ನೀರಾವರಿ ಯೋಜನೆಗಳು, ಲಸಿಕೆ ನೀಡಿಕೆ ಪ್ರಮಾಣ ಹೆಚ್ಚಿಸುವ ಕುರಿತು ಚರ್ಚೆ: ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ
Basavaraj Bommai: ದೆಹಲಿ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲುಪಿದ್ದಾರೆ. ಈ ವೇಳೆ, ಸಿಎಂ ಬೊಮ್ಮಾಯಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದ್ದಾರೆ. ಸಿಎಂ ಜೊತೆ ಸಚಿವರಾದ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ ಇದ್ದಾರೆ.
ದೆಹಲಿ: ಕರ್ನಾಟಕ ರಾಜ್ಯದ ಯೋಜನೆಗಳ ಸಂಬಂಧ ಚರ್ಚಿಸಲು ಬಂದಿದ್ದೇನೆ. ಕೃಷಿ ಸಚಿವರು, ಜಲಶಕ್ತಿ ಸಚಿವರನ್ನು ಭೇಟಿಯಾಗುತ್ತೇನೆ. ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ಮಾಡಲಿದ್ದೇನೆ. ಮೇಕೆದಾಟು, ಮಹದಾಯಿ ಯೋಜನೆಗಳ ಕುರಿತು ಚರ್ಚಿಸುತ್ತೇನೆ. ನಾಳೆ (ಆಗಸ್ಟ್ 26) ಬೆಳಗ್ಗೆ ಲೀಗಲ್ ಟೀಂ ಜೊತೆ ಚರ್ಚೆ ಮಾಡುತ್ತೇವೆ ಎಂದು ದೆಹಲಿಯಲ್ಲಿ ಬುಧವಾರ (ಆಗಸ್ಟ್ 25) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅದಾದ ಬಳಿಕ ನಿತಿನ್ ಗಡ್ಕರಿ ಹಾಗೂ ವಿತ್ತ ಸಚಿವರನ್ನು ಭೇಟಿಯಾಗ್ತೇವೆ. ಆರೋಗ್ಯ ಸಚಿವರನ್ನು ಭೇಟಿಯಾಗಿ ಲಸಿಕೆ ಕುರಿತು ಚರ್ಚೆ ನಡೆಸುತ್ತೇನೆ. ರಾಜ್ಯಕ್ಕೆ ಹೆಚ್ಚು ಲಸಿಕೆ ನೀಡುವ ಬಗ್ಗೆ ಮಾತನಾಡುತ್ತೇನೆ. ಸೆಪ್ಟಂಬರ್ 5 ಕ್ಕೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಿನ್ನೆಲೆಯಲ್ಲಿ, ಇಂದು ಕೃಷಿ ಇಲಾಖೆ ಸಚಿವರನ್ನು ಭೇಟಿ ಮಾಡಲಿದ್ದೇನೆ. ಕೃಷಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮಕ್ಕೆ ಆದೇಶ ನೀಡಲಾಗುವುದು ಎಂದು ಹೇಳಿದ್ದಾರೆ.
ದೆಹಲಿ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲುಪಿದ್ದಾರೆ. ಈ ವೇಳೆ, ಸಿಎಂ ಬೊಮ್ಮಾಯಿಗೆ ಆರೋಗ್ಯ ಸಚಿವ ಸುಧಾಕರ್ ಸಾಥ್ ನೀಡಿದ್ದಾರೆ. ಸಿಎಂ ಜೊತೆ ಸಚಿವರಾದ ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ ಇದ್ದಾರೆ.
ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಲಭಿಸಿದೆ. ಹಾಸನ, ಮಂಡ್ಯ, ಮೈಸೂರು ಭಾಗದಲ್ಲಿ ಪಕ್ಷಕ್ಕೆ ವೇಗ ಸಿಗಲಿದೆ. ಪಕ್ಷ ಸಂಘಟನೆಗೆ ವೇಗ ಸಿಗಬೇಕು ಎಂಬುದು ಇತ್ತು. ಮೊದಲ ಪ್ರಯತ್ನದಲ್ಲೇ ಮೇಯರ್ ಸ್ಥಾನ ಗೆದ್ದಿದ್ದೇವೆ ಎಂದು ಮಂಡ್ಯದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು (ಆಗಸ್ಟ್ 25) ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಜಗಳ ಆರಂಭ ಆಗಿದೆ. ಯಾರು ಸಿಎಂ ಎಂಬ ವಿಚಾರವಾಗಿ ಜಗಳ ಆರಂಭವಾಗಿದೆ. ಹೀಗಾಗಿ ಕಾಂಗ್ರೆಸ್ ಪದಾಧಿಕಾರಿಗಳನ್ನೇ ನೇಮಕ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: BJP: ನಾಗರಿಕರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಯೋಜನೆ ಮೂಲಕ ಪಕ್ಷ ಸಂಘಟನೆಗೆ ಹೊರಟ ಬಿಜೆಪಿ