AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಗೇಮಿಂಗ್ ನಿಷೇಧಿಸುವ ಕಾನೂನನ್ನು ಇದೀಗ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕದಲ್ಲಿ ಆನ್‌ಲೈನ್ ಗ್ಯಾಂಬ್ಲಿಂಗ್ ವಿರುದ್ಧ ತಂದಿರುವ ಕಾನೂನನ್ನು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ವಿಭಾಗೀಯ ನ್ಯಾಯಪೀಠ ಎತ್ತಿ ಹಿಡಿದಿದೆ. ಈ ಬಗ್ಗೆ ಬಸವರಾಜ್ ಬೊಮ್ಮಾಯಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ
ಸುಪ್ರಿಂಕೋರ್ಟ್, ಬಸವರಾಜ್ ಬೊಮ್ಮಾಯಿ
ರಮೇಶ್ ಬಿ. ಜವಳಗೇರಾ
|

Updated on: May 29, 2026 | 4:01 PM

Share

ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ (BJP Governmnet)  ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ (Online Gaming)  ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಜೆಬಿ ಪರ್ಡಿವಾಲಾ ಮತ್ತು ಆರ್. ಮಹದೇವನ್ ಅವರ ಡಬಲ್ ಬೆಂಚ್ ನನ್ನ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಸರ್ಕಾರ ಆನ್‌ಲೈನ್ ಗ್ಯಾಂಬ್ಲಿಂಗ್ ವಿರುದ್ಧ ತಂದಿರುವ ಕಾನೂನನ್ನು ಎತ್ತಿ ಹಿಡಿದಿದ್ದಾರೆ. ನನ್ನ ಸರ್ಕಾರ ಇದ್ದಾಗ ಕರ್ನಾಟಕ ಪೊಲಿಸ್ ಅಮೆಂಡ್‌ಮೆಂಟ್ ಆಕ್ಟ್ 2021 ತಂದಿದ್ದು, ಅದರಲ್ಲಿ ಕನಾಟಕ ಪೊಲಿಸ್ ಆಕ್ಟ್ 1963ಗೆ ಹಲವಾರು ಬದಲಾವಣೆ ತಂದು ಗ್ಯಾಂಬ್ಲಿಂಗ್ ವ್ಯಾಖ್ಯಾನ ವಿಸ್ತರಣೆ ಮಾಡಿ ಆನ್‌ಲೈನ್‌ ಗೇಮಿಂಗ್‌ನ್ನು ಜಾಮೀನು ರಹಿತ ಅಪರಾಧ ಅಂತ ಕಾನೂನು ತಿದ್ದುಪಡಿ ತಂದು ಆನ್‌ಲೈನ್‌ಗೆ ಸಂಪೂರ್ಣ ಕಡಿವಾಣ ಹಾಕಲು ಕಾನೂನು ತಂದಿದ್ದೇವು. ಅದಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಅದರ ವಿರುದ್ಧ ನಾವು ಸುಪ್ರೀಂ ಕೊರ್ಟ್‌ಗೆ ಹೋಗಿದ್ದೇವು. ಈಗ ಸುಪೀಂ ಕೋರ್ಟ್ ನಮ್ಮ ಕಾನೂನು ಮತ್ತು ತಮಿಳುನಾಡಿನ ಕಾನೂನು ಎತ್ತಿ ಹಿಡಿಯುವ ಮೂಲಕ ಆನ್‌ಲೈನ್ ಗೇಮಿನಿಂದ ಹಲವಾರು ಜನರು ಮತ್ತು ಬಡವರು ಆರ್ಥಿಕವಾಗಿ ನಷ್ಟ ಹೊಂದಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶಕ್ಕೆ ಜಯ ಸಿಕ್ಕಿದೆ.

ಇದನ್ನೂ ಓದಿ: ಆನ್​ಲೈನ್​ ಬೆಟ್ಟಿಂಗ್​, ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ: ಬರಲಿದೆ ಹೊಸ ಕಾನೂನು

ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತ ಮಾಡುತ್ತೇನೆ. ಈಗಿರುವ ಕರ್ನಾಟಕ ಸರ್ಕಾರ ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಆನ್‌ಲೈನ್ ಗೆಮಿಂಗ್ ತಡೆಗಟ್ಟಿ ಹಲವಾರು ಸಂಸಾರಗಳು ತೊಂದರೆಗೆ ಒಳಗಾಗುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ