Breaking News ಕರ್ನಾಟಕ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ಕರ್ನಾಟಕ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (Dearness Allowance)ಹೆಚ್ಚಳ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಅಕ್ಟೋಬರ್.07) ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು 1 ಜುಲೈ 2022ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಸರ್ಕಾರ ಅನುಮೋದಿಸಿದೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka) October 7, 2022
ಈ ಹಿಂದೆ ಸಹ ಬೊಮ್ಮಾಯಿ ಸರ್ಕಾರ ತನ್ನ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಿತ್ತು. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಅವರು 2022 ಏಪ್ರಿಲ್ 5ರಂದು ಟ್ವೀಟ್ ಮಾಡಿದ್ದರು.
ತುಟ್ಟಿ ಭತ್ಯೆ ಭಾರತದಲ್ಲಿ ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ನೀಡಲಾಗುತ್ತೆ.
Published On - 5:40 pm, Fri, 7 October 22