AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸರ್ಕಾರ, ಪೊಲೀಸ್ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದರ ಮಧ್ಯ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗೆ ಮಾಡಿದ್ದಕ್ಕೆ ಡಿಜಿ&ಐಜಿಪಿ ಅಲೋಕ್​​ ಮೋಹನ್​ರಿಂದ ಬಹುಮಾನ ಘೋಷಣೆ ಮಾಡಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿವೆ.

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ
ಬಸನಗೌಡ ಪಾಟೀಲ್ ಯತ್ನಾಳ್
ರಮೇಶ್ ಬಿ. ಜವಳಗೇರಾ
|

Updated on: Dec 22, 2024 | 6:15 PM

Share

ಬೆಳಗಾವಿ/ಧಾರವಾಡ, (ಡಿಸೆಂಬರ್ 22): ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆ ಮಾಡಿದ್ದಕ್ಕೆ ನಗರದ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ಅವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಡಿಜಿ & ಐಜಿಪಿ ಅಲೋಕ್​​ ಮೋಹನ್​ ಅವರು ಬೆಳಗಾವಿ ನಗರದ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ಅವರಿಗೆ 10,000 ನಗದು ಘೋಷಿಸಿದ್ದಾರೆ. ಆದ್ರೆ, ಇದಕ್ಕೆ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಯತ್ನಾಳ್, ಬೆಳಗಾವಿಯಲ್ಲಿ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 10 ಸಾವಿರ ರೂಪಾಯಿ ಬಹುಮಾನ ನೀಡಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಖುದ್ದು ADGP ಶ್ರೇಣಿಯ ಅಧಿಕಾರಿಗಳೇ ಫೀಲ್ಡ್ ಗೆ ಇಳಿದಿದ್ದು, ತಾವು ಮಾಡಿದ್ದು ಸರಿ ಎಂದು ಸಮಜಾಯಿಷಿಯನ್ನು ಸಹ ನೀಡಿದ್ದರು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಜನರ ಮೇಲೆ ಲಾಠಿಚಾರ್ಜ್: ಸರ್ಕಾರ, ಗೃಹ ಇಲಾಖೆಗೆ ಹೈಕೋರ್ಟ್​ ನೋಟಿಸ್​

ಕಿಂಚಿತ್ತೂ ಮಾನವೀಯತೆ ಇಲ್ಲದ ಅಧಿಕಾರಿಗಳ ಹೆಸರನ್ನು ಮರೆಯದಿರಿ. ಲಾಠಿ ಪ್ರಹಾರ ನಡೆಸಿದ್ದವರನ್ನು ಹಾಗೂ ಲಾಠಿ ಬೀಸಲು ಪ್ರಚೋದನೆ ಕೊಟ್ಟ ನಿರ್ಲಜ್ಜ ಕಾಂಗ್ರೆಸ್ ಸರ್ಕಾರವನ್ನು ಪಂಚಮಸಾಲಿಗಳು ಎಂದಿಗೂ ಕ್ಷಮಿಸುವುದಿಲ್ಲ ಎಂದು ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ಇವರಿಗೆ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಉತ್ತಮ ಕರ್ತವ್ಯ ನಿರ್ವಹಣೆಗೆ 10,000 ರೂ ಬಹುಮಾನ ನೀಡಿದ್ದಾರೆ. ಇನ್ಸ್ಪೆಕ್ಟರ್ ಗಡ್ಡೇಕರ ಹಾಗೂ ಐಪಿಎಸ್ ಅಧಿಕಾರಿ ಹಿತೇಂದ್ರ ಪಂಚಮಸಾಲಿ ಸಮುದಾಯಕ್ಕೆ 2 A ಮೀಸಲು ನೀಡಬೇಕೆಂದು ಹೋರಾಟ ಮಾಡುತ್ತಿದ್ದವರ ಮೇಲೆ ಲಾಠಿ ಬೀಸಿ ಅಮಾನವೀಯವಾಗಿ ನಡೆದುಕೊಂಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.