Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣ ಬಿಜೆಪಿ ಸಮಾವೇಶದಲ್ಲಿ ಕೊವಿಡ್ ನಿಯಮ ಉಲ್ಲಂಘನೆ; 5,000ಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ

ಮಾಸ್ಕ್ ಧರಿಸದೆ, ದೈಹಿಕ ಅಂತರ ಉಲ್ಲಂಘಿಸಿ ಕಾರ್ಯಕ್ರಮ ಮಾಡಲಾಗಿದೆ. ರಾಜಕೀಯ ಸಮಾರಂಭದಲ್ಲಿ 500 ಜನರು ಮಾತ್ರ ಸೇರಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗಿದೆ.

ಬಸವಕಲ್ಯಾಣ ಬಿಜೆಪಿ ಸಮಾವೇಶದಲ್ಲಿ ಕೊವಿಡ್ ನಿಯಮ ಉಲ್ಲಂಘನೆ; 5,000ಕ್ಕೂ ಹೆಚ್ಚು ಜನರನ್ನು ಸೇರಿಸಿ ಕಾರ್ಯಕ್ರಮ
ಬಸವಕಲ್ಯಾಣದಲ್ಲಿ ಬಿಜೆಪಿ ಸಮಾವೇಶ
Follow us
TV9 Web
| Updated By: ganapathi bhat

Updated on:Apr 05, 2022 | 12:55 PM

ಬೀದರ್: ಮುಂಬರುವ ಉಪಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಪ್ರಚಾರ ಭರದಿಂದ ಸಾಗುತ್ತಿದೆ. ಏಪ್ರಿಲ್ 17ರಂದು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಬಿಜೆಪಿ ಸಮಾವೇಶ ನಡೆಸಿದೆ. ಶಾಂತಿನಿಕೇತನ ಶಾಲೆಯ ಮೈದಾನದಲ್ಲಿ ಬೃಹತ್​​ ಸಮಾವೇಶ ನಡೆಸಲಾಗಿದೆ.

ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ಪರ ಬಿಜೆಪಿ ಪ್ರಚಾರ ಸಮಾವೇಶ ನಡೆಸಿದ್ದು, ಆಡಳಿತಾರೂಢ ಬಿಜೆಪಿ ಸಮಾವೇಶದಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ನಿನ್ನೆಯಷ್ಟೇ ಕಠಿಣ ನಿಯಮಾವಳಿಗಳನ್ನು ಸೂಚಿಸಿತ್ತು. ಸೂಚಿತ ಕೊವಿಡ್-19 ಮಾರ್ಗದರ್ಶಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದೂ ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದರು. ಆದರೆ, ಬೀದರ್ ಬಸವಕಲ್ಯಾಣದಲ್ಲಿ ಆಡಳಿತ ಪಕ್ಷವೇ ಸರ್ಕಾರದ ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ಸಮಾವೇಶ ನಡೆಸಿದೆ.

ಮಾಸ್ಕ್ ಧರಿಸದೆ, ದೈಹಿಕ ಅಂತರ ಉಲ್ಲಂಘಿಸಿ ಕಾರ್ಯಕ್ರಮ ಮಾಡಲಾಗಿದೆ. ರಾಜಕೀಯ ಸಮಾರಂಭದಲ್ಲಿ 500 ಜನರು ಮಾತ್ರ ಸೇರಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. 500 ಜನರ ಬದಲು 5,000ಕ್ಕೂ ಹೆಚ್ಚು ಜನರನ್ನು ಸೇರಿಸಿ ಬಿಜೆಪಿ ಸಮಾವೇಶ ನಡೆಸಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಭಗವಂತ ಖೂಬಾ ಸೇರಿ ಹಲವು ನಾಯಕರು ಸಮಾವೇಷದಲ್ಲಿ ಭಾಗಿಯಾಗಿದ್ದಾರೆ.

ತಹಶೀಲ್ದಾರ್ ನಾಗಯ್ಯ ಹಿರೇಮಠ್ ಪ್ರತಿಕ್ರಿಯೆ ಸಮಾವೇಶದಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲಿಸಲು ಸೂಚಿಸಲಾಗಿತ್ತು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲಿಸಬೇಕು ಎಂದು ಹೇಳಲಾಗಿತ್ತು. ನಿಯಮಾನುಸಾರ ಕಾರ್ಯಕ್ರಮ ನಡೆಸಬೇಕು ಎಂಬ ಸೂಚನೆಯೆ ಮೇರೆಗೆ ಸಮಾವೇಶ ನಡೆಸಲು ಅನುಮತಿ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ ಕೊರೊನಾ ನಿಯಮಾವಳಿ ಪಾಲಿಸದಿದ್ದ ಬಗ್ಗೆ ವಿಡಿಯೋ ಸರ್ವೈವಲೆನ್ಸ್ ತಂಡ ಪರಿಶೀಲನೆ ನಡೆಸಲಿದೆ. ಕಾರ್ಯಕ್ರಮದ ವಿಡಿಯೋ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಬಸವಕಲ್ಯಾಣದ ತಹಶೀಲ್ದಾರ್ ನಾಗಯ್ಯ ಹಿರೇಮಠ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

BASAVAKALYANA BJP SAMAVESHA PEOPLE

ಬಿಜೆಪಿ ಸಮಾವೇಶದಲ್ಲಿ ಸಾವಿರಾರು ಜನ ಭಾಗಿಯಾದರು

ನಾಮಪತ್ರ ಹಿಂಪಡೆದ ಎನ್​ಸಿಪಿ ಅಭ್ಯರ್ಥಿ ಎಂ.ಜಿ.ಮುಳೆ ಏಪ್ರಿಲ್ 17ರಂದು ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಿದ್ದ ಎನ್​ಸಿಪಿ ಅಭ್ಯರ್ಥಿ ಎಂ.ಜಿ.ಮುಳೆ ಬಿಜೆಪಿ ಒತ್ತಡಕ್ಕೆ ಮಣಿದು ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಮಾಜಿ ಶಾಸಕ, ಮರಾಠ ಸಮುದಾಯದ ಪ್ರಭಾವಿ ಮುಖಂಡ ಎಂ.ಜಿ.ಮುಳೆ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ನಾಮಪತ್ರ ಹಿಂಪಡೆದ ಬಗ್ಗೆ ಟಿವಿ9ಗೆ ಎಂ.ಜಿ.ಮುಳೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಎಚ್ಚರ, ಎಚ್ಚರಾ.. ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದರೆ ಒಂದೆರಡು ವರ್ಷ ಜೈಲು ಶಿಕ್ಷೆ ಗ್ಯಾರಂಟಿ

ಇದನ್ನೂ ಓದಿ: ದೇಶದಲ್ಲಿ ಇಂದು 89 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲು; 714 ಮಂದಿ ಸಾವು

Published On - 4:20 pm, Sat, 3 April 21

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ