ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

Panchamasali Community: ನಮ್ಮಲ್ಲಿ ಸುಮಾರು 80 ಲಕ್ಷ ಹಿಂದುಳಿದ ವರ್ಗದ ಜನರಿದ್ದಾರೆ. ಹೀಗಾಗಿ ನಮಗೆ 2A ಮೀಸಲಾತಿಯನ್ನು ಕೊಡಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ
ಬಸವ ಜಯಮೃತ್ಯುಂಜಯ ಶ್ರೀ
Follow us
TV9 Web
| Updated By: ganapathi bhat

Updated on: Aug 23, 2021 | 2:37 PM

ಮೈಸೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರವಾಗಿ ಮೈಸೂರಿನಲ್ಲಿ ಬಸವ ಜಯಮೃತ್ಯುಂಜಯಶ್ರೀ ಸುದ್ದಿಗೋಷ್ಠಿ ನಡೆಸಿದ್ದಾರೆ. ಸರ್ಕಾರ ಕೊಟ್ಟ ಗಡುವು ಮುಗಿಯುತ್ತಿದೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಸಲು ಬೃಹತ್ ರಾಜ್ಯ ಅಭಿಯಾನ ನಡೆಸುತ್ತೇವೆ. ಪ್ರತಿಜ್ಞಾ ಪಂಚಾಯತ್ ಘೋಷವಾಕ್ಯದೊಂದಿಗೆ ಅಭಿಯಾನ ನಡೆಸಲಿದ್ದೇವೆ. ಮಲೆಮಹದೇಶ್ವರ ಬೆಟ್ಟದಲ್ಲಿ ಅಭಿಯಾನ ಉದ್ಘಾಟಿಸಿ ಆರಂಭ ಆಗಲಿದೆ ಎಂದು ಬಸವ ಜಯಮೃತ್ಯುಂಜಯ ಶ್ರೀ ತಿಳಿಸಿದ್ದಾರೆ.

ಹೋರಾಟದಿಂದ ಹಿಂದೆ ಸರಿಯದಿರುವುದು ಇದರ ಉದ್ದೇಶ. ಯುವಕರನ್ನು ಹೆಚ್ಚಾಗಿ ಇದರಲ್ಲಿ ಅಳವಡಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಈ ಬೇಡಿಕೆಯಿಂದ ಹೊರಗೆ ಬರಬಾರದು. ಆ ರೀತಿ ಈ ಪ್ರತಿಜ್ಞೆಯನ್ನ ತೆಗೆದುಕೊಳ್ಳುತ್ತೇವೆ. ನಮ್ಮಲ್ಲಿ ಸುಮಾರು 80 ಲಕ್ಷ ಹಿಂದುಳಿದ ವರ್ಗದ ಜನರಿದ್ದಾರೆ. ಹೀಗಾಗಿ ನಮಗೆ 2A ಮೀಸಲಾತಿಯನ್ನು ಕೊಡಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಮಗೆ 3A ಮೀಸಲಾತಿ ಕೊಟ್ಟಿದ್ದಾರೆ. ಬದಲಾಗಿ ನಮಗೆ 2A ಮೀಸಲಾತಿ ಕೊಡಲೇಬೇಕು. ಸರ್ಕಾರ ನಮ್ಮ ಲಿಂಗಾಯತ ಗೌಡ, ದೀಕ್ಷಾ ಲಿಂಗಾಯತ, ಪಂಚಮಸಾಲಿ, ಹೀಗೆ ಅನೇಕ‌ ಸಮಾಜ ಒಗ್ಗೂಡಿ ಎಲ್ಲರಿಗೂ 2A ಮೀಸಲಾತಿ‌ ಕೊಡಬೇಕು ಎಂದು ಸ್ವಾಮೀಜಿ ಕೇಳಿದ್ದಾರೆ.

ಈಗಾಗಲೇ ಬೆಂಗಳೂರಲ್ಲಿ ಬೃಹತ್ ಹೋರಾಟ ಮಾಡಿದ್ದೇವೆ. ಅದು ಮತ್ತೊಮ್ಮೆ ನಡೆಯದಂತೆ ಸರ್ಕಾರ‌ ನಡೆದುಕೊಳ್ಳುವ ವಿಶ್ವಾಸ ಇದೆ. ಈ ಹಿಂದೆ ಕಾನೂನು ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನಮಗೆ ಮೀಸಲಾತಿ ಭರವಸೆ ನೀಡಿದ್ದರು. ಆದರೆ ಇಂದು ಅವರೇ ಸಿಎಂ ಆಗಿದ್ದಾರೆ. ಅವರು ನಮಗೆ 2A ಮೀಸಲಾತಿ ಕೊಡುವ ವಿಶ್ವಾಸ ಇದೆ. ಸುಪ್ರೀಂ ಕೋರ್ಟ್ ಅನ್ವಯ ಮೀಸಲಾತಿ ಶೇಕಡಾ 50 ಮೀರಬಾರದು. ಶೇಕಡಾ 50ರ ಒಳಗೆ ನಮಗೆ ಮೀಸಲಾತಿ ಕಲ್ಪಿಸಿಕೊಡಿ ಎಂದಷ್ಟೇ ನಾವು ಕೇಳುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಮೀಸಲಾತಿ ನಿಲ್ಲಿಸಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಆಧರಿಸಿ ಮೀಸಲಾತಿ ಒದಗಿಸಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

ಪ್ರಬಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಡಿ; ಜಾತಿ ಗಣತಿ ಆಧರಿಸಿ ಬಜೆಟ್ ಮಂಡಿಸಿ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ