‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’

Reservation: ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Sep 08, 2021 | 10:22 PM

ಉಡುಪಿ: ಕರ್ನಾಟಕ ರಾಜ್ಯದಲ್ಲಿ 3 ಕೋಟಿ ಲಿಂಗಾಯತರು ಇದ್ದಾರೆ. ಆದರೆ ನಮಗೆ ಸಂವಿಧಾನಬದ್ಧ ಸವಲತ್ತುಗಳು ಇನ್ನೂ ಸಿಕ್ಕಿಲ್ಲ. ಮತ ಹಾಕಲು, ಕಂದಾಯ ಕಟ್ಟಲು ನಾವು ಸೀಮಿತರಾಗಿದ್ದೇವೆ. ವೀರಶೈವ ಲಿಂಗಾಯತರಿಗೆ 2A ಮೀಸಲಾತಿ ನೀಡಬೇಕು ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಗಿಯುತ್ತಾ ಬರುತ್ತಿದೆ. ಮೀಸಲಾತಿ ನೀಡುವುದು ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಆರಂಭಿಸ್ತೇವೆ. ಚಳವಳಿಗಳು ನಡೆಯುವಾಗ ಗೊಂದಲಗಳು ಸಹಜ. ಗೊಂದಲ ಸೃಷ್ಟಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಅಸೂಯೆ ಮನಸುಗಳಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಯಾವುದೇ ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ. ಚಳುವಳಿಗಳು ನಡೆಯುವಾಗ ಗೊಂದಲಗಳು ಸಹಜ ಆಗಿರುತ್ತದೆ. ಮುಖ್ಯಮಂತ್ರಿ, ಮಂತ್ರಿಸ್ಥಾನ ಮುಖ್ಯ ಅಲ್ಲ. ನಿಗಮಮಂಡಳಿ ಅಧ್ಯಕ್ಷ ಸ್ಥಾನ ನಾನು ಕೇಳುವುದಿಲ್ಲ. ಲಿಂಗಾಯತ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ- ಜಯಮೃತ್ಯುಂಜಯ ಸ್ವಾಮೀಜಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ