ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ

ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಆಗಮಿಸಿದ್ದಕ್ಕೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಟ್ವೀಟ್​ ಮೂಲಕ ಸರ್ಕಾರದ ವಿರುದ್ಧ​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ
ಬಸನಗೌಡ ಪಾಟೀಲ್​ ಯತ್ನಾಳ್
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Aug 06, 2024 | 3:01 PM

ಬೆಂಗಳೂರು, ಆಗಸ್ಟ್​ 06: ಬೆಂಗಳೂರಿನ (Bengaluru) ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಮುಸ್ಲಿಂ ಮೌಲ್ವಿ ಬಂದಿದ್ದು, ಇದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ (Sheikh Abubakar Ahmed) ಸರ್ಕಾರದ “ಜಿ” ಸಿರೀಸ್​ನ ಕಾರಿನಲ್ಲಿ ಪೊಲೀಸ್​ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ ಕಾರಿನಲ್ಲಿ ಬಂದಿರುವ ವಿಡಿಯೋವನ್ನು ಶಾಸಕ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ಪೊಲೀಸ್ ಭದ್ರತೆ ಹಾಗೂ ಪೊಲೀಸ್​ ಭದ್ರತೆ ಮತ್ತು ಪ್ರೊಟೋಕಾಲ್​​ ಅನ್ನು ನೀಡಲಾಗಿದೆ. ಅಲ್ಲದೆ, “ಜಿ” ಸಿರಿಸ್​ನ ಸರ್ಕಾರಿ ಕಾರಿನಲ್ಲಿ ಏಕೆ ಬಂದರು? ಇದು ಶಿಷ್ಟಾಚಾರದ ನಿಯಮಗಳ ಉಲ್ಲಂಘನೆಯಲ್ಲವೇ? ಎಂದು ಸರ್ಕಾರಕ್ಕೆ ಯತ್ನಾಳ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅನುಮಾನಾಸ್ಪದ ಸಾವು: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್

ಅಲ್ಪಸಂಖ್ಯಾತರ ಮತಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ಮುಖಂಡರಿಗೆ ಅನುಕೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ನಿಯಮಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ತೆರಿಗೆದಾರರ ಹಣ ವ್ಯರ್ಥವೂ ಆಗಿದೆ. ರಾಜ್ಯವು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಸಂದರ್ಭದಲ್ಲಿ ಸರ್ಕಾರ ಈ ರೀತಿ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ