ಪಂಚಮಸಾಲಿ ಮೀಸಲಾತಿ ಹೋರಾಟ: ಅಕ್ಟೋಬರ್ 1ರಿಂದ ಸತ್ಯಾಗ್ರಹ ನಡೆಸಲು ತೀರ್ಮಾನ- ಬಸವ ಜಯಮೃತ್ಯುಂಜಯಶ್ರೀ

2A Reservation: ಸಿಎಂ ಬೊಮ್ಮಾಯಿ ಯಡಿಯೂರಪ್ಪನವರ ಪರಮ ಶಿಷ್ಯ. ರೈಟ್ ಪರ್ಸನ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮೀಸಲಾತಿ ನೀಡಿದರೆ ಸನ್ಮಾನ, ಇಲ್ಲವಾದರೆ ಸತ್ಯಾಗ್ರಹ ಎಂದು ಕೊಪ್ಪಳ ನಗರದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ: ಅಕ್ಟೋಬರ್ 1ರಿಂದ ಸತ್ಯಾಗ್ರಹ ನಡೆಸಲು ತೀರ್ಮಾನ- ಬಸವ ಜಯಮೃತ್ಯುಂಜಯಶ್ರೀ
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Sep 19, 2021 | 2:50 PM

ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತೇವೆ. ಅಕ್ಟೋಬರ್ 1 ರಿಂದ ಸತ್ಯಾಗ್ರಹ ಆರಂಭಕ್ಕೆ ಸಮುದಾಯ ತೀರ್ಮಾನಿಸಿದೆ. ಅಕ್ಟೋಬರ್ 1 ರ ಒಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೀಸಲಾತಿ ಘೋಷಿಸದಿದ್ರೆ ಹೋರಾಟ ಮಾಡುತ್ತೇವೆ. ಬೆಂಗಳೂರಲ್ಲೇ ಹೋರಾಟ ಆರಂಭಿಸುವುದಕ್ಕೆ ತೀರ್ಮಾನ ಮಾಡಿದ್ದೇವೆ. ಈ ಹಿಂದಿನ ಮುಖ್ಯಮಂತ್ರಿ ಅಧಿವೇಶನದಲ್ಲಿ ಮಾತು ಕೊಟ್ಟಿದ್ದರು. ಈಗ ಹಾಲಿ ಸಿಎಂ ಅಧಿವೇಶನದಲ್ಲಿ ಸ್ಪಷ್ಟೀಕರಣ ಕೊಡಬೇಕು. ಸಮುದಾಯಕ್ಕೆ ಮೀಸಲಾತಿಗೆ ವಿಳಂಬ ಧೋರಣೆ ಯಾಕೆ? ಅಧಿವೇಶನದಲ್ಲಿ ನಮ್ಮ ಸಮಾಜದ ಶಾಸಕರು ಮಾತಾಡಬೇಕು. ನಮ್ಮ ಲಿಂಗಾಯತ ಸಮುದಾಯದವರು ಸಿಎಂ ಆಗಿದ್ದಾರೆ. ಸಿಎಂ ಬೊಮ್ಮಾಯಿ ಯಡಿಯೂರಪ್ಪನವರ ಪರಮ ಶಿಷ್ಯ. ರೈಟ್ ಪರ್ಸನ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಮೀಸಲಾತಿ ನೀಡಿದರೆ ಸನ್ಮಾನ, ಇಲ್ಲವಾದರೆ ಸತ್ಯಾಗ್ರಹ ಎಂದು ಕೊಪ್ಪಳ ನಗರದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಮಾಡ್ತಿರುವ ವಿಚಾರವಾಗಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಆ ಬಗ್ಗೆ ಕೋರ್ಟ್​​ ಆದೇಶವಿದೆ, ಆ ಜಿಲ್ಲಾಡಳಿತಕ್ಕೆ ಸಂಬಂಧಿಸಿದ್ದು. ನಾನು ಅದಕ್ಕೆ ಯಾಕೆ ಪ್ರತಿಕ್ರಿಯೆ ನೀಡಲಿ. ಎಲ್ಲರಿಗೂ ಕಾನೂನು ಒಂದೇ ಇರಲಿ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಬಾಹುಬಲಿ ಇದ್ದಂಗೆ. ಅವರು ಹೊರಗೂ ಗುಡುಗ್ತಾರೆ, ಒಳಗೂ ಗುಡುಗ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದಾರೆ.

ಈ ವೇಳೆ, ಯಡಿಯೂರಪ್ಪರಿಂದಲೇ ಸಚಿವ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದೆ ಎಂದು ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಯಮೃತ್ಯುಂಜಯಶ್ರೀ ಆರೋಪ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ನಗರದಲ್ಲಿ ಜಯಮೃತ್ಯುಂಜಯಶ್ರೀಗಳು ಹೇಳಿಕೆ ನೀಡಿದ್ದಾರೆ. ನಮ್ಮವರು ಮುಖ್ಯಮಂತ್ರಿ ಆಗ್ತಾರೆಂಬ ಅಪೇಕ್ಷೆ ಇತ್ತು. ಆದರೆ ಯಡಿಯೂರಪ್ಪರಿಂದಲೇ ನಿರಾಣಿಗೆ ಸಿಎಂ ಸ್ಥಾನ ತಪ್ಪಿದೆ ಎಂದು ಜಯಮೃತ್ಯುಂಜಯಶ್ರೀ ಹೇಳಿದ್ದಾರೆ.

ಬಿಜೆಪಿ ಒಂದು ನಾಟಕ ಕಂಪೆನಿ ಇದ್ದಂತೆ: ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದಿದೆ. ಅವರು ಚುನಾವಣೆ ವೇಳೆ ಮಾತ್ರ ದೇವಾಲಯಗಳ ಬಗ್ಗೆ ಮಾತಾಡ್ತಾರೆ. ಚುನಾವಣೆ ಮುಗಿದ ಬಳಿಕ ಎಲ್ಲವನ್ನೂ ಕೈಬಿಡುತ್ತಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ದೇವಾಲಯವನ್ನು ಒಡೆದಿದ್ದಾರೆ. ಬಿಜೆಪಿ ಒಂದು ನಾಟಕ ಕಂಪನಿ ಇದ್ದಂತೆ ಎಂದು ಕೊಪ್ಪಳದಲ್ಲಿ ವಿಜಯಾನಂದ ಕಾಶಪ್ಪನವರ್ ವಾಗ್ದಾಳಿ ನಡೆಸಿದ್ದಾರೆ.

ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿದ ವಿಜಯಾನಂದ ಕಾಶಪ್ಪನವರ್, ಬಿಜೆಪಿ ಅವರಿಗೆ ಪೆಟ್ರೋಲ್ ಹಾಕಿಸಿಕೊಳ್ಳುವ ಸಾಮರ್ಥ್ಯ ಶಕ್ತಿ ಇದೆ. ಅದಕ್ಕೆ ಬೆಲೆ ಏರಿಕೆ ಮಾಡುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಅವರು 300 ರೂ. ಮಾಡ್ತಾರೆ, 200 ರೂ. ಮಾಡ್ತಾರೆ. ಆದರೆ ಬಡವರು, ಕೂಲಿಕಾರ್ಮಿಕರು, ಕುಶಲ ಕರ್ಮಿಗಳು ಏನ್ ಮಾಡಬೇಕು. ಕೊವಿಡ್​ನಿಂದ ಸಾಕಷ್ಟು ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರು ಏನ್ ಮಾಡುತ್ತಿದ್ದಾರೆ. ಎಲ್ಲವನ್ನು ಮಾರುತ್ತಿದ್ದಾರೆ, ಖಾಸಗೀಕರಣ ಮಾಡುತ್ತಿದ್ದಾರೆ ಎಂದು ವಿಜಯಾನಂದ ಕಾಶಪ್ಪನವರ್ ಬಿಜೆಪಿ ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಸರ್ಕಾರ ಮತ್ತು ಪಂಚಮಸಾಲಿ ಸಮುದಾಯ ನನಗೆ ಎರಡು ಕಣ್ಣುಗಳಿದ್ದಂತೆ: ಸಿಸಿ ಪಾಟೀಲ್

ಇದನ್ನೂ ಓದಿ: ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ಪರಾಮರ್ಶನೆಗೆ ಉನ್ನತ ಮಟ್ಟದ ಸಮಿತಿ ರಚನೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ