AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿ ಜನರ ಆಹವಾಲು ಆಲಿಸಿದರು. ಈ ವೇಳೆ ಬೊಮ್ಮಾಯಿ ಅವರು ಭಾವುಕ ಮಾತುಗಳನ್ನಾಡಿದ್ದಾರೆ.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ
TV9 Web
| Edited By: |

Updated on:Dec 19, 2023 | 5:40 PM

Share

ಹಾವೇರಿ, (ಡಿಸೆಂಬರ್, 19): ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj bommai)  ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿದ್ದು, ಶಿಗ್ಗಾಂವಿಯಲ್ಲಿಂದು ಸಾರ್ವಜನಿಕರ ಅಹವಾಲು ಆಲಿಸಿದರು. ಇದೇ ವೇಳೆ ಮಾತನಾಡಿದ ಬೊಮ್ಮಾಯಿ, ಎರಡೂವರೆ ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಮಂಡಿ ನೋವಿನ ಸಮಸ್ಯೆಯಿಂದ ಆಪರೇಷನ್​ ಮಾಡಿಸಬೇಕಿತ್ತು. ಮೊದಲು ಹೃದಯ ತಪಾಸಣೆ ಮಾಡಿಸಿದಾಗ ಸ್ವಲ್ಪ ಸಮಸ್ಯೆಯಾಗಿತ್ತು. ಹಾಗಾಗಿ ಹೃದಯಕ್ಕೆ ತೊಂದರೆ ಆಗದಂತೆ ಸ್ಟಂಟ್ ಅಳವಡಿಸಲಾಗಿದೆ. ಹೃದಯ ಸಮಸ್ಯೆ ಇರುವುದು ನನಗೆ ಗೊತ್ತೇ ಇರಲಿಲ್ಲ ಎಂದು ಭಾವುಕರಾದರು.

ಮಂಡಿ ಆಪರೇಷನ್ ಮಾಡಿಸಲು ಹೋದಾಗ ಸಮಸ್ಯೆ ಗೊತ್ತಾಗಿದೆ. ಶಿಗ್ಗಾಂವಿ ಕ್ಷೇತ್ರದ ಜನರ ಅಶೀರ್ವಾದದಿಂದ ಬದುಕಿ ಬಂದಿದ್ದೇನೆ. ನಮ್ಮ ಕ್ಷೇತ್ರದ ಜನರ ಜೊತೆಗೆ ನನಗೆ ಅವಿನಾಭಾವ ಸಂಬಂಧವಿದೆ. ಒಂದೇ ಕುಟುಂಬ ಸದಸ್ಯರಾಗಿ ಜೀವನ ಮಾಡ್ತಿದ್ದೇವೆ. ನನ್ನ ಕೊನೆಯ ಉಸಿರು ಇರುವವರಿಗೆ ಹೀಗೆ ಮುಂದುವರೆಯುತ್ತೆ. ಮುಂದಿನ ಜನ್ಮ ಅಂತ ಇದ್ರೆ ಶಿಗ್ಗಾಂವಿ ಮತ್ತು ಸವಣೂರು ಮಣ್ಣಿನಲ್ಲಿ ಹುಟ್ಟುವ ಭಾಗ್ಯ ಬರಲಿ. ಈ ಜ‌ನರ ನಡುವೆ ಬೆರೆತು ಬದುಕು ಕಟ್ಟಿಕೊಳ್ಳುವ ಅವಕಾಶ ಸಿಗಲಿ. ನಾವು ಮಾತನಾಡಬಾರದು, ನಮ್ಮ ಕೆಲಸಗಳು ಮಾತನಾಡಬೇಕು. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನ ಮಾಡಿದ್ದೇವೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಇದನ್ನೂ ಓದಿ: ದೂರವಾಣಿ ಮೂಲಕ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬಸವರಾಜ ಬೊಮ್ಮಾಯಿ ಅವರು  ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಆಪರೇಷನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋಗಿದ್ದರು. ಆ ವೇಳೆ ಹೃಯದ ಸಮಸ್ಯೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ ಬದಲಾಗಿ ಅವರಿಗೆ ಮೊದಲು ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Tue, 19 December 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?