AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್​ನ್ಯೂಸ್: ಸಹಾಯಧನ 1000 ರೂ.ಗೆ ಹೆಚ್ಚಳ, ಸದನದಲ್ಲಿ ಬೊಮ್ಮಾಯಿ ಘೋಷಣೆ

ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘೋಷಿಸಿದ್ದ ಸಹಾಯಧನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿಸಿದ್ದಾರೆ. ಬಜೆಟ್​ ಮೇಲೆ ಉತ್ತರ ನೀಡುವಾಗ ಆದೇಶ ಹೊರಡಿಸಿದ್ದಾರೆ.

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್​ನ್ಯೂಸ್: ಸಹಾಯಧನ 1000 ರೂ.ಗೆ ಹೆಚ್ಚಳ, ಸದನದಲ್ಲಿ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
ರಮೇಶ್ ಬಿ. ಜವಳಗೇರಾ
|

Updated on:Feb 23, 2023 | 6:09 PM

Share

ಬೆಂಗಳೂರು: ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ (Landless Female Farm Workers) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸಿಹಿ ಸುದ್ದಿ ನೀಡಿದ್ದಾರೆ. ಮೊನ್ನೇ ಅಷ್ಟೇ 2023-24ನೇ ಸಾಲಿನ ಬಜೆಟ್‌ನಲ್ಲಿ ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂ. ಸಹಾಯಧನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದ್ರೆ, ಇಂದು(ಫೆಬ್ರುವರಿ 23) ಸದನದಲ್ಲಿ ಬೊಮ್ಮಾಯಿ ಸಹಾಯಧನವನ್ನು 1000 ರೂ. ನೀಡುವುದಾಗಿ ಘೋಷಿಸಿದರು.

ಇಂದು (ಫೆಬ್ರುವರಿ 23) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮೇಲಿನ ಉತ್ತರ ವೇಳೆ ನೀಡುವ ವೇಳೆ ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಬಜೆಟ್ ನಲ್ಲಿ ಘೋಷಿಸಿದ್ದ 500 ರೂ. ಗಳನ್ನು 1000 ರೂ. ಗೆ ಏರಿಕೆಯಾಗಿದೆ.

ವಿದ್ಯಾವಾಹಿನಿ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದೇವೆ. ಉಚಿತ ಶಿಕ್ಷಣ ಎಸ್​ಎಸ್​​ಎಲ್​ಸಿಯಿಂದ ಡಿಗ್ರಿವರೆಗೆ ವಿಸ್ತರಿಸಿದ್ದೇವೆ. ಇದು ಐತಿಹಾಸಿಕ ನಿರ್ಧಾರವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಸಮಸ್ಯೆ ಬಗೆಹರಿಸಲು ಶೆಡ್ಯೂಲ್ ಹೆಚ್ಚಿಸಲಾಗಿದೆ. 1 ಸಾವಿರ ಘೋಷಿಸಿದ್ದ ಬಸ್​​ಗಳ ಶೆಡ್ಯೂಲ್ 2 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಜೆಟ್ ಮೇಲಿನ ಉತ್ತರ ವೇಳೆ ಸಿಎಂ ಬೊಮ್ಮಾಯಿ ಘೋಷಿಸಿದರು.

ನಾವು ಮಂಡಿಸಿರುವ ಬಜೆಟ್ ಕಾರ್ಯಕ್ರಮ ಎರಡು ರೀತಿ ಇದೆ. ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಮೂಲಸೌಕರ್ಯ ಸರಿದೂಗಿಸಿಕೊಳ್ಳಬೇಕು. ಸರಿದೂಗಿಸಿಕೊಂಡು ಹೋದ್ರೆ ಮಾತ್ರ ಕರ್ನಾಟಕ ಕಲ್ಯಾಣ ಆಗಲಿದೆ. ಕೃಷಿ ಕ್ಷೇತ್ರ ನಂಬಿಕೊಂಡು 60% ಜನ ಇದ್ದಾರೆ. 130 ಕೋಟಿ ಜನಸಂಖ್ಯೆಗೂ ಆಹಾರ ನೀಡುವ ಶಕ್ತಿ ನಮಗಿದೆ. ಆಹಾರ ಕೊಡುವ ರೈತನಿಗೆ ಶಕ್ತಿ ತುಂಬುವ ಪಾಲಿಸಿ ಬರಬೇಕಿದೆ. ಆಗ ಮಾತ್ರ ಕೃಷಿ ಕ್ಷೇತ್ರ ಸದೃಢವಾಗಿರಲಿದೆ ಎಂದು ಹೇಳಿದರು.

ರೈತನ ಆರೋಗ್ಯ ದೃಷ್ಟಿಯಿಂದ ಯಶಸ್ವಿನಿ ಯೋಜನೆ ತರಲಾಗಿದೆ. ಸಾಲದ ವ್ಯಾಪ್ತಿ ಮಿತಿ 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ, 5 ಲಕ್ಷದವರೆಗೂ 0% ಬಡ್ಡಿ ಸಾಲ ನೀಡಲಾಗುತ್ತಿದೆ. ಭೂಸಿರಿ ಯೋಜನೆಯಡಿ ಸರ್ಕಾರದಿಂದ 2,500 ಹಣ ವಿತರಣೆ ಹಾಗೂ ನಬಾರ್ಡ್​​ನಿಂದ 7,500 ರೂ. ಕೊಡಲಾಗುವುದು ಎಂದು ತಿಳಿಸಿದರು.

Published On - 6:02 pm, Thu, 23 February 23

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?