ಟಿದ್ದಾರಾ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ. ನಾವೇ ಪೆಟ್ರೋಲ್ ಹಾಕಿ ಬಸ್​​ ಟಿಕೆಟ್ ಕೊಡಿಸಿ ಕಳುಹಿಸಿ ಕೊಟ್ಟೆವು. ಈಗ ಅವರ ಶಿಷ್ಯಂದಿರು ನಮಗೆ, ‘ಸೈಕಲ್ ಹೊಡೆದಿದ್ದು’ ಎಂದು ಹೇಳುತ್ತಾರೆ. ಸ್ವತಃ ಯಡಿಯೂರಪ್ಪ ಮನೆಯಲ್ಲೇ ಭಿನ್ನಮತೀಯರ ಸಭೆ ಆಗುತ್ತದೆ. ಔತಣಕೂಟ ಮಾಡುವುದು, ಅಲ್ಲಿಂದ ಬೆನ್ನಿಗೆ ಚಾಕು ಹಾಕುವುದು ಅಲ್ಲ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟಕ್ಕೆ ಅನುಮತಿ ನೀಡದಿರಲು ಬೆಳಗಾವಿ ಡಿಸಿ ಸರ್ವಾಧಿಕಾರ ನಡೆಸುತ್ತಿದ್ದಾರೆಯೇ? ಬಸನಗೌಡ ಯತ್ನಾಳ್

ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂಥ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಇತ್ತೀಚೆಗಷ್ಟೇ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ನಂತರ ದೆಹಲಿಗೆ ತೆರಳಿ ಅವರು ನೋಟಿಸ್​ಗೆ ಉತ್ತರ ನೀಡಿದ್ದರು. ಆ ನಂತರ ಹೈಕಮಾಂಡ್ ಸೂಚನೆಯಿಂದ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗುತ್ತಿದೆ ಎನ್ನುವಷ್ಟರಲ್ಲೇ ಮತ್ತೆ ವಾಗ್ದಾಳಿ ಆರಂಭಿಸಿದ್ದರು. ಇದೀಗ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Anil Kalkere
Anil Kalkere
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ