Karnataka New CM: ಬಸವರಾಜ ಬೊಮ್ಮಾಯಿ ಕರ್ನಾಟಕದ ಹೊಸ ಮುಖ್ಯಮಂತ್ರಿ

Karnataka New Chief Minister: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ.

Karnataka New CM: ಬಸವರಾಜ ಬೊಮ್ಮಾಯಿ ಕರ್ನಾಟಕದ ಹೊಸ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9kannada Web Team

| Edited By: guruganesh bhat

Jul 27, 2021 | 8:28 PM

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ (New Karnataka Chief Minister) ಹಾವೇರಿಯ ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ (Basavaraj Bommai) ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿಯವರ ಪುತ್ರನಾಗಿರುವ ಅವರು, ಜನತಾದಳದಿಂದ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಜವಾಬ್ಧಾರಿ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಜತೆಗೆ 2008ರಿಂದ ಸತತ ಮೂರು ಬಾರಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಜಗದೀಶ ಶೆಟ್ಟರ ಸಿಎಂ ಆಗಿದ್ದ ವೇಳೆ ಐದು ವರ್ಷ ಜಲಸಂಪನ್ಮೂಲ ಖಾತೆ ನಿರ್ವಹಣೆ ಮಾಡಿದ ಅನುಭವ ಹೊಂದಿದ್ದಾರೆ. ಅಲ್ಲದೇ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ, ಶಾಸನ ರಚನಾ ಸಚಿವ ಹಾಗೂ ಹಾವೇರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ನಿರ್ವಹಿಸಿದ ಅನುಭವಗಳನ್ನು ಬಸವರಾಜ ಬೊಮ್ಮಾಯಿ (Baaavaraj Bommai Wiki) ಹೊಂದಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು. ಗೋವಿಂದ ಕಾರಜೋಳ ಬಸವರಾಜ ಬೊಮ್ಮಾಯಿ ಹೆಸರನ್ನು ಅನುಮೋದಿಸಿದರು. ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದರು. (Who is Basavaraj Bommai)

ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ತಿಳಿಸಿದರು. ಸಂಸದೀಯ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಿದ್ದಾರೆ. ನನ್ನ ಹೆಸರನ್ನು ಸೂಚಿಸಿ ಬಿ.ಎಸ್‌ ಯಡಿಯೂರಪ್ಪ ಆಶೀರ್ವಾದ ಮಾಡಿದ್ದಾರೆ. ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವಕ ಧನ್ಯವಾದಗಳು. ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ರಾಜ್ಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವೆ. ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಅವರು ನೂತನ ಮುಖ್ಯಮಂತ್ರಿ (Karnataka New Chief Minister) ಆದ ನಂತರ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: 

ಮಾಸ್​ ಲೀಡರ್​ಗಳು ಮತ್ತು ಬಿಜೆಪಿಯ ಹೊಸ ಹೈಕಮಾಂಡ್​ ಸಂಸ್ಕೃತಿ: ಯಡಿಯೂರಪ್ಪ ಎಂಬ ಜೀವಂತ ಅಧ್ಯಾಯ

BS Yediyurappa Photos: ಧೀಮಂತ ನಾಯಕ ಬಿಎಸ್ ಯಡಿಯೂರಪ್ಪ ರಾಜಕೀಯ ಜೀವನದ ಚಿತ್ರನೋಟ

(Basavaraj Bommai is New CM Of Karnataka Announces BJP High Command Arun Singh Dharmendra Pradhan Kishan Reddy)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada