ನ.11ರಂದು ಬೆಂಗಳೂರಿಗೆ ಮೋದಿ: ಪ್ರಧಾನಿ ಕಾರ್ಯಕ್ರಮಗಳ ಮಾಹಿತಿ ನೀಡಿದ ಬೊಮ್ಮಾಯಿ

| Updated By: ರಮೇಶ್ ಬಿ. ಜವಳಗೇರಾ

Updated on: Oct 27, 2022 | 5:14 PM

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಮೋದಿ ಭಾಗವಹಿಸಲಿರುವ ಕಾರ್ಯಕ್ರಮಗಳ ಮಾಹಿತಿಯನ್ನು ಬೊಮ್ಮಾಯಿ ನೀಡಿದ್ದಾರೆ.

ನ.11ರಂದು ಬೆಂಗಳೂರಿಗೆ ಮೋದಿ: ಪ್ರಧಾನಿ ಕಾರ್ಯಕ್ರಮಗಳ ಮಾಹಿತಿ ನೀಡಿದ ಬೊಮ್ಮಾಯಿ
Bommai And Modi
Follow us on

ಬೆಂಗಳೂರು: ಇದೇ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಂಗಳೂರಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಅ.27) ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಮೋದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನಿ ಮೋದಿಯವರು ನವೆಂಬರ್ 11 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್‌ಪ್ರೆಸ್‍ಗೆ (Vande Bharat Express) ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಅ 30ಕ್ಕೆ ಕಲಬುರ್ಗಿಯಲ್ಲಿ ಬೃಹತ್ ಒಬಿಸಿ ಸಮಾವೇಶ, 5 ಲಕ್ಷ ಜನ ಸೇರುವ ನಿರೀಕ್ಷೆ: ಸಚಿವ ಸುನಿಲ್ ಕುಮಾರ್

ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‍ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.

ಇನ್ನು ಕಾರ್ಯಕ್ರಮದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೂರ್ವ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Published On - 5:12 pm, Thu, 27 October 22